ಗ್ಯಾಂಗ್‌ರೇಪ್ ಆರೋಪಿಯ ಮನೆಯನ್ನು ಬುಲ್ಡೋಜರ್ ಮೂಲಕ ಧ್ವಂಸ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿಗಳು!
ಬಿಜೆಪಿ ಅಧಿಕಾರದ ರಾಜ್ಯಗಳಲ್ಲಿ ಅಪರಾಧ ಕೃತ್ಯಗಳನ್ನು ಮಾಡುವ ಆರೋಪಿಗಳಿಗೆ ಬುಲ್ಡೋಜರ್ ನ್ಯಾಯ ಪ್ರಕ್ರಿಯೆ ಜೋರಾಗಿದೆ. ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಗ್ಯಾಂಗ್‌ರೇಪ್ ಆರೋಪಿಯ ಅಕ್ರಮ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಬುಲ್ಡೋಜರ್ ಬಳಸಿ ಧ್ವಂಸ ಮಾಡಿದ್ದಾರೆ.
ಭೋಪಾಲ್ (ಮಾ.11): ಸಾಮೂಹಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯ ಅಕ್ರಮ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಬುಲ್ಡೋಜರ್ ಬಳಸಿ ಧ್ವಂಸ ಮಾಡಿದ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಆ ಮೂಲಕ ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲಿ ಬುಲ್ಡೋಜರ್ ನ್ಯಾಯ ಮುಂದುವರಿದಂತಾಗಿದೆ.ತಂಡದ ನೇತೃತ್ವ ವಹಿಸಿದ್ದ ಅಧಿಕಾರಿ ಇದೊಂದು ಘೋರ ಅಪರಾಧ ಮತ್ತು ಪೊಲೀಸರು "ಒಳ್ಳೆಯ ಕೆಲಸ" ಮಾಡಿದ್ದಾರೆ, ಅಂತಹ ಕ್ರಮಗಳು ಅಂತಹ ಶಿಕ್ಷೆಗೆ ಅರ್ಹವಾಗಿವೆ ಎಂದು ಹೇಳಿದರು. ರಾಜಧಾನಿ ಭೋಪಾಲ್‌ನಿಂದ ಸುಮಾರು 250 ಕಿಮೀ ದೂರದಲ್ಲಿರುವ ದಾಮೋಹ್‌ನಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆ ನಡೆದಿತ್ತು. ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ನಾಲ್ಕನೆಯವನಾದ ಕೌಶಲ್ ಕಿಶೋರ್ ಚೌಬೆ ಪರಾರಿಯಾಗಿದ್ದಾನೆ. ಆಕ್ರಮಿತ ಜಮೀನಿನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹಾಗಾಗಿ ಈ ಮನೆಯನ್ನು ಬುಲ್ಡೋಜರ್ ಬಳಸಿ ಕೆಡವಲಾಗಿದೆ ಎಂದು ತಿಳಿಸಿದ್ದಾರೆ.
"ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಪರಾರಿಯಾಗಿದ್ದಾನೆ. ಕೌಶಲ್ ಕಿಶೋರ್ ಚೌಬೆ ಅವರು ಅಕ್ರಮ ಭೂಮಿಯಲ್ಲಿ ಮನೆಯನ್ನ ನಿರ್ಮಾಣ ಮಾಡಿದ್ದರು. ಮಹಿಳಾ ಅಧಿಕಾರಿಗಳ ಗುಂಪಿನಿಂದ ಬುಲ್ಡೋಜರ್ ಕಾರ್ಯನಿರ್ವಹಣೆ ಮಾಡಿ ಮನೆಯನ್ನು ಧ್ವಂಸ ಮಾಡಲಾಗಿದೆ. ಮಹಿಳಾ ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ ಮತ್ತು ಇಂತಹ ಕ್ರಮಗಳು ಮುಂದುವರೆಯಬೇಕು" ಎಂದು ರಾಣೆಯ ಠಾಣಾಧಿಕಾರಿ ಪ್ರಶಿತಾ ಕುರ್ಮಿ ಹೇಳಿದ್ದಾರೆ.