ಕಾರ್ಯಕ್ರಮಕ್ಕೆ ತೆರಳಿ ಮರಳುತ್ತಿದ್ದ ವೇಳೆ ಪಲ್ಟಿಯಾದ ಪಿಕ್‌ಅಪ್, 14 ಸಾವು, 21 ಮಂದಿಗೆ ಗಾಯ!
ಭೀಕರ ಅಪಘಾತದಲ್ಲಿ 14 ಮಂದಿ ಸ್ಥಳದಲ್ಲೆ ಮೃತಪಟ್ಟಿದ್ದು, 21 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಕುಟುಂಬಸ್ಥರು ಇದೀಗ ಆಸ್ಪತ್ರೆ ದೌಡಾಯಿಸಿದ್ದಾರೆ.
ಇಂದೋರ್(ಫೆ.29) ಜನರನ್ನು ತುಂಬಿಕೊಂಡು ಸಾಗುತ್ತಿದ್ದ ಪಿಕ್ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಧ್ಯಪ್ರದೇಶದ ದಿಂದೋರಿಯಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 14 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು 21 ಮಂದಿಗೆ ಗಂಬೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಯಕ್ರಮಕ್ಕೆ ತೆರಳಿ ಮರಳುತ್ತಿದ್ದ ವೇಳೆ ಗ್ರಾಮಸ್ಥರ ಪಿಕ್‌ಅಪ್ ವಾಹನ ಪಲ್ಟಿಯಾಗಿದೆ. ತಡ ರಾತ್ರಿ 1.30ರ ವೇಳೆಗೆ ಈ ಘಟನೆ ನಡೆದಿದೆ. ಭೀಕರ ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತು ಆಘಾತ ವ್ಯಕ್ತಪಡಿಸಿದ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ ಮೃತರ ಕುಟುಂಬದ ಜೊತೆ ಸರ್ಕಾರಲನಿಲ್ಲಲಿದೆ. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಬೆಂಗಳೂರು: ಫ್ಲೈಓವರ್ ಹಿಟ್ ಅಂಡ್ ರನ್, ಇಬ್ಬರು ಬೈಕ್ ಸವಾರರು ಸಾವು
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಭರವಸೆ ನೀಡಿದ್ದಾರೆ. ಸ್ಥಳೀಯ ಜಿಲ್ಲಾಡಳಿತಕ್ಕೆ ಎಲ್ಲಾ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಶಹಪುರ ಕಮ್ಯೂನಿಟಿ ಕೇಂದ್ರದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಆಘಾತ ವ್ಯಕ್ತಪಡಿಸಿದ್ದಾರೆ.ಘಟನೆ ತೀವ್ರ ದುಖ ತಂದಿದೆ. ಮೃತರ ಕುಟುಂಬಕ್ಕೆ ಸಂತಾಪಗಳನ್ನು ಸೂಚಿಸಿದ ಮುರ್ಮು, ಗಾಯಾಳುಗಳು ಶೀಘ್ರ ಗುಣಮುಖರಾಗಲು ಪ್ರಾರ್ಥಿಸಿದ್ದಾರೆ. ಈ ಅಫಘಾತದ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ ಎಂದು ಮುರ್ಮು ಹೇಳಿದ್ದಾರೆ.
ಹಾವೇರಿ: ಬ್ಯಾಡಗಿ ಬಳಿ ಬೈಕ್‌ಗೆ ಲಾರಿ ಡಿಕ್ಕಿ, 6 ವರ್ಷದ ಬಾಲಕ ಸೇರಿ ಮೂವರ ಸಾವು
ದಿಂದೂರಿ ಜಿಲ್ಲೆಯ ದೇವಾರಿ ಗ್ರಾಮಸ್ಥರು ಪಕ್ಕದ ಗ್ರಾಮವಾಗಿರುವ ಬದ್ಜಾರ್‌ಗೆ ಕಾರ್ಯಕ್ರಮವೊಂದಕ್ಕೆ ತೆರಳಿದ್ದಾರೆ. ಸಂಜೆ ವೇಳೆ ಬದ್ಜಾರ್ ತಲುಪಿದ ಗ್ರಾಮಸ್ಥರು ಕಾರ್ಯಕ್ರಮ ಮುಗಿಸಿ ಹೊರಡುವಾಗ ತಡರಾತ್ರಿಯಾಗಿದೆ. ಗ್ರಾಮಸ್ಥರನ್ನು ಪಿಕ್‌ಅಪ್ ವಾಹನದಲ್ಲಿ ತುಂಬಿ ಮರಳಿ ದೇವಾರಿ ಗ್ರಾಮಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ. ಒಂದೇ ಪಿಕ್‌ಅಪ್ ವಾಹನದಲ್ಲಿ 35 ಮಂದಿಯನ್ನು ತುಂಬಲಾಗಿತ್ತು. ವೇಗವಾಗಿ ಸಾಗುತ್ತಿದ್ದ ಪಿಕ್ಅಪ್ ವಾಹನ ಚಾಲಕ ನಿಯಂತ್ರಣ ಕಳೆದುಕೊಂಡಿದೆ. ಇತ್ತ ಅತೀಯಾದ ಜನರನ್ನು ತುಂಬಿದ್ದ ಕಾರಣ ಪಿಕ್‌ಅಪ್ ವಾಹನ ಪಲ್ಟಿಯಾಗಿದೆ. ಹೀಗಾಗಿ ಅಪಘಾತದ ತೀವ್ರತೆಯೂ ಹೆಚ್ಚಿದೆ. ಪಿಕ್ಅಪ್ ಅಫಘಾತದ ತೀವ್ರತೆಗೆ 14 ಮಂದಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇನ್ನು 21 ಮಂದಿ ಗಾಯಗೊಂಡಿದ್ದಾರೆ.