Madikeri school fire accident: ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಯಲ್ಲಿ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ (8) ಸಜೀವ ದಹನವಾಗಿದ್ದಾನೆ. ವಿದ್ಯಾರ್ಥಿ ನಿಲಯದಲ್ಲಿದ್ದ ಉಳಿದ 51 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿದ್ದಾರೆ.
ಮಡಿಕೇರಿ (ಅ.10): ಖಾಸಗಿ ವಸತಿ ಶಾಲೆಗೆ ಮುಂಜಾನೆ ಆಕಸ್ಮಿಕ ಬೆಂಕಿ ತಗುಲಿ 2ನೇ ತರಗತಿ ವಿದ್ಯಾರ್ಥಿ ಸಜೀವವಾಗಿ ದಹನವಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಯಲ್ಲಿ ನಡೆದಿದೆ.
ವಸತಿ ಶಾಲೆಗೆ ಗುರುವಾರ ಆಕಸ್ಮಿಕ ಬೆಂಕಿ ತಗುಲಿ ಶಾಲೆಯ ಚಾವಣಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ವಿದ್ಯಾರ್ಥಿ ನಿಲಯದಲ್ಲಿದ್ದ 51 ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೊರ ಬಂದಿದ್ದು, ಎರಡನೇ ತರಗತಿ ವಿದ್ಯಾರ್ಥಿ ಪುಷ್ಪಕ್ (8) ಬೆಂಕಿಗೆ ಆಹುತಿಯಾಗಿದ್ದಾನೆ.
51 ಮಕ್ಕಳನ್ನು ಸ್ಥಳೀಯ ಹೋಂಸ್ಟೇಗೆ ಸ್ಥಳಾಂತರ ಮಾಡಲಾಗಿದೆ. ವೈದ್ಯರ ತಂಡ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು. ಉಸಿರಾಟ ಮತ್ತಿತರ ತೊಂದರೆ ಬಗ್ಗೆ ಪರಿಶೀಲಿಸಿದರು. ಭುವನ್ ಎಂಬ ವಿದ್ಯಾರ್ಥಿಗೆ ಉಸಿರಾಟ ತೊಂದರೆ ಉಂಟಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ
ಇದನ್ನೂ ಓದಿ: ಮೈಸೂರು: ಬಲೂನ್ ವ್ಯಾಪಾರಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿ ಶವ ಪತ್ತೆ! ರೇಪ್ ಅಂಡ್ ಮರ್ಡರ್ ಶಂಕೆ!
ಶಾಲೆಗೆ ತಗುಲಿದ್ದ ಬೆಂಕಿಯನ್ನು ಅಗ್ನಿಶಾಮಕ ದಳ ನಂದಿಸಿದ್ದಾರೆ. ಗುರುಕುಲ ಮಾದರಿಯಲ್ಲಿ ಉಚಿತವಾಗಿ ಈ ಆಶ್ರಮದಲ್ಲಿ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿದ್ದರಿಂದ ಈ ಆಶ್ರಮ ಶಾಲೆಗೆ ಒಳ್ಳೆಯ ಹೆಸರಿತ್ತು.
ಕಾಟಕೇರಿ ಹರಿ ಮಂದಿರ್ ವಸತಿ ಶಾಲೆಯಲ್ಲಿ ನಡೆದ ಬೆಂಕಿ ಆಕಸ್ಮಿಕದಲ್ಲಿ ಜೀವ ಕಳೆದುಕೊಂಡ ಎರಡನೇ ತರಗತಿಯ ವಿದ್ಯಾರ್ಥಿ ಪುಷ್ಪಕ್, ಭಾಗಮಂಡಲ ಸಮೀಪದ ಚೆಟ್ಟಿಮಾನಿ ನಿವಾಸಿಯಾಗಿದ್ದಾನೆ. ಈ ಮಗುವಿನ ತಾಯಿ ತ್ರಿವೇಣಿ, ಕುಂದಾಚೇರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲಕನ ತಂದೆ ಕೃಷಿಕರಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿ ಪೋಷಕರು ಆಘಾತಕ್ಕೆ ಒಳಗಾಗಿದ್ದಾರೆ.
