Asianet Suvarna News Asianet Suvarna News

ಕ್ಯಾನ್ಸರ್‌ನಿಂದ ಕುಟುಂಬ ಅನಾಥವಾಗುವ ಭಯ, ಪತ್ನಿ ಹಾಗೂ ಕಂದನ ಕೊಲೆಗೈದ ವ್ಯಕ್ತಿ ಆತ್ಮಹತ್ಯೆ!

ಕ್ಯಾನ್ಸರ್ ಜೀವಭಯದಿಂದ ಇಡೀ ಕುಟುಂಬ ದಾರುಣ ಅಂತ್ಯಕಂಡ ಘಟನೆ ಬೆಂಗಳೂರಿನಲ್ಲಿ ನಡೆದೆ. ಪತ್ನಿ ಹಾಗೂ ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಘೋರ ಕೃತ್ಯ ಎಲ್ಲರ ಕರುಳು ಹಿಂಡುತ್ತಿದೆ.

Man ailing with cancer commit suicide after killing wife and son in Bengaluru Karnataka ckm
Author
Bengaluru, First Published Aug 18, 2022, 6:32 PM IST

ಬೆಂಗಳೂರು(ಆ.18): ಇದು ಅತ್ಯಂತ ಘೋರ ಘಟನೆ.  ಪತ್ನಿ ಹಾಗೂ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದ ಶ್ರೀನಿಧಿ ಲೇಔಟ್‌ನಲ್ಲಿ ನಡೆದಿದೆ. ಮಹೇಶ್ ಎಂಬಾತ ಕ್ಯಾನ್ಸರ್‌ನಿಂದ ಬಳಲುತ್ತಿದ್ದ.  ಕ್ಯಾನ್ಸರ್‌ನಿಂದ ತಾನು ಮೃತಪಟ್ಟರೆ, ತನ್ನ ಕುಟುಂಬ ಅನಾಥವಾಗಲಿದೆ. ಅವರ ಜೀವನ ದುಸ್ತರವಾಗಲಿದೆ ಎಂಬ ಭಯದಿಂದ ಪತ್ನಿ ಹಾಗೂ ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೊಣನಕುಂಟೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕ್ಯಾನ್ಸರ್ ಜೀವ ಭಯದಿಂದ ಇಡೀ ಕುಟಂಬ ದಾರುಣ ಅಂತ್ಯಕಂಡಿದೆ.  ಪತ್ನಿ ಜ್ಯೋತಿ, ಮಗ ನಂದೀಶ್ ಗೌಡನನ್ನು ಕೊಲೆ ಮಾಡಿದ ಮಹೇಶ್, ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ದಾಸರಹಳ್ಳಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆತ್ಮಹತ್ಯೆ
ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೇತನ್‌ (25) ಆತ್ಮಹತ್ಯೆ ಮಾಡಿಕೊಂಡ ಯುವ ಅಧ್ಯಕ್ಷ. ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾರೆ. ಲಗ್ಗೆರೆ ಸಮೀಪದ ಮಾರುತಿ ನಗರದಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದ ಚೇತನ್‌ ಗುರುವಾರ ಸಂಜೆ 7ರ ಸುಮಾರಿಗೆ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದವರು ಮನೆಯಲ್ಲಿದ್ದಾಗಲೇ ತಮ್ಮ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಕುರಿತು ರಾಜಗೋಪಾಲನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಿಯಕರನೊಂದಿಗೆ ಸೌದಿಗೆ ಹಾರಿದ ಮೂರು ಮಕ್ಕಳ ತಾಯಿ; ಮಕ್ಕಳಿಗೆ ವಿಷ ಕೊಟ್ಟು ಗಂಡ ಆತ್ಮಹತ್ಯೆ

ನಿವೃತ್ತ ಉಪನ್ಯಾಸಕಿ ಆತ್ಮಹತ್ಯೆ
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಂಗಳೂರು ನಗರದ ಹೊರವಲಯದ ಅಡ್ಯಾರುಹಿಲ್ಸ್‌ ನಿವಾಸಿ, ನಿವೃತ್ತ ಉಪನ್ಯಾಸಕಿ ಭಾರತಿ ಶೆಟ್ಟಿ(60) ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜಿನ ನಿವೃತ್ತ ರಾಜ್ಯಶಾಸ್ತ್ರ ಉಪನ್ಯಾಸಕಿ ಭಾರತಿ ಶೆಟ್ಟಿಅವರು ಪತಿ ಹಾಗೂ ಪುತ್ರನೊಂದಿಗೆ ಅಡ್ಯಾರ್‌ ಬಳಿ ವಾಸಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಂಗಳವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ವಾಮಂಜೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾರತಿ ಶೆಟ್ಟಿಅವರು ಉತ್ತಮ ವಾಗ್ಮಿ, ನಿರೂಪಕಿ, ಭಜನಾ ಕಾರ್ಯಕ್ರಮಗಳ ಸಂಘಟಕಿ ,ಎನ್‌ಎಸ್‌ಎಸ್‌ ಅಧಿ​ಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ಕಟೀಲು ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಸಂತಾಪ ಸೂಚಿಸಿದ್ದಾರೆ.

Follow Us:
Download App:
  • android
  • ios