ಗಂಗಾವತಿ(ಏ.19): ಹೆರಿಗೆ ಬೇನೆ ಅನುಭವಿಸುತ್ತಿದ್ದ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ತಂದೆಯೇ ಅಲ್ಲಿ ಆಶಾ ಕಾರ್ಯಕರ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಕನಕಗಿರಿ ತಾಲೂಕಿನ ಬಸರಿಹಾಳದ ಗರ್ಭಿಣಿ ರೇಷ್ಮಾ ಅವರ ತಂದೆ ಬಾಲಪ್ಪ ಈ ಕೃತ್ಯ ನಡೆಸಿದ್ದು, ಈಗ ಪೊಲೀಸರ ಅತಿಥಿಯಾಗಿದ್ದಾನೆ. 

ನಗರದ ವೀಣಾ ಹೆರಿಗೆ ಆಸ್ಪತ್ರೆಯಲ್ಲಿ ರೇಷ್ಮಾ ಅವರನ್ನು ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಗರ್ಭಿಣಿ ಜತೆ ಬಂದಿದ್ದ ಆಶಾ ಕಾರ್ಯಕರ್ತೆ ಮಲಗಿದ್ದ ಸಂದರ್ಭದಲ್ಲಿ ಬಾಲಪ್ಪ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಕೂಡಲೇ ಕಾರ್ಯಕರ್ತೆ ಕೂಗಲು ಆರಂಭಿಸಿದಾಗ ಆಸ್ಪತ್ರೆಯಲ್ಲಿದ್ದ ಜನರು ಹಿಡಿದು ಥಳಿಸಿದ್ದಾರೆ.

ಪಿಎಂ ಪರಿಹಾರ ನಿಧಿಯಿಂದ ಹಣ ಪಡೆಯಲು ಬಂದ ವಿಧವೆ ಮೇಲೆ ಗ್ಯಾಂಗ್ ರೇಪ್

ಈ ಸಂಬಂಧ ಗಂಗಾವತಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪಿ.ಐ. ವೆಂಕಟಸ್ವಾಮಿ ತಿಳಿಸಿದ್ದಾರೆ.