Asianet Suvarna News Asianet Suvarna News

ಅಕ್ರಮ ಸಂಬಂಧ: ಮಹಿಳೆಯ ಕಾಟಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

*  ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಚಾರ ನರಸಾಪುರ ಗ್ರಾಮದಲ್ಲಿ ನಡೆದ ಘಟನೆ
*  ಹಣ, ಚಿನ್ನ ಮತ್ತು ಗದ್ದೆ ನೀಡುವಂತೆ ಕಿರುಕುಳ ನೀಡುತ್ತಿದ್ದ ಮಹಿಳೆ 
*  ಈ ಕುರಿತು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು 
 

Man Committed Suicide at Gangavati in Koppal grg
Author
Bengaluru, First Published Sep 15, 2021, 1:37 PM IST
  • Facebook
  • Twitter
  • Whatsapp

ಗಂಗಾವತಿ(ಸೆ.15):  ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಚಾರ ನರಸಾಪುರ ಗ್ರಾಮದಲ್ಲಿ ನಡೆದಿದೆ.

ದೊಡ್ಡಬಸಪ್ಪ ಗುಂಡಪ್ಪ(48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತನು ಮಹಿಳೆಯೊಂದಿಗೆ ಆಕ್ರಮ ಸಂಬಂಧ ಹೊಂದಿದ್ದ. ಮಹಿಳೆ ಹಣ, ಚಿನ್ನ ಮತ್ತು ಗದ್ದೆ ನೀಡುವಂತೆ ಕಿರುಕುಳ ನೀಡುತ್ತಿದ್ದಳು. 

ಯಾದಗಿರಿ; ವಯಸ್ಸಿಗೆ ಬಂದ ಹೆಣ್ಣು ಮಕ್ಕಳಿಗೆ ವಿಷ ಕೊಟ್ಟು ತಾನು ಸೇವಿಸಿದ ತಾಯಿ!

ಇದಕ್ಕೆ ಬೇಸತ್ತ ದೊಡ್ಡಬಸಪ್ಪ ಗುಂಡಪ್ಪ ಮರಳಿ ಗ್ರಾಮದ ತೋಟ ಒಂದರಲ್ಲಿ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

 

Follow Us:
Download App:
  • android
  • ios