ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ನಡೆದ ಘಟನೆ| ಪುತ್ರ ಶೋಕದಿಂದ ಬಳಲುತ್ತಿದ್ದ ತಂದೆ| ಮಗ ಸಾವನ್ನಪ್ಪಿದ ಸ್ಥಳದಲ್ಲೇ ಆತ್ಮಹತ್ಯೆಗೆ ಶರಣಾದ ತಂದೆ| ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು| 

ಅಂಕೋಲಾ(ಏ.22): ಮಗನ ಸಾವಿಗೆ ಮನನೊಂದು ತಂದೆಯೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ತಾಲೂಕಿನ ಹಟ್ಟಿಕೇರಿಯಲ್ಲಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಾಲೂಕಿನ ಪಳ್ಳಿಕೇರಿ ನಿವಾಸಿ ಗಜಾನನ ಶಂಕರ ನಾಯ್ಕ (62) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಗಜಾನನ ನಾಯ್ಕ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಎರಡು ವರ್ಷದ ಹಿಂದೆ ಮಗ ವಿನಾಯಕ ನಾಯ್ಕ ಇದೆ ಜಾಗದಲ್ಲಿ ಆಕಸ್ಮಿಕವಾಗಿ ಮರಣ ಹೊಂದಿದ್ದರು. 

ಕೋವಿಡ್‌ಗೆ ಪತಿ ಬಲಿ : ಮನನೊಂದು ಪತ್ನಿ, ಮಗ ಆತ್ಮಹತ್ಯೆ

ಪುತ್ರ ಶೋಕದಿಂದ ಬಳಲುತ್ತಿದ್ದ ತಂದೆ ಗಜಾನನ ಕೂಡ ಅದೇ ಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಕೋಲಾ ಪೊಲೀಸ್‌ ಠಾಣೆಯ ಪಿಎಸ್‌ಐ ಪ್ರೇಮನಗೌಡ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.