ಹಾಡುಹಗುಲೆ ಮೈದುನನಿಂದ ಅತ್ತಿಗೆಯ ಕಗ್ಗೊಲೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ಘಟನೆ.

ಧಾರವಾಡ, (ಸೆಪ್ಟೆಂಬರ್ .08): ಮೈದುನನನೇ ಕುಡಗೊಲಿನಿಂದ ಅತ್ತಿಗೆಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ಸುನಂದಾ ಮೆಣಸಿನಕಾಯಿ(40) ಕೊಲೆ ಆಗಿರುವ ದುರ್ದೈವಿ ಮಹಿಳೆ. ಮನೆಯಲ್ಲಿ ಆಂತರಿಕ ಕಲಹ ಹಿನ್ನಲೆ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಮಡಿಕೇರಿ ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ಶಿಕ್ಷಣ ಇಲಾಖೆಯ ಸೂಪರಿಡೆಂಟ್

ಕುಡಗೊಲಿನಿಂದ ಸುನಂದಾಳ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕುಂದಗೋಳ ಪೊಲೀಸರ ಭೇಟಿ ಪರಿಶೀಲನೆ ಮಾಡಿದರು. ಬಳಿಕ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾಗಿರುವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಗಂಡ- ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ
ಶಿವಮೊಗ್ಗ: ಗಂಡ- ಹೆಂಡತಿ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮೃತಳನ್ನು ಮಂಜುಳಾ (30) ಎಂದು ಗುರುತಿಸಲಾಗಿದೆ. ಶಿವಮೊಗ್ಗ(Shivamogga) ದ ಪ್ರಿಯಾಂಕ ಲೇಔಟ್ (Priyanka Layout) ನಲ್ಲಿ ಈ ಘಟನೆ ನಡೆದಿದ್ದು, ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಮಂಜುಳಾ ಮೃತದೇಹ ಪತ್ತೆಯಾಗಿದೆ.

ಇತ್ತ ಪತ್ನಿ ಕೊಲೆ ಬಳಿಕ ಪತಿ ದಿನೇಶ್ ಕೂಡ ಚಾಕುವಿನಿಂದ ತನ್ನ ಕೈ ಕೊಯ್ದುಕೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಸಂಬಂಧ ಸ್ಥಳೀಯರು, ಮಂಗಳವಾರ ರಾತ್ರಿ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಸದ್ಯ ಪ್ರಕರಣ ಸಂಬಂಧ ಮಹಿಳೆಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ್ರಾ..? ಅಥವಾ ಕೊಲೆಯೇ ಎಂಬುದು ಪೊಲೀಸರ ತನಿಖೆಯಿಂದ ಬಹಿರಂಗಗೊಳ್ಳಬೇಕಿದೆ.