Asianet Suvarna News Asianet Suvarna News

ಬೆಳಗಾವಿ: ರಾಕ್ಷಸನಂತೆ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ..!

ಜೋತಿಭಾ ಕಾಳಪ್ಪನ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದಾಗಿ ಇಬ್ಬರ ನಡುವೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ. 

Man Killed 6 Year Old Child at Athani in Belagavi grg
Author
First Published Apr 28, 2024, 6:46 AM IST

ಬೆಳಗಾವಿ(ಏ.28): ಸಾಲದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಜಗಳದಲ್ಲಿ ವ್ಯಕ್ತಿಯೊಬ್ಬ ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹತ್ಯೆ ಮಾಡಿರುವ ಅಮಾನುಷ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿಯಲ್ಲಿ ನಡೆದಿದೆ. ಘಟನೆಯಿಂದಾಗಿ ಎಲ್ಲೆಡೆ ಆಕ್ರೋಶ ಕೂಡ ವ್ಯಕ್ತವಾಗಿದೆ.

ಬುರ್ಲಟ್ಟಿ ಗ್ರಾಮದ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ಮಗು. ಜೋತಿಭಾ ತುಕಾರಾಮ ಬಾಬಾಬರ ಮಗು ಕೊಂದ ಆರೋಪ ಎದುರಿಸುತ್ತಿರುವ ವ್ಯಕ್ತಿ. ಮಗುವಿನ ತಂದೆ ಕಾಡಪ್ಪ ಕಾಳಪಾಟೀಲಗೆ ಕಳೆದ ವರ್ಷ ಜೋತಿಭಾ ಬಾಬಾಬರ ₹50 ಸಾವಿರ ಸಾಲ ನೀಡಿದ್ದ. ಈ ಹಣವನ್ನು ವಾಪಸ್‌ ನೀಡುವಂತೆ ಕಾಳಪ್ಪನಿಗೆ ಕೇಳಿದಾಗ. ಶನಿವಾರ ಬೆಳಗ್ಗೆ ಜೋತಿಭಾ ಕಾಳಪ್ಪನ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದಾಗಿ ಇಬ್ಬರ ನಡುವೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎಂದು ಮೃತಪಟ್ಟ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.

ಮಲಗಿದ್ದವನನ್ನ ಎಬ್ಬಿಸಿ ಕೊಂದಿದ್ದು ಯಾಕೆ? ರೊಟ್ಟಿ ಕೇಳಿದ್ದೇ ತಪ್ಪಾಗಿ ಹೊಯ್ತಲ್ಲ..!

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Videos
Follow Us:
Download App:
  • android
  • ios