ನವದೆಹಲಿ[ಮಾ.19]: ಕೊರೋನಾ ಸೋಂಕು ತಗುಲಿದೆ ಎಂಬ ಶಂಕೆಗೊಳಗಾಗಿದ್ದ ವ್ಯಕ್ತಿಯೊಬ್ಬ ಬುಧವಾರ ಇಲ್ಲಿನ ಇಲ್ಲಿನ ಸಫ್ದರ್‌ಜಂಗ್‌ ಆಸ್ಪತ್ರೆಯ 7ನೇ ಮಹಡಿಯಿಂದ ನೆಗೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆಸ್ಪ್ರೇಲಿಯಾದ ಸಿಡ್ನಿಯಿಂದ ಮರಳಿದ್ದ ವ್ಯಕ್ತಿಯನ್ನು, ವಿಮಾನ ನಿಲ್ದಾಣದ ಅಧಿಕಾರಿಗಳು ಆಸ್ಪತ್ರೆಗೆ ಕರೆತಂದಿದ್ದರು. ತಕ್ಷಣವೇ ಆತನನ್ನು ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿತ್ತು.

ಕೊರೋನಾ ವೈರಸ್ ಸಂಬಂಧಿತ ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆದರೆ ಆತ ಕೊಠಡಿಯ ಬಾಗಿಲನ್ನು ಬಲವಂತವಾಗಿ ತೆರೆದು ಏಳನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾನೆ.