ಯುಪಿಯಲ್ಲಿ ಮತ್ತೊಂದು ಎನ್‌ಕೌಂಟರ್: ಉಮೇಶ್ ಪಾಲ್‌ಗೆ ಮೊದಲು ಗುಂಡು ಹಾರಿಸಿದ್ದ ಆರೋಪಿ ಗುಂಡೇಟಿಗೆ ಬಲಿ
ಉಮೇಶ್ ಪಾಲ್ ಹತ್ಯೆ ಮಾಡಿದ ಪ್ರತಿ ಆರೋಪಿಗೆ ಯುಪಿ ಪೊಲೀಸರು 2.5 ಲಕ್ಷ ಬಹುಮಾನ ಘೋಷಿಸಿದ ಒಂದು ದಿನದ ನಂತರ ಈ ಎನ್‌ಕೌಂಟರ್ ನಡೆದಿದೆ. ಆದರೆ, ಎಫ್‌ಐಆರ್‌ನಲ್ಲಿ ವಿಜಯ್‌ಕುಮಾರ್ ಹೆಸರು ಇಲ್ಲದ ಕಾರಣ ಪ್ರಯಾಗ್‌ರಾಜ್ ಪೊಲೀಸರು 50,000 ರೂಪಾಯಿ ಬಹುಮಾನ ಘೋಷಿಸಿದ್ದರು.
ಲಖನೌ (ಮಾರ್ಚ್ 6, 2023) : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮತ್ತೊಂದು ಎನ್‌ಕೌಂಟರ್ ನಡೆದಿದ್ದು, ಉಮೇಶ್ ಪಾಲ್ ಮೇಲೆ ಮೊದಲು ಗುಂಡು ಹಾರಿಸಿದವನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉಮೇಶ್ ಪಾಲ್ ಮೇಲೆ ಮೊದಲ ಗುಂಡಿನ ದಾಳಿ ನಡೆಸಿದ ಅತೀಕ್ ಅಹ್ಮದ್ ಗ್ಯಾಂಗ್‌ನ ಶೂಟರ್ ಅನ್ನು ಹತ್ಯೆ ಮಾಡಲಾಗಿದೆ. ಆರೋಪಿ ವಿಜಯ್ ಕುಮಾರ್ ಅಲಿಯಾಸ್ ಉಸ್ಮಾನ್ ಚೌಧರಿ ಮತ್ತು ಪೊಲೀಸರ ನಡುವೆ ಭಾನುವಾರ ಸಂಜೆ ಕೌಂಧಿಯಾರ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಹತ್ಯೆಗೀಡಾಗಿದ್ದಾನೆ.
ಮೂಲಗಳ ಪ್ರಕಾರ, ಎನ್‌ಕೌಂಟರ್‌ನಲ್ಲಿ (Encounter) ಗಂಭೀರ ಗಾಯಗೊಂಡ ಆರೋಪಿ ವಿಜಯ್ ಕುಮಾರ್‌ನನ್ನು ಪ್ರಯಾಗ್‌ರಾಜ್‌ನ (Prayagraj) ಸಿವಿಲ್ ಲೈನ್ಸ್‌ನಲ್ಲಿರುವ ಸ್ವರೂಪ್ ರಾಣಿ ನೆಹರೂ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಮೃತಪಟ್ಟಿದ್ದಾನೆ (Brought Dead) ಎಂದು ಘೋಷಿಸಲಾಯಿತು. ಬಳಿಕ ವೈದ್ಯರು (Doctors) ಶವವನ್ನು (Dead Body) ಶವಾಗಾರಕ್ಕೆ ಕಳುಹಿಸಿದ್ದಾರೆ.
ಇದನ್ನು ಓದಿ: ಉಮೇಶ್ ಪಾಲ್ ಹತ್ಯೆ ಮಾಡಿದದ್ದ ಆರೋಪಿ ಆಪ್ತನ ಮನೆ ಮೇಲೆ ಬುಲ್ಡೋಡರ್ ಹತ್ತಿಸಿದ ಯೋಗಿ ಸರ್ಕಾರ!
ಉಮೇಶ್ ಪಾಲ್ ಹತ್ಯೆ ಮಾಡಿದ ಪ್ರತಿ ಆರೋಪಿಗೆ ಯುಪಿ ಪೊಲೀಸರು 2.5 ಲಕ್ಷ ಬಹುಮಾನ ಘೋಷಿಸಿದ ಒಂದು ದಿನದ ನಂತರ ಈ ಎನ್‌ಕೌಂಟರ್ ನಡೆದಿದೆ. ಆದರೆ, ಎಫ್‌ಐಆರ್‌ನಲ್ಲಿ ವಿಜಯ್‌ಕುಮಾರ್ ಹೆಸರು ಇಲ್ಲದ ಕಾರಣ ಪ್ರಯಾಗ್‌ರಾಜ್ ಪೊಲೀಸರು 50,000 ರೂಪಾಯಿ ಬಹುಮಾನ ಘೋಷಿಸಿದ್ದರು. ತನಿಖೆಯ ಆರಂಭದಲ್ಲಿ ಆತನನ್ನು ಗುರುತಿಸಲು ಸಾಧ್ಯವಾಗದ ಕಾರಣ, ಆತನ ಮೇಲಿನ ಬಹುಮಾನವನ್ನು ಕಡಿಮೆ ಘೋಷಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಎಲ್ಲ ಆರೋಪಿಗಳಿಗೂ ಶಿಕ್ಷೆ: ಉತ್ತರಪ್ರದೇಶ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್
ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಈ ಕೇಸ್ ಬಗ್ಗೆ ಪ್ರತಿಕ್ರಿಯಿಸಿದ್ದು, ಉಮೇಶ್ ಪಾಲ್ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಮತ್ತು ಯಾರನ್ನೂ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಹಾಗೆ, ಪೊಲೀಸರ ಮೇಲೆ ದಾಳಿ ನಡೆದಿದೆ ಮತ್ತು ಪೊಲೀಸರು ಪ್ರತೀಕಾರ ತೀರಿಸಿಕೊಂಡರು ಎಂದೂ ಹೇಳಿದ್ದು, ಸಮಾಜವಾಧಿ ಪಕ್ಷದ ಟೀಕೆಗೆ ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ: 'ಮಾಫಿಯಾದವರನ್ನ ಹೂತುಹಾಕ್ತೇನೆ..' ಯುಪಿ ವಿಧಾನಸಭೆಯಲ್ಲಿ 'ಉಗ್ರಂ ವೀರಂ' ಆದ ಯೋಗಿ ಆದಿತ್ಯನಾಥ್!
ಉಮೇಶ್ ಪಾಲ್ ಹತ್ಯೆ ಪ್ರಕರಣದ ವಿವರ..
ವಿಜಯ್ ಕುಮಾರ್ ಅಲಿಯಾಸ್ ಉಸ್ಮಾನ್ ಚೌಧರಿ, 2005 ರ ಬಿಎಸ್‌ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಅವರನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಒಂದು ವಾರದ ಹಿಂದೆ ಕೊಲೆ ಮಾಡಿದ್ದಾರೆ. ಮಾಜಿ ಸಂಸದ ಅತೀಕ್ ಅಹ್ಮದ್ ಅವರ ಕಿರಿಯ ಸಹೋದರ ಖಾಲಿದ್ ಅಜೀಂ ಅವರನ್ನು ಸೋಲಿಸಿ ಅಲಹಾಬಾದ್ (ಪಶ್ಚಿಮ) ವಿಧಾನಸಭಾ ಸ್ಥಾನದಲ್ಲಿ ಮೊದಲ ಬಾರಿ ಗೆಲುವು ಸಾಧಿಸಿದ ತಿಂಗಳ ನಂತರ ರಾಜು ಪಾಲ್ ಅವರನ್ನು ಹತ್ಯೆ ಮಾಡಲಾಗಿತ್ತು.
ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್, ಆತನ ಸಹೋದರ ಮತ್ತು ಮಾಜಿ ಶಾಸಕ ಅಶ್ರಫ್ ರಾಜು ಪಾಲ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದು, ಅವರೆಲ್ಲ ಸದ್ಯ ಜೈಲಿನಲ್ಲಿದ್ದಾರೆ. ಉಮೇಶ್ ಪಾಲ್ ಮತ್ತು ಅವರ ಇಬ್ಬರು ಪೊಲೀಸ್ ಅಂಗರಕ್ಷಕರಲ್ಲಿ ಒಬ್ಬರು ಎಸ್‌ಯುವಿಯಿಂದ ಹೊರಬರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸುತ್ತವೆ, ಆಗ ಇದ್ದಕ್ಕಿದ್ದಂತೆ ಒಬ್ಬ ವ್ಯಕ್ತಿ ಹಿಂದಿನಿಂದ ಬಂದು ಅವನ ಮೇಲೆ ಗುಂಡು ಹಾರಿಸುತ್ತಾನೆ.
ಇದನ್ನೂ ಓದಿ: ಯುಪಿ ದಲಿತ ಮಹಿಳೆ ಗ್ಯಾಂಗ್ ರೇಪ್, ಕೊಲೆ ಕೇಸ್: ಮೂವರನ್ನು ಖುಲಾಸೆಗೊಳಿಸಿದ ಕೋರ್ಟ್; ಒಬ್ಬರು ಮಾತ್ರ ದೋಷಿ
ಎನ್‌ಕೌಂಟರ್‌ನಲ್ಲಿ ಮತ್ತೊಬ್ಬ ಆರೋಪಿ ಹತ್ಯೆ
ಒಂದು ವಾರದ ಹಿಂದೆ, ಪ್ರಯಾಗ್‌ರಾಜ್‌ನ ನೆಹರೂ ಪಾರ್ಕ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು ಮತ್ತು ಜಿಲ್ಲಾ ಪೊಲೀಸರು ಮತ್ತೊಬ್ಬ ಆರೋಪಿ ಅರ್ಬಾಜ್‌ನನ್ನು ಗುಂಡಿಕ್ಕಿ ಕೊಂದಿದ್ದರು.