ಮಂಡ್ಯ ಜಿಲ್ಲೆಯ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ಮೂರು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಭೇಟಿ, ಸ್ಥಳ ಪರಿಶೀಲನೆ.
ಮಂಡ್ಯ (ಅ.19): ಒಂದಲ್ಲ ಎರಡಲ್ಲ ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಗ್ರಾಮದ ಬಳಿ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ನಡೆದಿದೆ.
ಭಾನುವಾರ ನಡೆದ ಈ ಭೀಕರ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಒಟ್ಟು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಮಳವಳ್ಳಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
ಮೂರು ಬಸ್‌ಗಳ ಸರಣಿ ಡಿಕ್ಕಿ
ಘಟನೆಯ ವಿವರಗಳ ಪ್ರಕಾರ, ಎರಡು KSRTC ಬಸ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಈ ಘರ್ಷಣೆಯಿಂದಾಗಿ ಮತ್ತೊಂದು ಬಸ್‌ಗೂ ಡಿಕ್ಕಿಯಾಗಿದೆ. ಇದರಿಂದ ಮೂರು ಬಸ್‌ಗಳ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದ. ಡಿಕ್ಕಿಯಾದ ರಭಸಕ್ಕೆ ಮೂರು ಬಸ್‌ಗಳ ಕೆಲವು ಭಾಗಗಳು ಜಖಂಗೊಂಡಿವೆ.
ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ:
ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಘಟನೆಯ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ವೇಗವಾಗಿ ವಾಹನ ಚಲಾಯಿಸಿದ್ದು ಅಥವಾ ರಸ್ತೆಯ ಸ್ಥಿತಿಗತಿ ಕಾರಣವಿರಬಹುದು ಎನ್ನಲಾಗಿದೆ. ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡು ಸ್ಥಳೀಯರು ಅಪಘಾತದ ದೃಶ್ಯಗಳನ್ನ ಕಂಡು ಬೆಚ್ಚಿಬಿದ್ದರು.
ಸಂಸದ ಹೆಚ್‌ಡಿ ಕುಮಾರಸ್ವಾಮಿ ಟ್ವೀಟ್:
