ಡ್ರಗ್ಸ್ ದಂಧೆ ವಿರುದ್ಧ ಸಮರ ಸಾರಿದ ಮಂಗಳೂರು ಪೊಲೀಸರು!

ಜಿಲ್ಲೆಯಲ್ಲಿ ಭಾರೀ ಸದ್ದು ಮಾಡುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಜಿಲ್ಲಾ ಪೊಲೀಸರು ಅಲರ್ಟ್ ಆಗಿದ್ದು ಡ್ರಗ್ಸ್ ದಂಧೆಯಲ್ಲಿ ತೊಡಗಿರುವ ಕ್ರಿಮಿನಲ್‌ಗಳ ವಿರುದ್ಧ ಸಮರ ಸಾರಿದ್ದಾರೆ.

Mangalore Polices operation against drugs peddler continues at dakshina kannada rav

ಮಂಗಳೂರು (ಆ.7): ಜಿಲ್ಲೆಯಲ್ಲಿ ಭಾರೀ ಸದ್ದು ಮಾಡುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಜಿಲ್ಲಾ ಪೊಲೀಸರು ಅಲರ್ಟ್ ಆಗಿದ್ದು ಡ್ರಗ್ಸ್ ದಂಧೆಯಲ್ಲಿ ತೊಡಗಿರುವ ಕ್ರಿಮಿನಲ್‌ಗಳ ವಿರುದ್ಧ ಸಮರ ಸಾರಿದ್ದಾರೆ.

ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಆಟೋರಿಕ್ಷಾ ಚಾಲಕನೋರ್ವನನ್ನು ಬಂಧಿಸಿದ್ದಾರೆ. ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ನನ್ನು ಬಂಧಿಸಲಾಗಿದೆ. ಬಂಧಿತನಿಂದ 12 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

Mangaluru crimes: ಪ್ರೀತಿಸುವುದಾಗಿ ನಂಬಿಸಿ ಕೇರಳ ಮೂಲದ ಯುವಕರಿಂದ ಅಪ್ರಾಪ್ತೆಯ ಅತ್ಯಾಚಾರ

ಮಂಗಳೂರು ಹೊರವಲಯದ ಕುಂಪಲದ ಭಗಂಬಿಲ ಬಳಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದಾಗ ದಾಳಿ. ಆರೋಪಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ. ಈ ವೇಳೆ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಪೊಲೀಸರು. ಮಾರಾಟ ಮಾಡಲು ಉಪಯೋಗಿಸಿದ ಆಟೋರಿಕ್ಷಾ ಸೇರಿದಂತೆ ಆರೋಪಿ ಬಳಿ ಇದ್ದ ಒಟ್ಟು ಒಟ್ಟು 95,000ರೂ. ಮೌಲ್ಯದ  ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಡ್ರಗ್ಸ್ ಮಾರಾಟ ಆತಂಕಕಾರಿ ವಿಷಯ: ಅರವಿಂದ ಸೋಮಯಾಜಿ

ನರಸಿಂಹರಾಜಪುರ: ಇತ್ತೀಚಿನ ದಿನಗಳಲ್ಲಿ ಅಂಗಡಿಗಳಲ್ಲಿ ಡ್ರಗ್ಸ್ ಮಿಶ್ರಿತ ಚಾಕಲೇಟ್‌ ಮಾರಾಟವಾಗುತ್ತಿರುವುದು ಆತಂಕದ ವಿಷಯ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಅರವಿಂದ ಸೋಮಯಾಜಿ ಕಳವಳ ವ್ಯಕ್ತಪಡಿಸಿದರು.

ಮುತ್ತಿನಕೊಪ್ಪದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಧ.ಗ್ರಾ.ಯೋಜನೆ ಶೆಟ್ಟಿಕೊಪ್ಪ ವಲಯದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. 

Bengaluru crime: ಒಂದೇ ತಿಂಗಳಲ್ಲಿ ₹18 ಕೋಟಿಯ ಡ್ರಗ್ಸ್ ಜಪ್ತಿ, 378 ಪ್ರಕರಣ ದಾಖಲು!

ಮೆಡಿಕಲ್‌ ಶಾಪ್‌ಗಳಲ್ಲಿ ಮಾತ್ರೆ ತೆಗೆದುಕೊಳ್ಳುವಾಗ ಜಾಗ್ರತೆ ವಹಿಸಿ. ಶಾಲಾ ಮಕ್ಕಳು ಸಹ ಡ್ರಗ್ಸ್ ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಪೋಷಕರು ತಮ್ಮ ಮಕ್ಕಳ ನಡವಳಿಕೆಗಳ ಬಗ್ಗೆ ಎಚ್ಚರಿಕೆಯಿಂದಿರ ಬೇಕು. ವಿದ್ಯಾರ್ಥಿಗಳು ತಮಗೆ ಆರೋಗ್ಯ ಸಮಸ್ಯೆ ಎದುರಾದಾಗ ಶಿಕ್ಷಕರಿಗೆ ಅಥವಾ ಪೋಷಕರಿಗೆ ತಿಳಿಸಬೇಕು. ಚಿಕ್ಕವಯಸ್ಸಿನಲ್ಲಿ ಮೊಬೈಲ್‌ಗಳ ಅತಿಯಾದ ಬಳಕೆ ಮೆದುಳಿಗೆ, ಕಣ್ಣಿಗೆ ಅಪಾಯವಾಗುವ ಸಾಧ್ಯತೆ ಇದೆ. ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸುವುದು, ಉತ್ತಮ ಪುಸ್ತಕಗಳನ್ನು ಓದುವುದರಿಂದ ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕರಾಗಬಹುದು ಎಂದರು.

Latest Videos
Follow Us:
Download App:
  • android
  • ios