ನೈತಿಕ ಪೊಲೀಸ್‌ಗಿರಿ ನಡೆಸಿದ 18 ಗಂಟೆಯೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
ಮಂಗಳೂರಿನಲ್ಲಿ ನಿನ್ನೆ ರಾತ್ರಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ ಹಲ್ಲೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು (ಜು.22): ರಾಜ್ಯದ ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್‌ಗಿರಿ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ. ನಿನ್ನೆ ರಾತ್ರಿ ವೇಳೆ ವೈದ್ಯಕೀಯ ಶಿಕ್ಷಣ ಪಡೆಯುವ ನಾಲ್ವರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಬೈಕ್‌ನಲ್ಲಿ ಹೋಗುವಾಗ, ಅವರನ್ನು ಹಿಂಬಾಲಿಸಿಕೊಂಡು ಹೋಗಿ ಅದರಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ ಮಾಡಲಾಗಿತ್ತು. ಹೀಗೆ, ನೈತಿಕ ಪೊಲೀಸ್‌ಗಿರಿ ಮಾಡಿ ಪರಾರಿ ಆಗಿದ್ದವರ ಮೇಲೆ ದೂರು ನೀಡಿದ ಬೆನ್ನಲ್ಲೇ 18 ಗಂಟೆಗಳ ಒಳಗಾಗಿ, ಆರೋಪಿಗಳನ್ನು ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ.
ಮಂಗಳೂರಿನ ಬಿಜೈ ಕಾಪಿಕಾಡ್ ಬಳಿ ನಿನ್ನೆ ರಾತ್ರಿ ವೇಳೆ ನೈತಿಕ ಪೊಲೀಸ್‌ಗಿರಿ ಪ್ರಕರಣ ನಡೆದಿತ್ತು. ಈ ಸಂಬಂಧವಾಗಿ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳ ಬಂಧಿಸಿದ್ದಾರೆ. ಅಳಪೆ ನಿವಾಸಿ ದೀಕ್ಷಿತ್ (32) ಹಾಗೂ ಲಾಯ್ಡ್ ಪಿಂಟೋ (32) ಬಂಧಿತರು ಆಗಿದ್ದಾರೆ. ಅವರು ನೈತಿಕ ಪೊಲೀಸ್ಗಿರಿ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್ ಪೋನ್ ವಶಕ್ಕೆ ಪಡೆಯಲಾಗಿದೆ. ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಲಾಗಿತ್ತು. ಬೀಚ್ ತೆರಳಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಬಂದು ಹಲ್ಲೆ ನಡೆಸಿದ್ದರು.
ರಾಜ್ಯದಲ್ಲಿರುವ ನಾವೆಲ್ಲರೂ ಬಡ್ಡಿ ಮಕ್ಕಳು: ಮುಖ್ಯಮಂತ್ರಿ ಚಂದ್ರು ವ್ಯಂಗ್ಯ
ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ: ಮಂಗಳೂರಿನ ಪ್ರತಿಷ್ಠಿತ ಎ.ಜೆ. ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೆಜ್ಮೆಂಟ್ ಕೋರ್ಸ್ ನ ವಿದ್ಯಾರ್ಥಿಗಳು ಪಣಂಬೂರು ಬೀಚ್‌ಗೆ ಒಟ್ಟೊಟ್ಟಿಗೆ ವಿಹಾರಕ್ಕೆ ತೆರಳಿದ್ದರು. ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಟ್ಟು 6 ಮಂದಿ ವಿಹಾರಕ್ಕೆ ತೆರಳಿದ್ದರು. ಆದರೆ, ಈ ವೇಳೆ ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ ತೆರಳಿದ್ದ 4 ಮಂದಿ ವಿದ್ಯಾರ್ಥಿನಿಯರು (ಯುವತಿಯರು) ತೆರಳಿದ್ದರು. ಇದರಿಂದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಂದು ತಂಡವೊಂದು ಅನ್ಯಕೋಮಿನ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿತ್ತು. ಇನ್ನು ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಹಲ್ಲೆಗೊಳಗಾದ ವಿದ್ಯಾರ್ಥಿ ಆಗಿದ್ದಾನೆ.
ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ನಡೆದಿದ್ದ ಘಟನೆ ನಡೆದಿತ್ತು. ಇದಾದ ನಂತರ, ಗಾಯಗೊಂಡ ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದನು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದರು. ಇನ್ನು ಘಟನೆ ನಡೆದ ಬಗ್ಗೆ ರಾಜ್ಯಾದ್ಯಂತ ವಿದ್ಯಾರ್ಥಿ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಇದನ್ನು ಗಂಭೀರವಾಘಿ ಪರಿಗಣಿಸಿತ್ತ. ಆದ್ದರಿಂದ ಆರೋಪಿಗಳ ಪತ್ತೆಗೆ ಚುರುಕು ಕಾರಾರ್ಯಾಚರಣೆ ನಡೆಸಿದ ಪೊಲೀಸರು 18 ಗಂಟೆಗಳ ಒಳಗಾಗಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.