ಬೀಚ್‌ ನೋಡಲು ಬಂದಿದ್ದ ವಿದ್ಯಾರ್ಥಿನಿ ಮೇಲೆ ಮೀನು ಲಾರಿ ಚಾಲಕನೊಬ್ಬ ಅತ್ಯಾಚಾರೆಸಗಿ ಅದನ್ನು ವಿಡಿಯೋ ಮಾಡಿಕೊಂಡಿದ್ದಾನೆ. ಬಳಿಕ ಕಿರುಕುಳ ನೀಡುತ್ತಿದ್ದವನು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ

ಮಂಗಳೂರು, (ಆಗಸ್ಟ್, 01): ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಲ್ಲೇ ಅದನ್ನ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮುನಾಝ್ ಅಹಮ್ಮದ್(30) ಬಂಧಿತ ಆರೋಪಿ. ಬಂಧಿತ ಮುನಾಝ್ ಅಹಮ್ಮದ್ ಮೀನು ಲಾರಿ ಚಾಲಕನಾಗಿದ್ದ. ಜು.27 ರಂದು‌ ಎನ್ ಐಟಿಕೆ ಬೀಚ್ ಗೆ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯೊಂದಿಗೆ ಬಂದಿದ್ದಳು.

ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ವೇಳೆ ಮುನಾಝ್ ಅಹಮ್ಮದ್ ವಿದ್ಯಾರ್ಥಿನಿಯ ಸಹಪಾಠಿಯನ್ನು ಹೆದರಿಸಿ ಓಡಿಸಿ ಬಳಿಕ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಕೃತ್ಯದ ವೀಡಿಯೋ ಮಾಡಿಕೊಂಡಿದ್ದ ಆರೋಪಿ ಬಳಿಕ ಅದನ್ನು ತೋರಿಸಿ ವಿದ್ಯಾರ್ಥಿನಿಗೆ ಪದೇ-ಪದೇ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ವಿದ್ಯಾರ್ಥಿನಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಳು. 

ದೂರಿನ ಮೇಲೆ ಮಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿನಿ ಕೊಟ್ಟ ದೂರಿನ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಇದರಿಂದ ವಿದ್ಯಾರ್ಥಿನಿ ನಿಟ್ಟುಸಿರುಬಿಟ್ಟಿದ್ದಾಳೆ.

ಆನ್​ಲೈನ್ ಜೂಜು ಚಟಕ್ಕೆ ಬಿದ್ದು ಸುಲಿಗೆ ಆರಂಭಿಸಿದ ಗ್ಯಾಂಗ್ ಅರೆಸ್ಟ್ 
ಬೆಂಗಳೂರು: ಆನ್​ಲೈನ್ ಜೂಜು ಚಟಕ್ಕೆ ಬಿದ್ದು ರಸ್ತೆ ರಸ್ತೆಯಲ್ಲಿ ಸುಲಿಗೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಬಸವನಗುಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಾಹನ ತಾಗಿತು ಎಂದು ಆರೋಪಿಸಿ ಜಗಳಕ್ಕೆ ಇಳಿದು ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿದ್ದ ಮೈಸೂರು ಮೂಲದ ಜಮೀಲ್ ಖಾನ್, ಜುನಾಯಿದ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜನರನ್ನು ಸುಲಿಗೆ ಮಾಡಲು ಆರೋಪಿಗಳು ವಾಹನ ಅಪಘಾತವನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿದ್ದರು. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗಲು ರಾತ್ರಿ ಎನ್ನದೆ ಆರೋಪಿಗಳು ಸುಲಿಗೆ ನಡೆಸುತ್ತಿದ್ದರು. ಒತ್ತಡದಲ್ಲಿ ವಾಹನ ಚಾಲನೆ ಮಾಡುವವರ ಪಕ್ಕಕ್ಕೆ ಬಂದು ನಿಮ್ಮ ವಾಹನ ಟಚ್ ಆಯ್ತು ಎಂದು ಕಿರಿಕ್ ಮಾಡುತ್ತಿದ್ದರು. ಬಳಿಕ ಅವರಿಂದ ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿದ್ದರು.

ಇದೇ ರೀತಿಯ ಕೃತ್ಯವನ್ನು ಆರೋಪಿಗಳು ಬಸವನಗುಡಿಯಲ್ಲಿ ನಡೆಸಿ ವಾಹನ ಸವಾರನಿಂದ 40 ಸಾವಿರ ರೂಪಾಯಿ ದರೋಡೆ ಮಾಡಿದ್ದರು. ಘಟನೆ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡ ಬಸವನಗುಡಿ ಠಾಣಾ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.