Asianet Suvarna News Asianet Suvarna News

Mangaluru: ಜಲೀಲ್ ಹತ್ಯೆ ಪ್ರಕರಣ: ಸುರತ್ಕಲ್ ಸುತ್ತಾಮುತ್ತಾ 144 ಸೆಕ್ಷನ್ ಜಾರಿ

ಸುರತ್ಕಲ್ ಕಾಟಿಪಳ್ಳದಲ್ಲಿ ವ್ಯಕ್ತಿಯ ಕೊಲೆ ನಡೆದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಯಾಗಿದೆ. 

Mangaluru Suratkal Merchant Stabbed To Death Section 144 Imposed In Mangalore gvd
Author
First Published Dec 25, 2022, 8:49 AM IST

ಮಂಗಳೂರು (ಡಿ.25): ಸುರತ್ಕಲ್ ಕಾಟಿಪಳ್ಳದಲ್ಲಿ ವ್ಯಕ್ತಿಯ ಕೊಲೆ ನಡೆದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಯಾಗಿದೆ. ಪಣಂಬೂರು, ಮುಲ್ಕಿ, ಸುರತ್ಕಲ್ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಕಡೆ 144 ಸೆಕ್ಷನ್ ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಆದೇಶ ಮಾಡಿದ್ದಾರೆ. ಕ್ರಿಸ್ಮಸ್ ಹಬ್ಬ ಆಚರಣೆ ಹೊರತುಪಡಿಸಿ ಎಲ್ಲಾ ಬಂದ್ ಆಗುವ ಸಾಧ್ಯತೆಯಿದೆ.

ಮಂಗಳೂರು ಕಮಿಷನರ್ ಶಶಿಕುಮಾರ್ ಆಸ್ಪತ್ರೆಗೆ ಭೇಟಿ‌ ನೀಡಿದ ವೇಳೆ ಸ್ಥಳದಲ್ಲಿದ್ದವರು ನೈತಿಕ ಪೊಲೀಸ್ ಗಿರಿ ವಿಚಾರ ಎತ್ತಿ ಕಮಿಷನರ್ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸಿದ್ದರಲ್ಲದೇ ಮುತ್ತಿಗೆಯನ್ನು ಹಾಕಿದ್ದರು. ನಂತರ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ಕಮಿಷನರ್ ಹೇಳಿದರು. ಕೊಲೆಯಾದವರು ಫ್ಯಾನ್ಸಿ ಅಂಗಡಿ ನಡೆಸಿಕೊಂಡಿದ್ದರು. ನಿನ್ನೆ ಇಬ್ಬರು ಬಂದು ಚೂರಿ ಇರಿದು ಪರಾರಿಯಾಗಿದ್ದಾರೆ.  ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಈ ಪ್ರಕರಣದ ಹಿಂದಿರುವ ಉದ್ದೇಶ ಏನು ಅನ್ನೋದು ಗೊತ್ತಿಲ್ಲ. ಸ್ಥಳೀಯರು ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿ ಹೇಳಿದ್ದಾರೆ. ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದರು.

ಸುರತ್ಕಲ್: ಚೂರಿ ಇರಿತಕ್ಕೊಳಗಾಗಿದ್ದ ಜಲೀಲ್ ಸಾವು

ಆ ಅನುಮಾನಗಳ ಬಗ್ಗೆಯೂ ನಾವು  ಪರಿಶೀಲನೆ ನಡೆಸುತ್ತೇವೆ. ಈ ಬಗ್ಗೆ ತನಿಖೆ ನಡೆಸಿದ ಬಳಿಕ ಎಲ್ಲವೂ ಹೇಳಲು ಸಾಧ್ಯ. ಘಟನೆ ನಡೆದಿರುವ ಸ್ಥಳ ಹಿಂದಿನಿಂದಲೂ ಸೂಕ್ಷ್ಮ ಪ್ರದೇಶ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಕ್ರಿಸ್ಮಸ್ ಇರುವ ಕಾರಣ ಅಗತ್ಯ ಬಿದ್ರೆ ಸೆಕ್ಷನ್ 144 ಜಾರಿ ಮಾಡ್ತೇವೆ. ಈ ಹಿಂದಿನಂತೆ ಅಲ್ಲಿ ಏನು ಅಗತ್ಯ ಕ್ರಮ ಕೈಗೊಳ್ಳಲಾಗಿತ್ತೋ ಅದು ಮಾಡ್ತೇವೆ. ಹೆಚ್ಚಿನ ಭದ್ರತೆಯನ್ನು ಅಗತ್ಯ ಸ್ಥಳಗಳಲ್ಲಿ ನಿಯೋಜಿಸಲಾಗುತ್ತದೆ. ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಅನೈತಿಕ ಗೂಂಡಾಗಿರಿ ಮಟ್ಟ ಹಾಕಿಲ್ಲ ಅನ್ನೋ ಆರೋಪವಿದೆ.

ಡಿಸೆಂಬರ್ ತಿಂಗಳಲ್ಲಿ ಹಲವು ಗೂಂಡಾಗಿರಿ ಪ್ರಕರಣಗಳು ನಡೆದಿದೆ. ಈ ಎಲ್ಲಾ ಪ್ರಕರಣದಲ್ಲಿ ನಾವು ಪ್ರಕರಣ ದಾಖಲಿಸಿ ಅರೆಸ್ಟ್ ಮಾಡಿದ್ದೇವೆ. ಕಳೆದ ಒಂದು ವಾರದಿಂದ ಇಂತಹ ಕೃತ್ಯದಲ್ಲಿ ಭಾಗಿಯಾದವರ ಮೇಲೆ ಕ್ರಮ ಅಗತ್ಯ ಕ್ರಮವಾಗಿ ಕೃತ್ಯಕ್ಕೆ ಮುಂದಾದವರ ಮೇಲೆ ಸೂಕ್ತ ಕ್ರಮ ಆಗಿದೆ. ಮುಂದೆ ಅಂತಹ ಕೃತ್ಯ ನಡೆಯದಂತೆಯೂ ಮುಂಜಾಗ್ರತ ಕ್ರಮ ಆಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡ ಅಲ್ತಾಫ್ ಖಾನ್ ಮೇಲೆ ಅಟ್ಯಾಕ್ ಮಾಡಲು ಯತ್ನ?: ಮೂವರ ಬಂಧನ

ಏನಿದು ಘಟನೆ: ಶನಿವಾರ ರಾತ್ರಿ ಜಲೀಲ್‌ ಅವರ ಮೇಲೆ ಇಬ್ಬರು ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ಮಾಡಿ ಚೂರಿ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತ ಜಲೀಲ್‌ ದಿನಸಿ ವ್ಯಾಪಾರ ಹೊಂದಿದ್ದಾರೆ. ಅವರು ಅಂಗಡಿಯಲ್ಲಿದ್ದ ವೇಳೆ ಸಂಜೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದರು. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸುರತ್ಕಲ್‌ ಪರಿಸರದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ. ಘಟನಾ ಸ್ಥಳಕ್ಕೆ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಪೊಲೀಸ್‌ ಕಮೀಷನರ್‌ ಶಶಿಕುಮಾರ್‌ ತಿಳಿಸಿದ್ದರು.

Follow Us:
Download App:
  • android
  • ios