ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಮಹಿಳೆಯನ್ನು ಅಡ್ಡಗಟ್ಟಿ ಲಾಂಗ್‌ ತೋರಿಸಿ ಸುಮಾರು 2 ಲಕ್ಷ ಮೌಲ್ಯದ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಸಿದು ಕ್ಷಣಾರ್ಧದಲ್ಲಿ ಪರಾರಿ ಆಗಿದ್ದಾರೆ. 

ಪೀಣ್ಯ ದಾಸರಹಳ್ಳಿ(ಜು.29): ಹಾಡಹಗಲೇ ಮುಸುಕುಧಾರಿಗಳಿಬ್ಬರು ಮಾರಕಾಸ್ತ್ರ ತೋರಿಸಿ ಮಹಿಳೆಯರನ್ನು ಅಡ್ಡಗಟ್ಟಿಚಿನ್ನದ ಮಾಂಗಲ್ಯ ಸರ ಕಸಿದು ಪರಾರಿಯಾದ ಘಟನೆ ಬೆಂಗಳೂರು ಉತ್ತರ ತಾಲೂಕು ಹೊಟ್ಟಪ್ಪನಪಾಳ್ಯ ಗ್ರಾಮದಲ್ಲಿ ನಡೆದಿದೆ.

ಹೊಟ್ಟಪ್ಪನಪಾಳ್ಯದ ನಿವಾಸಿ ಶಕುಂತಲಾ ಮತ್ತು ಕವಿತಾ ಎಂಬುವರು ತಮ್ಮ ದ್ವಿಚಕ್ರ ವಾಹನದಲ್ಲಿ ಧರ್ಮಸ್ಥಳ ಸಂಘದ ಕಚೇರಿಗೆ ಸಹಿಯನ್ನು ಹಾಕಿ ಬರುತ್ತಿದ್ದರು. ಈ ಸಂದರ್ಭದಲ್ಲಿ ಹಿಂಬದಿಯಿಂದ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಮಹಿಳೆಯನ್ನು ಅಡ್ಡಗಟ್ಟಿ ಲಾಂಗ್‌ ತೋರಿಸಿ ಸುಮಾರು 2 ಲಕ್ಷ ಮೌಲ್ಯದ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಸಿದು ಕ್ಷಣಾರ್ಧದಲ್ಲಿ ಪರಾರಿ ಆಗಿದ್ದಾರೆ.

ಫೋನ್‌ ಕಳ್ಳತನದ ದೂರು ಕೊಡಲು ಹೋಗುವಾಗ ಬೈಕ್‌ ಕದ್ದ ಖದೀಮರು!

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶೇಷ ತಂಡ ರಚಿಸಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆಬೀಸಿದ್ದಾರೆ.