ಬಾಗಲಕೋಟೆ(ಫೆ.21): ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ MBBS ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ(ಶನಿವಾರ) ನಗರದಲ್ಲಿ ನಡೆದಿದೆ. ಸಿಂಧುರೇಖಾ ಸಿ.ಎಸ್ (25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. =

ಕುಮಾರೇಶ್ವರ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ಸಿಂಧುರೇಖಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದಳು. ಪೋಷಕರು ಬೆಂಗಳೂರಿಗೆ ತೆರಳಿದ್ದ ವೇಳೆ ಸಿಂಧುರೇಖಾ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಿಂಧುರೇಖಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿನಿ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.  

ಹುನಗುಂದ: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ನವನಗರದ ಕುಮಾರೇಶ್ವರ ಮೆಡಿಕಲ್ ಕಾಲೇಜ್ ಆವರಣದಲ್ಲಿರುವ ಬಾಡಗಿ ಮನೆಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.