Haveri: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ: ವೈದ್ಯಕೀಯ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಕಾರು ಮತ್ತು ನಡುವೆ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ (ಜು.02): ಕಾರು ಮತ್ತು ನಡುವೆ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಖಿಲ್ ಕುಂಬಾರ (27) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ವಿದ್ಯಾರ್ಥಿ ಅಖಿಲ್ ಮೂಲತಃ ಬೆಂಗಳೂರು ನಿವಾಸಿಯಾಗಿದ್ದು, ಬೆಳಗಾವಿಯಲ್ಲಿ ಎಂ.ಡಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಭಾನುವಾರ ಬೆಳಗಾವಿಯಿಂದ ದಾವಣಗೆರೆಗೆ ಹೋಗುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬಂಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಕಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಜೆಡಿಎಸ್‌ನಿಂದ ಹಣ ಪಡೆದು ಪಕ್ಷ ವಿರೋಧಿ ಚಟುವಟಿಕೆ: ಸಚಿವ ಚಲುವರಾಯಸ್ವಾಮಿ
ಬೈಕ್‌ಗೆ ಬಸ್ ಡಿಕ್ಕಿ, ಅಪಘಾತದಲ್ಲಿ ಯುವಕ ಸಾವು: ಮೂರು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕನೋರ್ವ ನಗರದ ಹೊರವಲಯದ ಕೋಳಾರ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾಹಕ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನೌಬಾದ್‌ನಲ್ಲಿ ಜಿಲ್ಲೆಯ ಕಮಲನಗರ ತಾಲೂಕಿನ ಬಳತ್ (ಬಿ) ಗ್ರಾಮದ ಯುವಕ ಅರುಣ ಕಾಶಿನಾಥ ಪಡಸಾಲೆ (33) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನಗರದ ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅರುಣ ಇಲ್ಲಿನ ನೌಬಾದ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಜೂ. 29ರಂದು ಮದುವೆಯಾಗಿದ್ದ ಅರುಣ, ತನ್ನ ಪತ್ನಿಯ ಗ್ರಾಮ ಹುಮನಾಬಾದ್ ತಾಲೂಕಿನ ಮುಗನೂರ್‌ನಿಂದ ನೌಬಾದ್‌ಗೆ ಬೈಕ್ ಮೇಲೆ ವಾಪಸ್ ಬರುವಾಗ ಸಾರಿಗೆ ಸಂಸ್ಥೆಯ ಬಸ್ ನೌಬಾದ್ ಬೈಪಾಸ್ ರಸ್ತೆಯ ಮೇಲೆ ಡಿಕ್ಕಿ ಹೊಡೆದಿದ್ದು, ತಲೆಗೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಅರುಣ್ ಸಾವಿನಿಂದ ಎರಡೂ ಕುಟುಂಬಗಳಲ್ಲಿ ದುಃಖ ಮಡುವುಗಟ್ಟಿದ್ದು, ನೂತನ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಿಂದಿನ ಕಾಮಗಾರಿ ನಡೆದಿಲ್ಲ, ಬಿಲ್‌ಪಾಸ್ ಮಾಡಬಾರದು: ಶಾಸಕ ನರೇಂದ್ರಸ್ವಾಮಿ ಸೂಚನೆ
ಬೈಕ್ ನಡೆಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ: ಹೆಲ್ಮಟ್ ಧರಿಸದೇ, ರಸ್ತೆ ನಿಯಮಗಳನ್ನು ಪಾಲಿಸದೇ ಬೈಕ್ ಚಲಾಯಿಸಿ ಅಪಘಾತಕ್ಕೀಡಾಗಿ 172 ಜೀವಗಳನ್ನು ಕಳೆದುಕೊಂಡಿದ್ದೇವೆ. ಬೈಕ್ ನಡೆಸುವ ಮುನ್ನ ನಿಮ್ಮನ್ನು ಅವಲಂಬಿತ ಪತ್ನಿ, ಪತಿ, ತಾಯಿ, ತಂದೆ, ಮಕ್ಕಳನ್ನು ಸ್ಮರಿಸಿಕೊಂಡು ಬೈಕ್ ನಡೆಸಿ, ನಾಲ್ಕು ಚಕ್ರದ ವಾಹನಗಳಲ್ಲಿ ಸೀಟ್ ಬೆಲ್ಟ್ ಹಾಕಿಕೊಳ್ಳಿ. ಅಪಘಾತದಲ್ಲಿ ಸಾವನ್ನಪ್ಪಿದ್ದ ಅರುಣ ಹೆಲ್ಮೆಟ್ ಧರಿಸಿದ್ದರೆ ಪ್ರಾಣವನ್ನು ಉಳಿಸಿಕೊಳ್ಳಬಹುದಿತ್ತೇನೋ ಎಂದು ಎಸ್‌ಪಿ ಚನ್ನಬಸವಣ್ಣ ಎಸ್‌ಎಲ್, ಸಾಮಾಜಿಕ ಜಾಲತಾಣದಲ್ಲಿ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿಸಿ ಕಳವಳ ವ್ಯಕ್ತಪಡಿಸಿದ್ದಾರೆ.