Robbery in Bengaluru: ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ!
ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಮತ್ತು ನಗದು ದರೋಡೆ (Robbery ಮಾಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ನಡೆದಿದೆ.
ಬೆಂಗಳೂರು (ಜ.1): ಪೊಲೀಸರ ಸೋಗಿನಲ್ಲಿ (Fake Police) ಮನೆಗೆ ನುಗ್ಗಿ ಚಿನ್ನಾಭರಣ ಮತ್ತು ನಗದು ದರೋಡೆ (Robbery) ಮಾಡಿರುವ ಘಟನೆ ಬೆಂಗಳೂರಿನ (Bengaluru) ಮಹಾಲಕ್ಷ್ಮೀ ಲೇಔಟ್ನಲ್ಲಿ ನಡೆದಿದೆ. ರಿಕವರಿ ನೆಪದಲ್ಲಿ ದರೋಡೆಕೋರರು ಮನಗೆ ನುಗ್ಗಿದ್ದರು ಎಂದು ತಿಳಿದುಬಂದಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ 5 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಮಹಾಲಕ್ಷ್ಮಿ ಲೇಔಟ್ (Mahalakshmi Layout) ವೆಂಕಟೇಶ್ ಎಂಬುವವರ ಮನೆಯಲ್ಲಿ ಘಟನೆ ನಡೆದಿದ್ದು ಮನೆಯಲ್ಲಿದ್ದವರನ್ನು ಬೆದರಿಸಿ ಹಣ , ಚಿನ್ನಭರಣ ಕಿತ್ತು ದರೋಡೆಕೋರರು ಪರಾರಿಯಾಗಿದ್ದಾರೆ. ಹೊಸ ವರ್ಷದ ಸಂಭ್ರಮಚಾರಣೆಯಲ್ಲಿದ್ದ ಫ್ಯಾಮೀಲಿ ಈಗ ನಗದು ಹಾಗೂ ಚಿನ್ನಾಭರಣ ಕಳೆದುಕೊಂಡು ದು:ಖದಲ್ಲಿದೆ.
ತಿಪಟೂರು ಪೊಲೀಸರು ಎಂದು ಮನೆಗೆ ಎಂಟ್ರಿ ಕೊಟ್ಡಿದ್ದ ದರೋಡೆಕೋರರು ಕೇಸ್ ಸಂಬಂಧ ರಿಕವರಿ ಇದೆಯೇಂದು ಹೇಳಿದ್ದಾರೆ. ನಂತರ ಪಿಸ್ತೂಲ್ ತೋರಿಸಿ ಚಿನ್ನಾಭರಣ ಮತ್ತು ನಗದು ದರೋಡೆ ಮಾಡಿದ್ದಾರೆ. ಮಹಾಲಕ್ಮೀಲೇಔಟ್ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೋಲಿಸ್ ಕಾರ್ಯಾಚರಣೆ ಮುಂದುವರೆಸಿದ್ದು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಲಸಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿದವರು ಮಾಡಿದ್ದೇ ಬೇರೆ
ಕೊರೋನಾ ಲಸಿಕೆ (Covid vaccine) ಹಾಕುವ ವೈದ್ಯ ಸಿಬ್ಬಂದಿ ಸೋಗಿನಲ್ಲಿ ಮನೆ ಪ್ರವೇಶಿಸಿ, ಬಳಿಕ ಮನೆಯ ಸದಸ್ಯರಿಗೆ ಪಿಸ್ತೂಲ್ (Gun) ತೋರಿಸಿ 50 ಗ್ರಾಂ ತೂಕದ ಚಿನ್ನದ ಸರ (Gold chain) ದೋಚಿ ಪರಾರಿಯಾಗಿರುವ ಸಿನಿಮೀಯ ಘಟನೆ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಡಹಗಲೇ ನಡೆದಿದೆ. ಯಶವಂತಪುರದ ಎಸ್‌ಬಿಎಂ ಕಾಲೋನಿ (SBM Colony) ನಿವಾಸಿ ಸಂಪತ್ ಸಿಂಗ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ.
ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಸಂಪತ್ ಸಿಂಗ್ ತಾಯಿ ಮತ್ತು ಪತ್ನಿ ಇಬ್ಬರು ಮಾತ್ರ ಮನೆಯಲ್ಲಿದ್ದರು. ಈ ವೇಳೆ ಕಾರು (Car) ಹಾಗೂ ದ್ವಿಚಕ್ರ ವಾಹನದಲ್ಲಿ ಬಂದಿರುವ ನಾಲ್ವರು ದುಷ್ಕರ್ಮಿಗಳು, ತಾವು ಕೊರೋನಾ ಲಸಿಕೆ ನೀಡಲು ಬಂದಿದ್ದೇವೆ ಎಂದು ಮನೆ ಪ್ರವೇಶಿಸಿದ್ದಾರೆ. ಬಳಿಕ ಏಕಾಏಕಿ ಪಿಸ್ತೂಲ್ ತೆಗೆದು ಇಬ್ಬರು ಮಹಿಳೆಯರನ್ನು ಹೆದರಿಸಿ, ಬೀರುವಿನಲ್ಲಿರಿಸಿದ್ದ 50 ಗ್ರಾಂ ತೂಕದ ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಘಟನೆ ಸಂಬಂಧ ಸಂಪತ್ ಸಿಂಗ್ ಅವರು ದೂರು ನೀಡಿದ ದೂರಿನ (Complaont) ಮೇರೆಗೆ ದುಷ್ಕರ್ಮಿಗಳ ಪತ್ತೆಗೆ ಮುಂದಾಗಿರುವ ಪೊಲೀಸರು, ಘಟನಾ ಸ್ಥಳದ ಸಮೀಪದ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ಪರಿಶೀಲಿಸಿದ್ದಾರೆ. ಆರೋಪಿಗಳ ಸುಳಿವು ಸಿಕ್ಕಿದ್ದು ಶೀಘ್ರದಲ್ಲೇ ಬಂಧಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಆಟೋ ಚಾಲಕನ ಸೋಗಿನಲ್ಲಿ ದರೋಡೆ: ಕುಖ್ಯಾತ ಕಳ್ಳನ ಬಂಧನ
ರಾತ್ರಿ ವೇಳೆ ಆಟೋ ಹತ್ತಿದ್ದ ಪ್ರಯಾಣಿಕನಿಗೆ ಚಾಕು ತೋರಿಸಿ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಪ್ರಕರಣ ಸಂಬಂಧ ಕುಖ್ಯಾತ ಕಳ್ಳನನ್ನು(Thief) ಉಪ್ಪಾರಪೇಟೆ ಠಾಣೆ ಪೊಲೀಸರು(Police) ಬಂಧಿಸಿದ್ದಾರೆ. ರಾಜಾನುಕುಂಟೆ ಸಮೀಪದ ಹೊನ್ನೇನಹಳ್ಳಿ ಮನೋಜ್ ಕುಮಾರ್ ಅಲಿಯಾಸ್ ಬಿಸ್ನಿ(19) ಬಂಧಿತ(Arrest). ವಿಚಾರಣೆ ವೇಳೆ ಆರೋಪಿ(Accused) ನೀಡಿದ ಮಾಹಿತಿ ಮೇರೆಗೆ 7 ಲಕ್ಷ ರು. ಮೌಲ್ಯದ 10 ಗ್ರಾಂ ತೂಕದ ಚಿನ್ನದ ಸರ, 2 ಕ್ಯಾಮೆರಾ, ಲೆನ್ಸ್‌ಗಳು, ಕೃತ್ಯಕ್ಕೆ ಬಳಸಿದ್ದ ಆಟೋ(Auto) ರಿಕ್ಷಾ ಹಾಗೂ ಚಾಕು ಜಪ್ತಿ ಮಾಡಲಾಗಿದೆ. ಸದರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯ ಮೂವರು ಸಹಚರರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:
1) Sukesh Fraud Case: ಪಿಎಂ ಕಚೇರಿ ಹೆಸರಲ್ಲಿ ಮಹಿಳೆಗೆ ಸುಕೇಶ್ 200 ಕೋಟಿ ಟೋಪಿ..!
2) CCB Busts Drug Racket: ಬೆಂಗ್ಳೂರಲ್ಲಿ ದಿನಸಿ ಪೂರೈಕೆ ಸೋಗಲ್ಲಿ ಮನೆಗೇ ಡ್ರಗ್ಸ್ ಪೂರೈಕೆ..!
3) Gold Theft| ಪ್ರಯಾಣಿಕರ ಸೋಗಲ್ಲಿ ಚಿನ್ನಾಭರಣ ಕದೀತಿದ್ದ ಖದೀಮರ ಬಂಧನ