Crime News: ಪ್ಲಂಬರ್‌ನಿಂದ ಅತ್ಯಾಚಾರ: ಮಗುವಿಗೆ ಜನ್ಮವಿತ್ತ ಅಪ್ರಾಪ್ತೆ
Crime News: ಪ್ಲಂಬರ್‌ನಿಂದ ಅತ್ಯಾಚಾರಕ್ಕೊಳಗಾದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ
ಕೋಲ್ಕತ್ತಾ (ಸೆ. 14): 36 ವರ್ಷದ ಪ್ಲಂಬರ್‌ನಿಂದ ಅತ್ಯಾಚಾರಕ್ಕೊಳಗಾದ 14 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಕೋಲ್ಕತ್ತಾದ (Kolkata) ಬಲ್ಲಿಗುಂಗೆ ಪ್ರದೇಶದಲ್ಲಿ ನಡೆದಿದೆ ಎಂದು ವರದಿಗಳು ತಿಳಿಸಿವೆ. ಅಪ್ರಾಪ್ತ ಬಾಲಕಿ ತನ್ನ ತಾಯಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದಾಗ ಈ ಘಟನೆ ನಡೆದಿದೆ. ಆದರೆ, ನವಜಾತ ಶಿಶು ಜನಿಸಿದ ಕೆಲವೇ ದಿನಗಳಲ್ಲಿ ಸಾವನ್ನಪ್ಪಿದ್ದು, ಸಂತ್ರಸ್ತ ಬಾಲಕಿ ಕುಟುಂಬದವರು ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತನ ಮೇಲೆ ಅತ್ಯಾಚಾರದ ವಿವಿಧ ಸೆಕ್ಷನ್‌ಗಳು ಮತ್ತು ಪೋಕ್ಸೋ ಕಾಯ್ದೆಯ (POCSO Act) ಸೆಕ್ಷನ್ 6ರ ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಪ್ಲಂಬರ್ ತಮ್ಮ ನಿವಾಸಕ್ಕೆ ಆಗಾಗ್ಗೆ ಭೇಟಿ ನೀಡುತ್ತಿದ್ದ ಮತ್ತು ಅಪ್ರಾಪ್ತ ಬಾಲಕಿಯೊಂದಿಗೆ ಬಾಂಧವ್ಯವನ್ನು ಬೆಳೆಸಿಕೊಂಡಿದ್ದ ಎಂದು ಬಾಲಕಿ ತಾಯಿ ಎಫ್‌ಐಆರ್‌ನಲ್ಲಿ (FIR) ತಿಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
“ತಾಯಿಯ ಆರೋಪದಂತೆ, ಸುಮಾರು ಒಂಬತ್ತು ತಿಂಗಳ ಹಿಂದೆ, ಪ್ಲಂಬರ್ ಬಾಲಕಿ ಒಂಟಿಯಾಗಿರುವುದರ ಲಾಭವನ್ನು ಪಡೆದುಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು ಮತ್ತು ಗಂಡು ಮಗು ಜನಿಸಿದೆ, ಆದರೆ ಅದು ಸಾವನ್ನಪ್ಪಿದೆ" ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತ ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಅಧಿಕಾರಿಯೊಬ್ಬರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದ್ದಾರೆ.
ಕ್ಲಿನಿಕಲ್ಲಿ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೈದ್ಯನ ವಿರುದ್ಧ ಪೋಕ್ಸೋ ಕೇಸ್
ಹಾವೇರಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಗೆ 20 ವರ್ಷ ಶಿಕ್ಷೆ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 42 ವರ್ಷದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ (ಶೀಘ್ರಗತಿ ನ್ಯಾಯಾಲಯ-1) 20 ವರ್ಷ ಜೈಲು ಶಿಕ್ಷೆ ಹಾಗೂ .11 ಸಾವಿರ ದಂಡ ವಿಧಿಸಿದೆ.
ರಾಣಿಬೆನ್ನೂರಿನ ದೊಡ್ಡಪೇಟೆ ಅಂಭಾಭವಾನಿ ದೇವಸ್ಥಾನದ ಬಳಿಯ ಆರೋಪಿ ನವೆಂಬರ್ 25, 2020ರಂದು ಎದುರು ಮನೆಯ ಎರಡೂವರೆ ವರ್ಷದ ಮಗುವನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಕುರಿತು ಪೋಷಕರು ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ರಾಣಿಬೆನ್ನೂರ ಶಹರ ಪೊಲೀಸ್ ಠಾಣೆ ಸಿಪಿಐ ಎಂ.ಐ.ಗೌಡಪ್ಪಗೌಡರ ಅವರು ತನಿಖೆ ಮಾಡಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗೌಡ ಪಾಟೀಲ ಅವರು ತೀರ್ಪು ನೀಡಿ ಕಲಂ 376(ಎ ಬಿ)ಅನ್ವಯ ಅಪರಾಧಿ ಚನ್ನವೀರೇಶ ಬಸವರಾಜ ಎಮ್ಮಿಗೆ 20 ವರ್ಷಗಳ ಶಿಕ್ಷೆ ಹಾಗೂ ವಿವಿಧ ಕಲಂಗಳಡಿ .11 ಸಾವಿರ ದಂಡವನ್ನು ವಿಧಿಸಿದ್ದಾರೆ.
ಸಂತ್ರಸ್ತೆಗೆ ನೊಂದವರ ಪರಿಹಾರ ನಿಧಿಯಿಂದ .5 ಲಕ್ಷ ಪರಿಹಾರ ನೀಡಲು ಆದೇಶ ಮಾಡಲಾಗಿದೆ ಎಂದು ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ ಸರ್ಕಾರಿ ಅಭಿಯೋಜಕರಾದ ಸಿದ್ಧಾರೂಢ ಗೆಜ್ಜಿಹಳ್ಳಿ ತಿಳಿಸಿದ್ದಾರೆ.