ಮನೆ ಬಳಿ ಮಕ್ಕಳು ಮೂತ್ರ ಮಾಡಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಪಾಪಿಗಳು!

ಮೂಗು ಕತ್ತರಿಸಿದ್ದರಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದ ಅಂಗನವಾಡಿ ಸಹಾಯಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಬಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಾಗಿರುವ ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ (50) ಅವರ ಮೂಗಿನ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಸಿಡಿಪಿಒ ಸುಮಿತ್ರಾ ತಿಳಿಸಿದ್ದಾರೆ.

Miscreants cut off Anganwadi helper sugandha more nose for children urinating near her house at belagavi rav

 ಬೆಳಗಾವಿ (ಜ.4) :  ಮೂಗು ಕತ್ತರಿಸಿದ್ದರಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದ ಅಂಗನವಾಡಿ ಸಹಾಯಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಬಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಾಗಿರುವ ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ (50) ಅವರ ಮೂಗಿನ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಸಿಡಿಪಿಒ ಸುಮಿತ್ರಾ ತಿಳಿಸಿದ್ದಾರೆ.

ಆರೋಪಿ ಕಲ್ಯಾಣಿ ಮೋರೆ ಮತ್ತು ಅಂಗನವಾಡಿ ಕಾರ್ಯಕರ್ತೆ ಮೀರಾ ಮೋರೆ ನಡುವೆ ಕಲಹಗಳಿದ್ದವು. ಇದೇ ವೇಳೆ ಮಕ್ಕಳು ಕಲ್ಯಾಣಿ ಮೋರೆ ಮನೆ ಆವರಣದ ಬಳಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ಇದರಿಂದ ಕೆರಳಿದ ಆರೋಪಿ ಕಲ್ಯಾಣಿ ಮೋರೆ ಅಂಗನವಾಡಿ ಕಾರ್ಯಕರ್ತೆ ಮೀರಾ ಮೋರೆ ಮೇಲೆ ಹಲ್ಲೆಗೆ ಮುಂದಾದ. ಈ ವೇಳೆ ಗಲಾಟೆ ಬಿಡಿಸಲು ಮಧ್ಯ ಪ್ರವೇಶಿಸಿದ ಸಹಾಯಕಿ ಸುಗಂಧಾ ಅವರ ಮೂಗಿಗೆ ಹರಿತ ಆಯುಧದಿಂದ ಹೊಡೆದ್ದಿದ್ದಾನೆ. ಇದರಿಂದಾಗಿ ಸುಗಂಧಾ ಮೂಗಿನ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಆರಂಭದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದರು ಎಂದರು. 

 

ಬೆಳಗಾವಿ: ಮಹಿಳೆ ಮೇಲೆ ಹಲ್ಲೆ ಪ್ರಕರಣಕ್ಕೆ ತಿರುವು..!

ಮಂಗಳವಾರ ಮೂಗಿನ ಯಶಸ್ವಿ ಶಸ್ತ್ರಚಿಕಿತ್ಸೆಯಾಗಿದ್ದು,ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಈ ಪ್ರಕರಣದ ಕುರಿತು ಕಾಕತಿ ಠಾಣೆಗೆ ದೂರು ನೀಡಿದ್ದೇವೆ. ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿರುವುದು ಅಮಾನವೀಯ ಘಟನೆ ಆಗಿದೆ. ಈ ವಿಚಾರವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಗಮನಕ್ಕೆ ತರಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಏನಿದು ಘಟನೆ?: ಅಂಗನವಾಡಿ ಶಾಲೆ ಮಕ್ಕಳು ತಮ್ಮ ಮನೆಯ ಕಡೆಗೆ ಬಂದು ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಅಸಮಾಧಾನಗೊಂಡು ಮಹಿಳೆಯೊಬ್ಬಳು ಕುಡಗೋಲಿನಿಂದ ಅಂಗನವಾಡಿ ಸಹಾಯಕಿಯ ಮೇಲೆಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಸೋಮವಾರ ಬೆಳಗಾವಿ ತಾಲೂಕಿನ ಬಸೂರ್ತೆ ಗ್ರಾಮದಲ್ಲಿ ನಡೆದಿತ್ತು.

ಕಠಿಣ ಕ್ರಮಕ್ಕೆ ಆಗ್ರಹ:

ಕ್ಲುಲ್ಲಕ ಕಾರಣಕ್ಕೆ ಅಂಗನವಾಡಿ ಸಹಾಯಕಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದನ್ನು ಖಂಡಿಸಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಲೋಕಸಭಾ ಚುನಾವಣೆ 2024: ಬೆಳಗಾವಿಯಿಂದ ಬಾಲಚಂದ್ರ ಜಾರಕಿಹೊಳಿ ಆಖಾಡಕ್ಕೆ?

ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದ ಸುಗಂಧಾ ಮೋರೆ ಎಂಬ ಅಂಗನವಾಡಿ ಸಹಾಯಕಿ ಮೇಲೆ ಮಾಡಿದ ಕಲ್ಯಾಣಿ ಮೋರೆ ಎಂಬಾತನ ವಿರುದ್ಧ ಕಾನೂನು ರೀತಿ ಶಿಸ್ತು ಕ್ರಮ ಜರುಗಿಸಬೇಕು. ಈ ಮೂಲಕ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಹಲ್ಲೆ ಮಾಡುವವರಿಗೆ ಸಂದೇಶ ರವಾನೆಯಾಗಬೇಕು. ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios