ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ನಡೆದಿದೆ.  ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್‌ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. 

ದಕ್ಷಿಣ ಕನ್ನಡ(ಜೂ.09): ನರೇಂದ್ರ ಮೋದಿ ಅವರು ಇಂದು(ಭಾನುವಾರ) ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯನ್ನ ಮಾಡಿದ್ದಾರೆ.

ಅದೇ ರೀತಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ನಡೆದಿದೆ. ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್‌ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಮೋದಿ ಪದಗ್ರಹಣ ಹಿನ್ನೆಲೆಯಲ್ಲಿ ಬೋಳಿಯಾರ್‌ನಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು. 

ದಾಬಸ್‌ಪೇಟೆ: ಓವರ್ ಟೇಕ್ ಮಾಡುವ ವಿಚಾರಕ್ಕೆ ಜಗಳ, ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಚಾಕು ಇರಿತ

ಯುವಕರು ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಚಾಕುವಿನಿಂದ ಯುವಕರಿಗೆ ಇರಿದಿದ್ದಾರೆ. ಸದ್ಯ ಇಬ್ಬರಿಗೂ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.