ಪೆಟ್ರೋಲ್ ಬಂಕ್ ನೌಕರನನ್ನು ಬೆದರಿಸಿ2 ಮೊಬೈಲ್, ₹4500 ಸುಲಿಗೆ!
) ಗ್ರಾಹಕನ ಸೋಗಿನಲ್ಲಿ ಬಂದ ದುಷ್ಕರ್ಮಿ ಪೆಟ್ರೋಲ್ ಬಂಕ್ ನೌಕರನ ಬೆದರಿಸಿ ಹಣ ಹಾಗೂ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿರುವ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು (ಡಿ.9) ಗ್ರಾಹಕನ ಸೋಗಿನಲ್ಲಿ ಬಂದ ದುಷ್ಕರ್ಮಿ ಪೆಟ್ರೋಲ್ ಬಂಕ್ ನೌಕರನ ಬೆದರಿಸಿ ಹಣ ಹಾಗೂ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿರುವ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬನ್ನೇರುಘಟ್ಟ ರಸ್ತೆಯ ಶೆಲ್ ಪೆಟ್ರೋಲ್ ಬಂಕ್‌ನಲ್ಲಿ ಗುರುವಾರ ತಡರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ಪಟ್ರೋಲ್ ಬಂಕ್ ನೌಕರ ಸ್ವರಾಜ್ ಎಂಬುವವನಿಂದ ಸುಲಿಗೆಕೋರ 2 ಮೊಬೈಲ್ ಹಾಗೂ ₹4,500 ನಗದು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ಸಂಬಂಧ ದೂರು ಪಡೆದು ಪ್ರಕರಣ ದಾಖಲಿಸಿ ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ದುಷ್ಕರ್ಮಿಯ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮ ಮೆಟ್ರೋದಲ್ಲಿ ಸಮಸ್ಯೆ ಆಯ್ತಾ? ತುರ್ತು ಎಚ್ಚರಿಕೆ ಗಂಟೆ ಬಳಸಿ
ಸ್ವರಾಜ್ ರಾತ್ರಿ ಪಾಳಿ ಕರ್ತವ್ಯದಲ್ಲಿದ್ದರು. ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದಿರುವ ಅಪರಿಚಿತ, ಪೆಟ್ರೋಲ್ ಹಾಕಿಸಿಕೊಂಡಿದ್ದಾನೆ. ಬಳಿಕ ಹಣ ಕೊಡದೆ ಮಾರಕಾಸ್ತ್ರ ತೋರಿಸಿ ಸ್ವರಾಜ್‌ನನ್ನು ಬೆದರಿಸಿ, ಎರಡು ಮೊಬೈಲ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ವೇಳೆ ಸ್ವರಾಜ್ ಸಹಾಯಕ್ಕಾಗಿ ಕೂಗಿದ್ದು, ಉಳಿದ ಸಿಬ್ಬಂದಿ ಬರುವ ವೇಳೆಗೆ ದುಷ್ಕರ್ಮಿ ತಪ್ಪಿಸಿಕೊಂಡಿದ್ದಾನೆ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮ ಮೆಟ್ರೋ: ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿ ಮೆಟ್ರೋ ಭದ್ರತಾ ಸಿಬ್ಬಂದಿ