ಮಸೀದಿ ಸುತ್ತಮುತ್ತ ಹಾಗೂ ಸಿರವಾರ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.  ಘಟನೆ ಬಳಿಕ ರಾಯಚೂರು ಎಸ್‌ಪಿ ಪುಟ್ಟಮಾದಯ್ಯ ಅವರು ಸಿರವಾರ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ರಾಯಚೂರು(ಜು.31): ಮಸೀದಿ ಒಳಗೆ ಕಿಡಿಗೇಡಿಗಳು ಬಿಯರ್ ಬಾಟಲ್‌ಗಳನ್ನ ಎಸೆದ ಘಟನೆ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ನಡೆದಿದೆ. ಮಸೀದಿ ಒಳಗೆ ಕಿಡಿಗೇಡಿಗಳು ಬಿಯರ್ ಬಾಟಲ್‌ಗಳನ್ನ ಎಸೆದಿದ್ದರಿಂದ ಮುಸ್ಲಿಂ ಮುಖಂಡರು ರಾತ್ರೋರಾತ್ರಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೂಡಲೇ ‌ಅಲರ್ಟ್ ಆದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನ ವಶಕ್ಕೆ ಪಡೆದಿದ್ದಾರೆ. ಈ ಸಂಬಂಭ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕೆಆರ್‌ಟಿಸಿಗೆ ಹೈಕೋರ್ಟ್ ದಂಡ, ಬಸ್‌ನಿಂದ ಬಿದ್ದು ಸಾವನ್ನಪ್ಪಿದ ಮಹಿಳೆಗೆ 26 ಲಕ್ಷ ರು. ಪರಿಹಾರ

ಮಸೀದಿ ಸುತ್ತಮುತ್ತ ಹಾಗೂ ಸಿರವಾರ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಘಟನೆ ಬಳಿಕ ರಾಯಚೂರು ಎಸ್‌ಪಿ ಪುಟ್ಟಮಾದಯ್ಯ ಅವರು ಸಿರವಾರ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.