ಕದ್ದ ಬೈಕ್‌ನಲ್ಲೇ ಫೀಲ್ಡ್‌ಗಿಳಿಯುತ್ತಿದ್ದ ಆಸಾಮಿ; ಮೊಬೈಲ್‌ ಹೇಗೆ ದೋಚುತ್ತಿದ್ದ ಗೊತ್ತಾ?

ಕದ್ದ ದ್ವಿಚಕ್ರ ವಾಹನಗಳಲ್ಲಿ ಸುತ್ತಾಡಿ ರಸ್ತೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್‌ ಸುಲಿಗೆ ಮಾಡುತ್ತಿದ್ದ ರೌಡಿ ಶೀಟರ್‌ನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Mobile theft case accused arrested bengaluru rav

ಬೆಂಗಳೂರು (ಫೆ.17): ಕದ್ದ ದ್ವಿಚಕ್ರ ವಾಹನಗಳಲ್ಲಿ ಸುತ್ತಾಡಿ ರಸ್ತೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್‌ ಸುಲಿಗೆ ಮಾಡುತ್ತಿದ್ದ ರೌಡಿ ಶೀಟರ್‌ನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಾಗಡಿ ರಸ್ತೆ ನಿವಾಸಿ ಕುಮಾರೇಶ್‌(33) ಬಂಧಿತ. ಆರೋಪಿಯಿಂದ ₹3 ಲಕ್ಷ ಮೌಲ್ಯದ ಏಳು ದ್ವಿಚಕ್ರ ವಾಹನಗಳು ಹಾಗೂ ಆರು ಮೊಬೈಲ್‌ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಅಶೋಕನಗರ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಕೋಲಾರದಿಂದ ಬೆಂಗಳೂರಿಗೆ ಬಂದು ಬೈಕ್‌ ಕದ್ದು ಪರಾರಿಯಾಗುತ್ತಿದ್ದ ಮೂವರು ಕಳ್ಳರು ಬಂಧನ

ಆರೋಪಿ ಕುಮಾರೇಶ್‌ ಕಾಟನ್‌ಪೇಟೆ ಠಾಣೆ ರೌಡಿ ಶೀಟರ್‌ ಆಗಿದ್ದಾನೆ. ಅಪರಾಧ ಹಿನ್ನೆಲೆಯ ಈತ ಈ ಹಿಂದೆ ಹಲವು ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ. ಜಾಮೀನು ಪಡೆದು ಹೊರಬಂದ ಬಳಿಕವೂ ಅಪರಾಧ ಕೃತ್ಯಗಳನ್ನು ಮುಂದುವರೆಸಿದ್ದ. ನಗರದ ವಿವಿಧೆಡೆ ಸುತ್ತಾಡಿ ಮನೆ, ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದ. ಬಳಿಕ ಆ ದ್ವಿಚಕ್ರ ವಾಹನ ಬಳಸಿಕೊಂಡು ರಸ್ತೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್‌ ಸುಲಿಗೆ ಮಾಡುತ್ತಿದ್ದ. ಬಳಿಕ ನಿರ್ಜನ ಪ್ರದೇಶಗಳಲ್ಲಿ ಆ ದ್ವಿಚಕ್ರ ವಾಹನ ಬಿಟ್ಟು ಪರಾರಿಯಾಗುವ ಪ್ರವೃತ್ತಿ ಹೊಂದಿದ್ದಾನೆ.

ಬೆಂಗಳೂರು: ಕೇಳಿದ ಬೈಕ್‌ ಕದ್ದು ಕೊಡ್ತಿದ್ದ ಗ್ಯಾಂಗ್‌ ಅಂದರ್‌..!

ಈತನ ಬಂಧನದಿಂದ ಅಶೋಕನಗರ, ಕಲಾಸಿಪಾಳ್ಯ, ಕಾಟನ್‌ಪೇಟೆ, ರಾಜಗೋಪಾಲನಗರ, ಅತ್ತಿಬೆಲೆ ಠಾಣೆಗಳಲ್ಲಿ ದಾಖಲಾಗಿದ್ದ ಏಳು ದ್ವಿಚಕ್ರ ವಾಹನ ಕಳವು ಹಾಗೂ ಆರು ಮೊಬೈಲ್‌ ಸುಲಿಗೆ ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios