ರಾಮನಗರದಲ್ಲಿ ಅನ್ಯಕೋಮಿನ ಯುವಕ ಮತ್ತು ಯುವತಿಯೊಂದಿಗೆ ಸಂಚರಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ ಮುಸ್ಲಿಂ ಯುವಕರು ನೈತಿಕ ಪೊಲೀಸ್ ಗಿರಿ ನ
ರಾಮನಗರ (ಜೂ.9): ಅನ್ಯಕೋಮಿನ ಯುವಕ, ಮತ್ತೊಂದು ಕೋಮಿನ ಯುವತಿಯೊಂದಿಗೆ ಸಂಚರಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ ಮುಸ್ಲಿಂ ಯುವಕರು ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರ-ಚನ್ನಪಟ್ಟಣ ನಡುವೆ ಹಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಯುವಕನೊಬ್ಬ ಮತ್ತೊಂದು ಕೋಮಿನ ಯುವತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ತೆರಳುತ್ತಿದ್ದನು. ಇದನ್ನು ನೋಡಿದ ಕೆಲ ಮುಸ್ಲಿಂ ಯುವಕರು ಬೈಕ್ ಅನ್ನು ಅಡ್ಡಗಟ್ಟಿದ್ದಾರೆ. ನೀನು ಯಾರು, ಎಲ್ಲಿಂದ ಬಂದಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಬೈಕಿನಲ್ಲಿದ್ದ ಯುವತಿ ರಾಮನಗರದ ಯಾರಬ್ ನಗರ ಬಡಾವಣೆ ವಾಸಿ ಎಂದು ತಿಳಿದು ಬಂದಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಗಮನಕ್ಕೆ ಬಂದಿದೆ. ವಿಡಿಯೋ ಪರಿಶೀಲನೆ ನಡೆಸಿದ ಬಿಡದಿ ಪೊಲೀಸರು ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಮುಕ್ಸೂದ್, ಅಕ್ಮಲ್‌ಪಾಷಾ ಬಂಧಿತ ಆರೋಪಿಗಳು. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯ ಭೈರಮಂಗಲ ಕ್ರಾಸ್ ಬಳಿ ಘಟನೆ ನಡೆದಿದೆ.
ಮುಸ್ಲಿಂ ಯುವತಿ ಜೊತೆ ಎಲ್ಲಿಗೆ ಹೋಗ್ತಿದ್ದಿಯಾ?
ಹಿಂದೂ ಯುವಕನ ಜೊತೆ ಬೈಕ್‌ನಲ್ಲಿ ಕುಳಿತಿದ್ದ ಮುಸ್ಲಿಂ ಯುವತಿ ಈ ವೇಳೆ ಬೈಕ್ ಅಡ್ಡಗಟ್ಟಿ ಮುಸ್ಲಿಂ ಯುವತಿಯೊಂದಿಗೆ ಎಲ್ಲಿಗೆ ಹೋಗ್ತಿದ್ದಿಯಾ? ಎಂದು ಯುವಕನಿಗೆ ಅವಾಜ್ ಹಾಕಿದ್ದ ಆರೋಪಿಗಳು. ಬೈಕ್ ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ಮಾಡಿದ್ದಲ್ಲದೇ ಘಟನೆ ವಿಡಿಯೋ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದ ಕಿಡಿಗೇಡಿಗಳು. ಈ ವಿಡಿಯೋ ವೈರಲ್ ಆಗಿದೆ. ಸದ್ಯ ಬಂಧಿತ ಆರೋಪಿಗಳ ವಿರುದ್ಧ ಕೋಮು ಗಲಭೆಗೆ ಉತ್ತೇಜನ ನೀಡುವ ಆರೋಪದಡಿ ಸುಮೋಟೊ ಕೇಸ್ ದಾಖಲಿಸಲಾಗಿದೆ.
