Asianet Suvarna News Asianet Suvarna News

ತುಮಕೂರು: ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ!

ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ.

More than 30 children including 2 teachers are ill due to food poisoning in Tumkur rav
Author
First Published Feb 8, 2024, 6:10 PM IST

ತುಮಕೂರು (ಫೆ.8): ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ.

ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ನೀಡಲಾಗಿದ್ದ ಮೊಸರನ್ನವನ್ನು ಮಕ್ಕಳು ಸೇವನೆ ಮಾಡಿದ್ದಾರೆ. ರಾತ್ರಿ ವೇಳೆಗೆ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಕೂಡಲೇ ಪೋಷಕರು ಕುಣಿಗಲ್ ತಾಲೂಕಿನ ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಕಲಬುರಗಿ: ಸರ್ಕಾರಿ ಶಾಲೆಯಲ್ಲಿ ಮಕ್ಕಳ ಬಿಸಿಯೂಟಕ್ಕೆ ಕಂಟಕ..!

10 ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಸ್ಥಳಕ್ಕೆ ಇದೀಗ ಕುಣಿಗಲ್ ಟಿಹೆಚ್​ಒ ಡಾ. ಮರಿಯಪ್ಪ, ಹಾಗೂ ಆರೋಗ್ಯಾಧಿಕಾರಿ ಬೋರೆಗೌಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ತುಮಕೂರು : ಬಿಸಿಯೂಟದಲ್ಲಿ ಹುಳು ಪತ್ತೆ: ಆತಂಕದಲ್ಲಿ ವಿದ್ಯಾರ್ಥಿಗಳು

Follow Us:
Download App:
  • android
  • ios