ಗೃಹಪ್ರವೇಶ ಊಟ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ 40ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡ ಘಟನೆ ಮೈಸೂರು ತಾಲೂಕಿನ ಬಾರ್ಬಳ್ಳಿ ಗ್ರಾಮದಲ್ಲಿ ನಡೆದಿದೆ.
ಮೈಸೂರು (ಜೂ.4): ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ 40ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡ ಘಟನೆ ಮೈಸೂರು ತಾಲೂಕಿನ ಬಾರ್ಬಳ್ಳಿ ಗ್ರಾಮದಲ್ಲಿ ನಡೆದಿದೆ.
ಮೇ.31ರಂದು ನಡೆದಿದ್ದ ಗೃಹಪ್ರವೇಶ, ನೂರಾರು ಜನರು ಗೃಹಪ್ರವೇಶಕ್ಕೆ ಆಗಮಿಸಿದ್ದರು. ಗೃಹಪ್ರವೇಶಕ್ಕೆ ಬಂದವರು ಎಲ್ಲರೂ ಊಟ ಸೇವಿಸಿದ್ದರು. ಊಟ ಸೇವಿಸಿದ ಬಳಿಕ ಭಾನುವಾರ 26 ಜನರಿಗೆ ಹಾಗೂ ಸೋಮವಾರ 13 ಜನರಿಗೆ ವಾಂತಿ ಭೇದಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಅವರ ಪೈಕಿ 17ಕ್ಕೂ ಹೆಚ್ಚು ಮಂದಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಉಳಿದವರು ಚೇತರಿಸಿಕೊಂಡಿದ್ದಾರೆ.
ಫುಡ್ ಪಾಯ್ಸನ್‌ನಿಂದ ಜನರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಎಲ್ಲರೂ ಚೇತರಿಸಿಕೊಂಡಿದ್ದಾರೆ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ದೇವರ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು
350ಕ್ಕೂ ಹೆಚ್ಚು ಮಂದಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಊಟ ಮಾಡಿದ್ದಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಗ್ರಾಮಸ್ಥರು ತಿಳಿಸಿದ್ದಾರೆ. ಸಮಾರಂಭದಲ್ಲಿ ಆಹಾರ ಸೇವಿಸಿದ ಕಾರಣದಿಂದ ಅಥವಾ ಗ್ರಾಮದಲ್ಲಿ ಸರಬರಾಜು ಮಾಡಿದ ಕಲುಷಿತ ನೀರು ಕುಡಿದ ಕಾರಣದಿಂದ ಈ ಘಟನೆ ಸಂಭವಿಸಿದೆಯೇ ಎಂಬುದು ನಮಗೆ ತಿಳಿದಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಇದೇ ವೇಳೆ ಗ್ರಾಮಕ್ಕೆ ಭೇಟಿ ನೀಡಿದ ತಾಲ್ಲೂಕು ಆರೋಗ್ಯಾಧಿಕಾರಿಗಳು, ಆಹಾರ ಮತ್ತು ಟ್ಯಾಂಕ್‌ಗಳಲ್ಲಿನ ನೀರಿನ ಮಾದರಿಗಳನ್ನು ಪರಿಶೀಲನೆಗಾಗಿ ಸಂಗ್ರಹಿಸಿದ್ದಾರೆ.