* ಸರ್ಕಾರಿ ಮತ್ತು  ಖಾಸಗಿ ಬಸ್ ನಡುವೆ ಅಪಘಾತ  *40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ* ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ

ಶಿವಮೊಗ್ಗ, (ಜುಲೈ.01): ಶಿವಮೊಗ್ಗ ತಾಲೂಕಿನ ತೋಟದಕೆರೆ ಬಳಿ ಕರ್ನಾಟಕ ರಸ್ತೆ ಸಾರಿಗೆ ಬಸ್ (KSRTC) ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಖಾಸಗಿ ಬಸ್ ಚಾಲಕ ಶ್ರೀಧರ್‌ ಸ್ಥಿತಿ ಗಂಭೀರವಾಗಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ. 

ಮಾಡಿದ್ದುಣ್ಣೋ ಮಾರಾಯ: ಆ್ಯಂಬುಲೆನ್ಸ್‌ಗೆ ದಾರಿ ಬಿಡದೇ ಕಾರಿನ ಓಟ: ವೇಗವಾಗಿ ಸಾಗಿ ಅಪಘಾತ

ಖಾಸಗಿ ಬಸ್ ಕೆಕೆಬಿ ಶಿವಮೊಗ್ಗದಿಂದ ಶೃಂಗೇರಿ ಹೊರಟಿತ್ತು. ಸರಕಾರಿ ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಬರುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ನಲ್ಲಿ 35ಕ್ಕೂ ಹೆ್ಚ್ಚು ಮತ್ತು ಕೆಎಸ್ ಆರ್ ಟಿಸಿ ಬಸ್ ನಲ್ಲಿ 45ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.