Asianet Suvarna News Asianet Suvarna News

ಬೆಳಗ್ಗೆ ಜೈಲು ಸಂಜೆಗೆ ಬೇಲು: ಶಿಕಾರಿಪುರ ಕಲ್ಲು ತೂರಾಟದ ಆರೋಪಿಗಳಿಗೆ ಜಾಮೀನು ಮಂಜೂರು

ಒಳ ಮೀಸಲಾತಿ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಶಿಕಾರಿಪುರದಲ್ಲಿರುವ ಮನೆಯ ಮೇಲೆ ಕಲ್ಲೆಸೆತ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Morning Jail Evening Bail Shikaripura stone pelting accused granted bail sat
Author
First Published Mar 28, 2023, 8:15 PM IST

ಶಿವಮೊಗ್ಗ (ಮಾ.28): ಮಾಜಿ ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಅವರ ಶಿಕಾರಿಪುರದಲ್ಲಿರುವ ಮನೆಯ ಮೇಲೆ ಕಲ್ಲೆಸೆದ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ರಾಜಯ ಸರ್ಕಾರದ ಒಳಮೀಸಲಾತಿಯಿಂದ ಬಂಜಾರ ಸಮುದಾಯಕ್ಕೆ ತೀವ್ರ ಅನ್ಯಾಯವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಸಮುದಾಯದ ಜನರು ಶಿಕಾರಿಪುರ ಪಟ್ಟಣದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆಯ ಮೇಲೆ ನಿನ್ನೆ ಕಲ್ಲು ತೂರಾಟ ಮಾಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು  ಶಿಕಾರಿಪುರದ ಕಾಂಗ್ರೆಸ್ ಮುಖಂಡರಾದ ರಾಘವೇಂದ್ರ ನಾಯ್ಕ, ಪುನೀತ್ ನಾಯ್ಕ ಹಾಗೂ ಪ್ರೇಮ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದರು. ಆದರೆ, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣವನ್ನು ವಿಚಾರಣೆ ಮಾಡಿದ ನ್ಯಾಯಾಲಯದಲ್ಲಿ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬಿಎಸ್‌ವೈ ಮನೆ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌! ಕಾಣದ 'ಕೈ'ಗಳು ಪೊಲೀಸರ ವಶಕ್ಕೆ!

ಪಿಎಸ್ಐ ಸೇರಿ ಐವರು ಪೊಲೀಸರಿಗೆ ಗಾಯ: ಶಿಕಾರಿಪುರದಲ್ಲಿ ಒಳಮೀಸಲಾತಿಯನ್ನು ವಿರೋಧಿಸಿ ನಡೆದ ಕಲ್ಲು ತೂರಾಟ ಘಟನೆಯಲ್ಲಿ ಪೊಲೀಸರ ಮೇಲೆ ಕಲ್ಲುಗಳು ಬಿದ್ದು ಐವರು ಪೊಲೀಸರು ಗಾಯಗೊಂಡಿದ್ದರು. ಕಲ್ಲು ತೂರಾಟ ಹಾಗೂ ಮಾಜಿ ಮುಖ್ಯಮಂತ್ರಿಗಳ ಮನೆಯ ದಾಂದಲೆ ಎಬ್ಬಿಸಿದ ಹಿನ್ನೆಲೆಯಲ್ಲಿ ಶಿಕಾರಿಪುರದ ಕಾಂಗ್ರೆಸ್ ಮುಖಂಡರಾದ ರಾಘವೇಂದ್ರ ನಾಯ್ಕ, ಪುನೀತ್ ನಾಯ್ಕ ಹಾಗೂ ಪ್ರೇಮ್ ಕುಮಾರ್ ರನ್ನು ಬಂಧಿಸಲಾಗಿತ್ತು. ಪೊಲೀಸರ ಮೇಲೆ ಕಲ್ಲು ತೂರಾಟದಲ್ಲಿ ಗಾಯಗಳಾದ ಹಿನ್ನೆಲೆಯಲ್ಲಿ ಶಿಕಾರಿಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದ ಪೊಲೀಸರ ಸುಮೋಟೋ ದೂರಿನ ಅನ್ವಯ ಈ ಮೂವರನ್ನು ಬಂಧಿಸಲಾಗಿತ್ತು. ಕಲ್ಲು ತೂರಾಟದ ಘಟನೆಯಲ್ಲಿ ಇಬ್ಬರು ಪಿಎಸ್ಐ ಸೇರಿದಂತೆ ಮೂವರು ಪೊಲೀಸರಿಗೆ ಕಲ್ಲುತೂರಾಟದಲ್ಲಿ ಗಾಯ ಆಗಿತ್ತು.

ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು: ಶಿಕಾರಿಪುರ ಪೊಲೀಸರು ಐಪಿಸಿ ಸೆಕ್ಷನ್ 353 ಅಡಿಯಲ್ಲಿ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಿ ನ್ಯಾಯಕ್ಕೆ ಹಾಜರುಪಡಿಸಿದ್ದರು. ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಶಿಕಾರಿಪುರದ ಹಿರಿಯ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಮೂವರಿಗೂ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.  ಈ ಮುಖಂಡರ ಬಂಧನದ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕಿನ ವಿವಿಧ ಬಂಜಾರ ತಾಂಡಗಳು ಸೇರಿದಂತೆ ಜಿಲ್ಲೆಯ ಬಂಜಾರ ಪ್ರಮುಖರು ಮತ್ತೊಂದು ಸುತ್ತಿನ ತೀವ್ರ ಪ್ರತಿಭಟನೆಗೆ ಮುಂದಾಗಿದ್ದರು.

Yediyurappa House Attack: ಬಿಜೆಪಿಯವರದ್ದೇ ಕೈವಾಡ ಇರಬಹುದು ಎಂದ ಸಿದ್ದರಾಮಯ್ಯ!

ಕಾಂಗ್ರೆಸ್‌ ನಾಯಕರ ಪ್ರಚೋದಿತ ಘಟನೆ: ಇದೀಗ ಶಿಕಾರಿಪುರದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯ ಕಾವು ಕಡಿಮೆಯಾಗಿದೆ. ಈ ಮೂವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆಶಿವಕುಮಾರ್ , ಮಧು ಬಂಗಾರಪ್ಪ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಜೊತೆ ತೆಗೆಸಿಕೊಂಡಿರುವ ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರಿಂದ ಈ ಘಟನೆ ರಾಜಕೀಯ ಪ್ರೇರಿತ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ಕಾಂಗ್ರೆಸ್ ನಾಯಕರ ಪ್ರಚೋದನೆ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. 

Latest Videos
Follow Us:
Download App:
  • android
  • ios