ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ, ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಗೆ ಉಳಿದ ಪ್ರಾಣ!

ತಾಲೂಕಿನ ಹಾರೂಗೇರಿ ಗ್ರಾಮದಲ್ಲಿ ಮಹಿಳೆಯೊಬ್ಬರು ತನ್ನ ಮಗಳೊಂದಿಗೆ ಕಾಲುವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವೇಳೆ ಮುಂಡರಗಿ ಪೊಲೀಸ್‌ ಠಾಣೆಯ 112 ಸಿಬ್ಬಂದಿ ಗ್ರಾಮಸ್ಥರ ಸಹಕಾರದಿಂದ ಮಹಿಳೆ ಹಾಗೂ ಮಗಳನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ.

mother attempted suicide with child and police personnel saved their lives in gadag gow

ಗದಗ (ಜು.28) : ಜೀವನದಲ್ಲಿ ಜಿಗುಪ್ಸೆಗೊಂಡು ಮಗಳ ಸಮೇತ ಕಾಲುವೆಯ ನೀರಲ್ಲಿ ಮುಳಗಿ ಆತ್ಮಹತ್ಯೆಗೆ  ಮುಂದಾಗಿದ್ದ ಮಹಿಳೆ ಹಾಗೂ ಮಗಳ ಪ್ರಾಣವನ್ನ ERSS 112 ಪೊಲೀಸ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಉಳಿದಿದೆ. ಗದಗ ಜಿಲ್ಲೆ ಮುಂಡರಗಿ ತಾಲ್ಲೂಕಿನ ಹಾರೋಗೇರಿ‌ ಗ್ರಾಮದ 38 ವರ್ಷದ ಮಹಿಳೆ ತನ್ನ ಹದಿನಾಲ್ಕು ವರ್ಷದ ಮಗಳನ್ನು ಕರೆದುಕೊಂಡು ಗ್ರಾಮದ ಸಮೀಪದಲ್ಲಿಯೇ ಇರುವ ದೊಡ್ಡ ಕಾಲುವೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದಳು.  ಮಗಳನ್ನು ನೀರಲ್ಲಿ ಮುಳಗಿಸುತ್ತಿದ್ದಂತೆಯೇ ಕಣ್ಣಾರೆ ಕಂಡ ಗ್ರಾಮಸ್ಥರು ERSS 112 ಕ್ಕೆ ಕರೆ ಮಾಡಿ ಮಾಹಿತಿ ‌ತಿಳಿಸಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ 112 ಸಿಬ್ಬಂದಿ ಮಗಳನ್ನು ಹಾಗೂ ತಾಯಿಯನ್ನು ರಕ್ಷಿಸಿದ್ದಾರೆ. ನೀರಲ್ಲಿ ಮುಳಗಿದ್ದ ಹದಿನಾಲ್ಕು ವರ್ಷ ಮಗಳು ನೀರು ಕುಡಿದಿದ್ದರಿಂದ ತೀವ್ರ ಅಸ್ವಸ್ಥಗೊಂಡಿದ್ದಳು. ತಕ್ಷಣ ಇಬ್ಬರನ್ನೂ ತಮ್ಮ ವಾಹನದಲ್ಲಿ ಗದಗ ಜಿಮ್ಸ್ ಆಸ್ಪತ್ರೆಗೆ ಕರೆ ತಂದು ಸೂಕ್ತ ಚಿಕಿತ್ಸೆ ‌ಕೊಡಿಸಿದರು. ಇಬ್ಬರು ಪ್ರಾಣಾಪಯದಿಂದ ಪಾರಾಗಿದ್ದು, ಯಾವುದೇ ಸಮಸ್ಯೆ ಇಲ್ಲ ಅಂತಾ ವೈದ್ಯರು ಹೇಳಿದ್ದು, ಸಕಾಲಕ್ಕೆ ಕರೆತಂದು ಪ್ರಾಣ ಉಳಿಸಿದ ERSS 112 ಸಿಬ್ಬಂದಿಗಳಾದ ಮುಂಡರಗಿ ಠಾಣೆಯ ಹೆಡ್ ಕಾನಸ್ಟೇಬಲ್ ಕಾಸೀಮಸಾಬ್ ಡಿ ಹರಿವಾಣ,  ಪೇದೆ ಎಸ್ ಎಮ್ ಸುಂಕದ ಹಾಗೂ ಚಾಲಕ ದಾವಲಸಾಬ್ ಎ ಕಲಯಗಾರ ಅವರ ಸಮಯ ಪ್ರಜ್ಞೆಗೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ ಶಸ್ತ್ರ ಚಿಕಿತ್ಸೆಗೆ ಮಾಡಿಸಿಕೊಂಡು ಗುಣಮುಖರಾಗಿದ್ದರು. ಇದನ್ನ ಮನಸ್ಸಿನಲ್ಲಿಟ್ಟುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಮಗಳ ಸಮೇತರಾಗಿ ಹೋಗಿದ್ದಾಗಿ ಮಹಿಳೆ ತಿಳಿಸಿದ್ದಾಳೆ. ಕೂಡಲೇ 112 ಸಿಬ್ಬಂದಿ ಪ್ರಥಮ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ, ಸದ್ಯ ಇಬ್ಬರು ಆರೋಗ್ಯವಾಗಿದ್ದು, ಮಹಿಳೆಯ ಸಂಬಂಧಿಕರು ಆಸ್ಪತ್ರೆಗೆ ಬಂದು ನೋಡಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 

WEIRD NEWS: ಜೈಲಿನಲ್ಲಿ ಇಬ್ಬರು ಮಹಿಳೆಯರನ್ನು ಗರ್ಭಿಣಿ ಮಾಡಿದ ಮಂಗಳಮುಖಿ ಖೈದಿ

ಗ್ರಾಪಂ ಬಾಗಿಲಿಗೆ ನೇಣು ಹಾಕಿಕೊಂಡ ಮಾಜಿ ನೌಕರ: ಪೀಣ್ಯ ದಾಸರಹಳ್ಳಿ: ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿ ಆಲೂರು ಗ್ರಾಮ ಪಂಚಾಯಿತಿ ಕಚೇರಿ ಮುಂಬಾಗಿಲಿಗೆ ಮಾಜಿ ಗುತ್ತಿಗೆ ನೌಕರನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಹನುಮಯ್ಯ (50) ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ನೌಕರ. ಈತ ಆಲೂರು ಪಂಚಾಯಿತಿ ವ್ಯಾಪ್ತಿಯ ಹೆಗ್ಗಡದೇವನಪುರ ನಿವಾಸಿಯಾಗಿದ್ದು, ಮೂಲತಃ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಸಮೀಪದ ಕಾರೇಹಳ್ಳಿ ಗ್ರಾಮದವನಾಗಿದ್ದಾನೆ. ಮೃತ ಹನುಮಯ್ಯ ಆಲೂರು ಪಂಚಾಯಿತಿಯಲ್ಲೇ ಗುತ್ತಿಗೆ ಆಧಾರದ ಮೇಲೆ ಡಿ ದರ್ಜೆ ನೌಕರನಾಗಿ ಕೆಲಸ ಮಾಡುತ್ತಿದ್ದ.

Murder In Mandya: ಆಶ್ರಯ ನೀಡಿದ್ದ ಸ್ನೇಹಿತನ ಕತ್ತು ಕೂಯ್ದೇ ಬಿಟ್ಟ ಪಾಪಿ!

ಆಲೂರು ಪಂಚಾಯಿತಿಯಲ್ಲಿ ಹಿಂದೆ ಕೆಲಸ ಮಾಡುತ್ತಿದ್ದಾಗ ಸರಿಯಾಗಿ ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಎರಡೂವರೆ ವರ್ಷದ ಹಿಂದೆ ಹನುಮಯ್ಯನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ನಂತರ ಈತ ಗಾರೆ ಕೆಲಸ ಇತ್ಯಾದಿಗಳನ್ನು ಮಾಡಿಕೊಂಡಿದ್ದ ಎನ್ನಲಾಗಿದೆ. ಮಂಗಳವಾರ ರಾತ್ರಿ ತಾನು ಹಿಂದೆ ಕೆಲಸ ಮಾಡುತ್ತಿದ್ದ ಆಲೂರು ಗ್ರಾಮ ಪಂಚಾಯಿತಿ ಕಚೇರಿಯ ಮುಂಬಾಗಿಲಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತನಿಗೆ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

Latest Videos
Follow Us:
Download App:
  • android
  • ios