ಡ್ರಗ್ಸ್ ಸ್ಮಗ್ಲಿಂಗ್ ಮಾಡುತ್ತಿದ್ದ ಮಗನನ್ನೇ ಪೊಲೀಸರಿಗೆ ಹಿಡಿದು ಕೊಟ್ಟ ತಾಯಿ!
ಗಾಂಜಾ ಸೇವನೆ ಮಾತ್ರವಲ್ಲದೆ ಸ್ಮಗ್ಲಿಂಗ್ ಮಾಡುತ್ತಿದ್ದ ಮಗನನ್ನು ತಾಯಿಯೇ ಪೊಲೀಸರ ಕೈಗೆ ಒಪ್ಪಿಸಿದ ಅಚ್ಚರಿಯ ಘಟನೆ ಚೆನ್ನೈನಲ್ಲಿ ನಡೆದಿದೆ.
ಚೆನ್ನೈ (ಜು.7): ಗಾಂಜಾ ಸೇವನೆ ಮಾಡುತ್ತಿದ್ದ ಮಗನನ್ನು ತಾಯಿಯೇ ಪೊಲೀಸರ ಕೈಗೆ ಒಪ್ಪಿಸಿದ ಅಚ್ಚರಿಯ ಘಟನೆ ಚೆನ್ನೈನಲ್ಲಿ ನಡೆದಿದೆ. ಸರಕು ವಾಹನದ ಚಾಲಕನಾದ ಶ್ರೀರಾಮ್ ಇತ್ತೀಚಿಗೆ ಗಾಂಜಾ ಸೇವನೆ ಅಭ್ಯಾಸ ಬೆಳೆಸಿಕೊಂಡಿದ್ದ. ಈ ವಿಚಾರ ಗಮನಿಸಿದ ತಾಯಿ ಭಾಗ್ಯಲಕ್ಷ್ಮೀ ತಾವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಶ್ರೀರಾಮ್ ಮನೆ ಮೇಲೆ ದಾಳಿ ಮಾಡಿದ್ದರು. ಈ ವೇಳೆಯಲ್ಲಿ ಪೊಲೀಸರು 2 ಲಕ್ಷ ರು ಮೌಲ್ಯದ 630 ಮಿಲೀ ಗಾಂಜಾ ಎಣ್ಣೆ ವಶ ಪಡಿಸಿಕೊಂಡಿದ್ದಾರೆ. ಬಳಿಕ ಆತನನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಒಡಿಶಾ, ತಮಿಳುನಾಡು, ಕೇರಳದಲ್ಲಿ ನಡೆಯುತ್ತಿದ್ದ ಗಾಂಜಾ ಮಾರಾಟ ಜಾಲವನ್ನು ಬೇಧಿಸಿದ್ದಾರೆ.
ಟ್ರಕ್ ಚಾಲಕನಾದ ಶ್ರೀರಾಮ್ ಒಡಿಶಾದಿಂದ ಸರಕು ಸಾಗಣೆ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ಆಂಧ್ರಪ್ರದೇಶದಿಂದ 300 ಎಂಎಲ್ ಗಾಂಜಾ ಎಣ್ಣೆ ತಂದಿದ್ದರು ಎಂದು ಅವರು ಬಹಿರಂಗಪಡಿಸಿದ್ದಾರೆ. ಕೇರಳದ ವ್ಯಕ್ತಿ ಅರುಣ್ ಎಂಬಾತ ನೀಡಿದ ಸಂಪರ್ಕದ ಭಾಗವಾಗಿದೆ. ಚೆನ್ನೈನ ಮಾಧವರಂ ಪ್ರದೇಶದ ವೃತ್ತದಲ್ಲಿ ಅಪರಿಚಿತ ವ್ಯಕ್ತಿಗೆ ಐಟಂ ಅನ್ನು ಹಸ್ತಾಂತರಿಸಲಾಗಿದೆ ಎಂದು ಶ್ರೀರಾಮ್ ಮಾಹಿತಿ ನೀಡಿದರು. ನಂತರ ಪೊಲೀಸರು ಆ ಅಪರಿತ ವ್ಯಕ್ತಿಯನ್ನು ಪತ್ತೆ ಹಚ್ಚಿ ಬಂಧಿಸಿದರು. ಈ ವೇಳೆ ಬಂಧಿತ ವ್ಯಕ್ತಿ ಅರುಣ್ ಸಹೋದರ ಸತೀಶ್ ಎಂದು ತಿಳಿದುಬಂದಿದ್ದು, ಇವರಿಬ್ಬರನ್ನೂ 'ಗಾಂಜಾ ಬ್ರದರ್ಸ್' ಎಂದು ಕರೆಯಲಾಗುತ್ತದೆ. ಇವರಿಬ್ಬರೂ ವಾಹನ ಚಾಲಕ ಶ್ರೀರಾಮ್ ಮತ್ತು ಪರ್ವೇಜ್ ಎಂಬವರನ್ನು ಇತರ ರಾಜ್ಯಗಳಿಂದ ಗಾಂಜಾ ಕಳ್ಳಸಾಗಣೆ ಮಾಡಲು ಬಳಸಿಕೊಂಡಿದ್ದರು ಎಂದು ಪೊಲೀಸ್ ತನಿಖೆಯಿಂದ ಬಯಲಾಗಿದೆ.
ಒದ್ದೆ ಕೈಯಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋದ ವಿದ್ಯಾರ್ಥಿ ಶಾಕ್ ಹೊಡೆದು ಸಾವು!
ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ
ಬೆಂಗಳೂರು:ಮಾದಕವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿಯ ಭರತ್ ಚಂದ್ರ (25) ಮತ್ತು ಧನುಷ್ (26) ಬಂಧಿತರು. ಆರೋಪಿಗಳಿಂದ 1.10 ಲಕ್ಷ ರು. ಮೌಲ್ಯದ 2 ಕೆ.ಜಿ. 127 ಗ್ರಾಂ ಗಾಂಜಾ, ಮೊಬೈಲ್, ಎಲೆಕ್ಟ್ರಾನಿಕ್ ತೂಕದ ಯಂತ್ರ ಜಪ್ತಿ ಮಾಡಲಾಗಿದೆ.
ರಾಜ್ಯದಲ್ಲಿನ ಈಗಿನ ಬೆಳವಣಿಗೆ ನೋಡಿದ್ರೆ, ಬಬಲಾದಿ ಮುತ್ಯಾನ ಕಾಲಜ್ಞಾನದ ಭವಿಷ್ಯ ನಿಜವಾಯ್ತಾ?
ಇತ್ತೀಚೆಗೆ ಬನಶಂಕರಿ ಅಗ್ನಿಶಾಮಕ ಠಾಣೆ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿರುವುದು ಕಂಡು ಬಂದಿದೆ. ಆರೋಪಿಗಳು ಡ್ರಗ್ಸ್ ಪೆಡ್ಲರ್‌ಗಳಾಗಿದ್ದು, ಹೊರರಾಜ್ಯಗಳಿಂದ ಕಡಿಮೆ ದರದಲ್ಲಿ ಗಾಂಜಾ ಖರೀದಿಸಿ ನಗರಕ್ಕೆ ತಂದು ಸ್ಥಳೀಯ ಗಿರಾಕಿಗಳಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.