ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಇತ್ತೀಚೆಗೆ ತಾಯಿ ಮಕ್ಕಳ ಆತ್ಮಹತ್ಯೆ ಪ್ರಕರಣಗಳು ಕರ್ನಾಟಕ ಹೆಚ್ಚಾಗಿವೆ. ಇದೀಗ ತಮಕೂರು ಜಿಲ್ಲೆಯಲ್ಲೂ ಸಹ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತುಮಕೂರು, (ಸೆಪ್ಟೆಂಬರ್.15): ಮಗನನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆಪ್ಟೆಂಬರ್ 14 ಎಂದು ಬೆಂಗಳೂರಿನಲ್ಲಿ ನಡೆದಿತ್ತು. ಇದೀಗ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ತಾಲೂಕು ಅರಕೆರೆ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಮಧುಗಿರಿತಾಲೂಕಿನ ಕವಣದಾಲದ ತಾಯಿ ಪುಷ್ಪಲತಾ (30) ,ಹೇಮಾ (9),ಶೇಖರ್ (7) ಮೃತಪಟ್ಟ ದುರ್ದೈವಿಗಳು. ಪುಷ್ಪಲತಾ ತನ್ನ ಇಬ್ಬರು ಮಕ್ಕಳೊಂದಿಗೆ ತಮ್ಮನ ಮನೆ ಅರಕೆರೆಗೆ ಬಂದಿದ್ದರು. ಅಂಗಡಿಗೆ ಹೋಗಿ ಬರುತ್ತೇವೆಂದು ತಮ್ಮನ ಮನೆಯವರಿಗೆ ಹೇಳಿ ಹೋಗಿದ್ದರು. ಬಳಿಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
Bengaluru Crime: ಮಗನನ್ನು ಕೊಂದು ತಾಯಿಯೂ ಆತ್ಮಹತ್ಯೆ, ಕಾರಣ ನಿಗೂಢ
ಬಾವಿಯಲ್ಲಿ ಪುಷ್ಪಲತಾ ಶವ ತೇಲುತ್ತಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಅಪಘಾತದಲ್ಲಿ ಮಂಗಳೂರು ಮೂಲದ ವೈದ್ಯೆ ದುರ್ಮರಣ
ಮುಂಬೈ: ಮಹಾರಾಷ್ಟ್ರದ (Maharashtra) ಪುಣೆ ಬಳಿಯಿರುವ ಪಿಂಪ್ರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಮಂಗಳೂರು ಮೂಲದ ವೈದ್ಯೆ (Doctor) ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಮೃತ ವೈದ್ಯೆಯನ್ನು (Doctor) ಜೈಶಾ (27) ಎಂದು ಗುರುತಿಸಲಾಗಿದೆ. ಮಂಗಳೂರು ಮೂಲದ ಜಾನ್ ಥಾಮಸ್ ಮತ್ತು ಉಷಾ ಥಾಮಸ್ ದಂಪತಿಯ ಪುತ್ರಿ ಜೈಶಾ, ರಿಮಿನ್ ಆರ್. ಕುರಿಯಾಕೋಸ್ ನನ್ನು ವಿವಾಹವಾಗಿದ್ದರು.
ಜೈಶಾ ಮಂಗಳವಾರ ಮಧ್ಯಾಹ್ನದ ವಿರಾಮದ ಸಮಯದಲ್ಲಿ ಮನೆಗೆ ತೆರಳಿ, ಊಟ ಮುಗಿಸಿಕೊಂಡು ಕ್ಲಿನಿಕ್‌ಗೆ (Clinic) ಹಿಂದಿರುಗುತ್ತಿದ್ದರು. ಈ ವೇಳೆ ಟ್ರಕ್‌ವೊಂದು ಜೈಶಾ (Jaisha) ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ, ಪರಿಣಾಮ ಸ್ಥಳದಲ್ಲೇ ಜೈಶಾ ಮೃತಪಟ್ಟಿದ್ದಾರೆ.