Asianet Suvarna News Asianet Suvarna News

ಒಂದು ವರ್ಷದಿಂದ ಮಗಳ ಮೇಲೆ ಅತ್ಯಾಚಾರ ಎಸಗುತ್ತಿದ್ದ ಪಾಪಿ ತಂದೆ ಅರೆಸ್ಟ್‌!

ಅಪ್ರಾಪ್ತೆ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸರು ತಂದೆಯ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Mumbai Father Arrested for Raping, Impregnating His Minor Daughter Vin
Author
First Published May 31, 2024, 9:31 AM IST

ಮುಂಬೈ: ಅಪ್ರಾಪ್ತೆ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸರು ತಂದೆಯ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತೆ ತನ್ನ ತಂದೆ ಮತ್ತು ಅಜ್ಜಿಯೊಂದಿಗೆ ಮುಂಬೈನ ಉಪನಗರ ಪ್ರದೇಶದಲ್ಲಿ ವಾಸಿಸುತ್ತಿದ್ದಳು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆಕೆಯನ್ನು ತಪಾಸಣೆಗಾಗಿ ಬಾಂದ್ರಾದ ಬಾಬಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿ ಎಂಬುದು ಗೊತ್ತಾಯಿತು.

ರೇಪ್ ಮಾಡಿದ್ದಲ್ಲದೇ ವೀಡಿಯೋ ಮಾಡಿ ಬ್ಲಾಕ್‌ಮೇಲ್: 50ರ ಸಲಿಂಗಕಾಮಿ ಕತೆ ಮುಗಿಸಿದ 15ರ ಬಾಲಕ

ಗರ್ಭಧಾರಣೆಯ ಬಗ್ಗೆ ಪ್ರಶ್ನಿಸಿದಾಗ, ತನ್ನ ತಂದೆ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಹುಡುಗಿ ಬಹಿರಂಗಪಡಿಸಿದಳು. ಬಾಲಕಿಯ ತಂದೆ ಈ ಹಿಂದೆಯೂ ಕಳ್ಳತನ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಕ್ರಿಮಿನಲ್ ಇತಿಹಾಸವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಆರೋಪಿ ತಂದೆ ನವೆಂಬರ್ 2023 ರಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದು, ಅಂದಿನಿಂದ ಪ್ರತಿದಿನ ಬಾಲಕಿಯ ಮೇಲೆ ಅತ್ಯಾಚಾರ ಮಾಡುತ್ತಿದ್ದ ಎಂದು ಅಧಿಕಾರಿ ಹೇಳಿದ್ದಾರೆ. ಅವನ ಕ್ರಿಮಿನಲ್ ಪ್ರವೃತ್ತಿಯಿಂದಾಗಿ, ಅವನ ಹೆಂಡತಿ ಅವನೊಂದಿಗೆ ವಾಸಿಸುವುದಿಲ್ಲ. ಮನೆಯಲ್ಲಿ ಅಪ್ರಾಪ್ತ ಬಾಲಕಿ ಮತ್ತು ಆರೋಪಿಯ ತಾಯಿ ಮಾತ್ರ ವಾಸವಾಗಿದ್ದಾರೆ ಎಂದು ತಿಳಿದುಬಂದಿದೆ.

30 ವರ್ಷದ ಹಿಂದೆ ರೇಪ್, ಮಗನ ನೆರವಿನಿಂದ ಅತ್ಯಾಚಾರಿಗಳ ಜೈಲಿಗೆ ಕಳುಹಿಸಿದ ತಾಯಿ!

Latest Videos
Follow Us:
Download App:
  • android
  • ios