Mumbai News: ಮಹಿಳೆಯ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು, ಕಾಮುಕರಿಂದ ಗ್ಯಾಂಗ್‌ರೇಪ್..!
ಆರೋಪಿಗಳು ಒಬ್ಬರಾದ ಮೇಲೊಬ್ಬರು ಆಕೆಗೆ ಅತ್ಯಾಚಾರ ಮಾಡಿದ್ದಾರೆ. ಅಲ್ಲದೆ, ಅಸ್ವಾಭಾವಿಕ ಲೈಂಗಿಕ ಕೃತ್ಯ ನಡೆಸಿದ್ದಾರೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.
ಮಹಾರಾಷ್ಟ್ರದ ರಾಜಧಾನಿ ಹಾಗೂ ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮತ್ತೊಂದು ಗ್ಯಾಂಗ್‌ರೇಪ್ ಪ್ರಕರಣ ವರದಿಯಾಗಿದೆ. 42 ವರ್ಷದ ಮಹಿಳೆಯನ್ನು ಆಕೆಯ ನಿವಾಸದಲ್ಲಿ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಚಾರ ನಡೆಸಿದ್ದಾರೆ. ಹಾಗೂ, ಹರಿತವಾದ ಆಯುಧದಿಂದ ಆಕೆಯ ಮೈ - ಕೈ ಬಲವಾಗಿ ಗಾಯ ಮಾಡಿದ್ದಲ್ಲದೆ, ಆಕೆಯ ಖಾಸಗಿ ಅಂಗಕ್ಕೆ ಸಿಗರೇಟ್‌ನಿಂದ ಸುಟ್ಟಿದ್ದಾರೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ನೀಡಿದ್ದಾರೆ.
ಬುಧವಾರ ಬೆಳಗ್ಗಿನ ಜಾವ ಮುಂಬೈನ ಕುರ್ಲಾದಲ್ಲಿ ಈ ಘಟನೆ ನಡೆದಿದೆ. ಅರೋಪಿಗಳು ಹಾಗೂ ಸಂತ್ರಸ್ಥೆ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದರು ಎಂದೂ ಅಧಿಕಾರಿ ತಿಳಿಸಿದ್ದಾರೆ. ಆರೋಪಿಗಳು ಒಬ್ಬರಾದ ಮೇಲೊಬ್ಬರು ಆಕೆಗೆ ಅತ್ಯಾಚಾರ ಮಾಡಿದ್ದಾರೆ. ಅಲ್ಲದೆ, ಅಸ್ವಾಭಾವಿಕ ಲೈಂಗಿಕ ಕೃತ್ಯ ನಡೆಸಿದ್ದಾರೆ ಎಂದೂ ಪೊಲೀಸರು ಹೇಳಿದ್ದಾರೆ.
ಇದನ್ನು ಓದಿ: ಕ್ಲಾಸ್‌ರೂಂನಲ್ಲಿ ಕೂಡಿ ಹಾಕಿ 13 ವರ್ಷದ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದ ಗ್ಯಾಂಗ್ ರೇಪ್!
ಮಹಿಳೆಯ ಖಾಸಗಿ ಅಂಗಕ್ಕೆ ಸಿಗರೇಟ್‌ಗಳಿಮದ ಸುಟ್ಟಿದ್ದು, ನಂತರ ಆಕೆಯ ಎದೆ ಹಾಗೂ ಎರಡೂ ಕೈಗಳಿಗೆ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದಾರೆ. ಇನ್ನು, ಆರೋಪಿಯೊಬ್ಬ ಸಂಪೂರ್ಣ ಘಟನೆಯ ವಿಡಿಯೋವನ್ನು ರೆಕಾರ್ಡ್ ಮಾಡಿದ್ದು, ಸಂತ್ರಸ್ಥೆ ಪೊಲೀಸರಿಗೆ ದೂರು ನೀಡದರೆ ವಿಡಿಯೋ ಹರಿಬಿಡುವುದಾಗಿಯೂ ಅವರು ಬೆದರಿಕೆ ಹಾಕಿದ್ದಾರೆ ಎಂದೂ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಬಳಿಕ, ಎನ್‌ಜಿಒ ಒಂದಕ್ಕೆ ಮಹಿಳೆ ತನ್ನ ಕಷ್ಟಗಳನ್ನು ಹೇಳಿಕೊಂಡಿದ್ದು, ನಂತರ ಅವರ ಮೂಲಕ ಪೊಲೀಸರಿಗೆ ಸುದ್ದಿ ಮುಟ್ಟಿಸಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದೂ ಕುರ್ಲಾ ಪೊಲೀಸ್ ಸ್ಟೇಷನ್ ಅಧಿಕಾರಿ ಹೇಳಿದ್ದಾರೆ. ಅಲ್ಲದೆ, ಮೂವರು ಆರೋಪಿಗಳ ವಿರುದ್ಧ ಐಪಿಸಿಯ ಸೆಕ್ಷನ್ 376 (ಅತ್ಯಾಚಾರ), 376D (ಗ್ಯಾಂಗ್‌ರೇಪ್), 377 (ಅಸ್ವಾಭಾವಿಕ ಲೈಂಗಿಕತೆ), 324 (ಅಪಾಯಕಾರಿ ಆಯುಧದಿಂದ ಸ್ವಯಂಪ್ರೇರಣೆಯಿಂದ ಗಾಯವನ್ನುಂಟುಮಾಡುವುದು) ಹಾಗೂ ಇತರೆ ಸೆಕ್ಷನ್‌ಗಳ ಮೂಲಕ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಹಾಗೂ, ಆರೋಪಿಗಳನ್ನು ಹಿಡಿಯಲು ಪ್ರಯತ್ನ ನಡೆಸುತ್ತಿದ್ದೇವೆ ಎಂದೂ ಪೊಲೀಸ್ ಅಧಿಕಾರಿಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Udupi: 80 ವಯಸ್ಸಿನ ಅಜ್ಜಿಯ ಅತ್ಯಾಚಾರ ಮಾಡಿದವರಿಗೆ ಕಠಿಣ ಶಿಕ್ಷೆ: ಉಡುಪಿ ನ್ಯಾಯಾಲಯ ಆದೇಶ
ಅಪ್ರಾಪ್ತ ಬಾಲಕಿ ಮೇಲೂ ಅತ್ಯಾಚಾರ
ಇನ್ನೊಂದೆಡೆ, ಮುಂಬೈನಲ್ಲಿ ಹೆಣ್ಣುಮಕ್ಕಳು ಮೇಲೆ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೊರಿಯಾ ಯ್ಯೂಟೂಬರ್ ಮೇಲೆ ಕಿರುಕುಳ ನೀಡಿದ ಘಟನೆ ಬೆನಲ್ಲೇ ಡೆಲಿವರಿ ಬಾಯ್ ಮಹಿಳೆಗೆ ಕಿರುಕುಳ ಘಟನೆ ವರದಿಯಾಗಿತ್ತು. ನಂತರ, ಕೆಲ ದಿನಗಳ ಹಿಂದೆ ಭೀಕರ ಅತ್ಯಾಚಾರ ಘಟನೆ ವರದಿಯಾಗಿದೆ.
13 ವರ್ಷದ ವಿದ್ಯಾರ್ಥಿನಿಯನ್ನು ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ತನ್ನದೇ ತರಗತಿಯ ಸಹಪಾಠಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರ ತಂಡ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಮುಂಬೈನ ಮಾತುಂಗದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಅತ್ಯಾಚಾರ: ಮಹಿಳೆಯರೇ ಡ್ರಾಪ್ ಕೇಳುವ ಮುನ್ನ ಇರಲಿ ಎಚ್ಚರ!
ಮಾತುಂಗದಲ್ಲಿನ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಇತ್ತ 8ನೇ ತರಗತಿ ವಿದ್ಯಾರ್ಥಿನಿ ಸುಸ್ತಾಗುತ್ತಿದೆ ಎಂದು ತರಗತಿ ಬಂದು ಕುಳಿತುಕೊಂಡಿದ್ದಾಳೆ. ತರಗತಿಯ ಇತರ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿದ್ದರು. ಇದೇ ಸಮಯ ಉಪಯೋಗಿಸಿಕೊಂಡ ಇಬ್ಬರು ಸಹಪಾಠಿಗಳು, ನೇರವಾಗಿ ಶಾಲಾ ಕೊಠಡಿಗೆ ಬಂದು ತರಗತಿಯ ಬಾಗಿಲು ಮುಚ್ಚಿದ್ದಾರೆ. ಬಳಿಕ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಈಗ, ಮುಂಬೈನಲ್ಲಿ 42 ವರ್ಷದ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಐವರು ಅಪ್ರಾಪ್ತರಿಂದ ಬಾಲಕಿ ಮೇಲೆ ಗ್ಯಾಂಗ್‌ರೇಪ್: ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡ್ತಿದ್ದವರು ವಶಕ್ಕೆ