ಕೊಲೆ, ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನ ಬಂಧಿಸುವ ವೇಳೆ ಪೊಲೀಸರ ಮೇಲೆಯೇ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದ್ದು, ಹಲ್ಲೆ ನಡೆಸಿದ ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿ ಬಂಧಿಸಿದ ಪೊಲೀಸರು.

ಕೋಲಾರ (ಜು.4): ಕೊಲೆ, ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನ ಬಂಧಿಸುವ ವೇಳೆ ಪೊಲೀಸರ ಮೇಲೆಯೇ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದ್ದು, ಹಲ್ಲೆ ನಡೆಸಿದ ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿ ಬಂಧಿಸಿದ ಪೊಲೀಸರು.

Add Asianetnews Kannada as a Preferred SourcegooglePreferred

ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಆಂಡ್ರಸನ್ ಪೇಟೆಯಲ್ಲಿ ನಡೆದಿರುವ ಘಟನೆ. ರೌಡಿಶೀಟರ್ ಸ್ಟಾಲಿನ್ ಬಂಧಿತ ಆರೋಪಿ. ಕೊಲೆ, ಸುಲಿಗೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ. ಆರೋಪಿಯನ್ನು ಬಂಧಿಸಲು ಮುಂದಾಗಿದ್ದ ಕೆಜಿಎಫ್ ಪೊಲೀಸರು. ಪೊಲೀಸರು ಬಂಧಿಸುವ ವೇಳೆ ಪೇದೆ ಮೇಲೆ ಮಚ್ಚು ಬೀಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿ.

ಗುರುಮಠಕಲ್ ಪೊಲೀಸರ ಭ್ರಷ್ಟಾಚಾರಕ್ಕೆ ಬೇಸತ್ತು ಶಾಸಕರೇ ರಾಜೀನಾಮೆ ಎಚ್ಚರಿಕೆ!

ಮಚ್ಚಿನಿಂದ ಹಲ್ಲೆ ನಡೆಸಿದ್ದರಿಂದ ಪೊಲೀಸ್ ಪೇದೆ ಸುನಿಲ್ ಗಾಯಗೊಂಡಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಪೊಲೀಸರು ಕೂಡಲೇ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿದ್ದಾರೆ. ಬಲಗಾಲಿಗೆ ಗುಂಡಿನೇಟು ತಗುಲಿ ಕುಸಿದು ಬಿದ್ದ ರೌಡಿಶೀಟರ್ ಸ್ಟಾಲಿನ್. ಸದ್ಯ ಆರೋಪಿಯನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಆಂಡ್ರಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.