Asianet Suvarna News Asianet Suvarna News

ಲೈಂಗಿಕ ದೌರ್ಜನ್ಯಕ್ಕೆ ಸಹಕಾರ: ಮುರುಘಾ ಮಠದ ವಾರ್ಡನ್ ರಶ್ಮಿ ಅರೆಸ್ಟ್

ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-1 ಆರೋಪಿ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಶರಣರ ಬಂಧನವಾಗಿದೆ. ಇದರ ಬೆನ್ನಲ್ಲೇ ಇದೀಗ ಸಹಕಾರ ನೀಡಿದ ಎ-2 ಆರೋಪಿಯನ್ನು ಸಹ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Muruga Mutt Hostel Warden Rashmi Arrested By Chitradurga Police rbj
Author
First Published Sep 2, 2022, 12:57 PM IST

ಚಿತ್ರದರ್ಗ, (ಸೆಪ್ಟೆಂಬರ್ 02): ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನವಾದ ಬೆನ್ನಲ್ಲೇ ಇದೀಗ A-2 ಆರೋಪಿಯನ್ನು ಸಹ ಅರೆಸ್ಟ್ ಮಾಡಲಾಗಿದೆ.

ಮಠದ ಹಾಸ್ಟೆಲ್ ವಾರ್ಡನ್ ಆಗಿರುವ ರಶ್ನಿ ಅವರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದು, ವೈದ್ಯಕೀಯ ತಪಾಸಣೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಸಹಕಾರ ನೀಡಿದ ಆರೋಪ ವಾರ್ಡನ್ ರಶ್ಮಿ ಮೇಲಿದೆ. ಈ ಹಿನ್ನೆಲೆಯಲ್ಲಿ ವಾರ್ಡನ್ ರಶ್ನಿ ಅವರನ್ನ ಡಿವೈಎಸ್ಪಿ ಅನಿಲ್ ಅವರು ನಿನ್ನೆ(ಸೆ.01) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಬಳಿಕ ಗುರುವಾರ ರಾತ್ರಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿತ್ತು.

ಇದೀಗ ಎ-1 ಆರೋಪಿಯಾಗಿರುವ ಶಿವಮೂರ್ತಿ ಶಿವಾಚಾರ್ಯ ಶರಣರ ಬಂಧನದ ಬೆನ್ನಲ್ಲೇ ಎ-2 ಆರೋಪಿ ರಶ್ನಿ ಅವರನ್ನು ಸಹ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವೈದ್ಯಕೀಯ ತಪಾಸಣೆ ಮಾಡಿಸಿ ಬಳಿಕ ಅವರನ್ನು ನ್ಯಾಯಾಲಕ್ಕೆ ಹಾಜರುಪಡಿಸುವ ಸಾಧ್ಯತೆಗಳಿವೆ.

Murugha Mutt sexual assault case: A2  ಆರೋಪಿ ವಾರ್ಡನ್ ರಶ್ಮಿ ಪೊಲೀಸರ ವಶಕ್ಕೆ

ಮುರುಘಾಶ್ರೀ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧನವಾಗಿದೆ. ಇನ್ನುಳಿದು ಮೂವರು ಆರೋಪಿಗಳು ಕಾಣೆಯಾಗಿದ್ದು, ಅವರ  ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

ಬಂಧನದ ಬಳಿಕ ಮುರುಘಾ ಮಠದಲ್ಲಿ ಮೌನ
ಮುರುಘಾ ಮಠದಲ್ಲಿ ಶರಣರ ಬಂಧನದ ಬಳಿಕ ನೀರವ ಮೌನ ಆವರಿಸಿದೆ. ಮಠದ ಆವರಣ ಬಿಕೋ ಎನ್ನುತ್ತಿದೆ. ಮಠದ ನಾಲ್ಕು ದಿಕ್ಕುಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಭಕ್ತಾದಿಗಳು ಆಸ್ಪತ್ರೆಯ ಬಳಿ ಜಮಾಯಿಸುತ್ತಿದ್ದಾರೆ. ಜತೆಗೆ ಕೆಲವೇ ಕ್ಷಣಗಳಲ್ಲಿ ಶರಣರಿಗೆ MRI ಸ್ಕ್ಯಾನಿಂಗ್ ಮಾಡಲಾಗುವುದು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾಸ್ಪತ್ತೆಯ ಹಿಂಭಾಗದಲ್ಲಿರುವ MRI ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಸ್ಕ್ಯಾನಿಂಗ್‌ ಮತ್ತು ಇಸಿಜಿ ಮಾಡಲಿದ್ದಾರೆ. 

ಮುರುಘಾ ಸ್ವಾಮೀಜಿ ಆರೋಗ್ಯ ಸ್ಥಿತಿ ಗಂಭೀರ: ವಕೀಲ ಉಮೇಶ್ ಮಾಹಿತಿ

ಏನಿದು ಪ್ರಕರಣ?:
ಕಳೆದ ವಾರ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಮಠದ ಶಾಲೆಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯಿರಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ಕಾರಣ ನೀಡಿ ಮೈಸೂರಿನಿಂದ ಚಿತ್ರದುರ್ಗಕ್ಕೆ ಪ್ರಕರಣದ ವಿಚಾರಣೆಯನ್ನು ಹಸ್ತಾಂತರಿಸಲಾಗಿತ್ತು. ಅದಾದ ನಂತರ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದ ಬಳಿಕ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದರು. ಪ್ರಕರಣ ದಾಖಲಾಗಿ ವಾರ ಕಳೆದರೂ ಬಂಧನವಾಗದಿರುವುದಕ್ಕೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸಹ ಶ್ರೀಗಳ ಪರ ಹೇಳಿಕೆ ನೀಡಿದ್ದರು. ಇದಕ್ಕೂ ಆಕ್ರೋಶ ಕೇಳಿ ಬಂದಿತ್ತು. ಸದ್ಯ ಆಸ್ಪತ್ರೆಯಲ್ಲಿರುವ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನವಾಗಿದೆ. 

Follow Us:
Download App:
  • android
  • ios