ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಪಿಜಿ ಮಾಲೀಕ ಅತ್ಯಾ ೧ಚಾರವೆಸಗಿದ ಆಘಾತಕಾರಿ ಘಟನೆ ನಡೆದಿದೆ. ವಿದ್ಯಾರ್ಥಿನಿ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ನೆಲಮಂಗಲ (ಆ.3): ಬೆಂಗಳೂರಿನ ನೆಲಮಂಗಲ ಸಮೀಪದ ಸೋಲದೇವನಹಳ್ಳಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಪಿಜಿ ಮಾಲೀಕನಾದ ಅಶ್ರಫ್ ಎಂಬಾತ ಅತ್ಯಾ 1ಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯ ನಡೆದ ಸ್ಥಳದಲ್ಲಿ ಪೊಲೀಸರು ಮಹಜರು ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ.
ಪೊಲೀಸ್ ಮೂಲಗಳ ಪ್ರಕಾರ, ವಿದ್ಯಾರ್ಥಿನಿ ಸೋಲದೇವನಹಳ್ಳಿಯ ಪಿಜಿಯೊಂದಕ್ಕೆ ಸೇರಿ ಕೇವಲ 10 ದಿನಗಳು ಕಳೆದಿದ್ದವು. ಆರೋಪಿ ಅಶ್ರಫ್, ನಿನ್ನೆ ತಡರಾತ್ರಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೃತ್ಯವೆಸಗಿದ್ದಾನೆ. ಘಟನೆಯಿಂದ ಆಘಾತಕ್ಕೊಳಗಾದ ವಿದ್ಯಾರ್ಥಿನಿ, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದೂರಿನ ಆಧಾರದ ಮೇಲೆ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಆರೋಪಿ ಅಶ್ರಫ್‌ನನ್ನು ಬಂಧಿಸಿದ್ದಾರೆ.
ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸ್ಥಳ ಮಹಜರು ನಡೆಸಿ, ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಪಿಜಿಗಳಲ್ಲಿ ವಾಸಿಸುವ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಬಗ್ಗೆ ಪ್ರಶ್ನೆಗಳನ್ನ ಹುಟ್ಟುಹಾಕಿದೆ. ಈ ಘಟನೆಯಿಂದ ವಿದ್ಯಾರ್ಥಿನಿಯ ಕುಟುಂಬದವರು ಆಘಾತಕ್ಕೊಳಗಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಶೀಘ್ರದಲ್ಲಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
