ಬೆಂಗಳೂರು(ಮೇ.02): ನವ ವಿವಾಹಿತ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಬಿಹಾರ ಮೂಲದ ರಾಹುಲ್ (30) ಮತ್ತು ರಾಣಿ(26) ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಲಾಕ್‌ಡೌನ್ ನಡುವೆ ನೆರೆಮನೆ ಯುವಕನಿಂದ ಲೈಂಗಿಕ ಕಿರುಕುಳ!

ಶ್ರೀರಾಂಪುರದಲ್ಲಿ ವಾಸವಿದ್ದ ಜೋಡಿ, ನಾಲ್ಕು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದರು. ಕಾಟನ್‌ ಪೇಟೆಯಲ್ಲಿ ಬಟ್ಟೆಅಂಗಡಿಯೊಂದರಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಇಬ್ಬರು, ಲಾಕ್‌ಡೌನ್‌ ಆದಾಗಿನಿಂದ ಕೆಲಸವಿಲ್ಲದೇ ಮನೆಯಲ್ಲೇ ಇರುತ್ತಿದ್ದರು.

ದಂಪತಿ ಮೊದಲಿಗೆ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ರಾಣಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತ್ನಿ ಮೃತಪಟ್ಟಬಳಿಕ ರಾಹುಲ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.