Asianet Suvarna News Asianet Suvarna News

ಮದುವೆ ಮುಗಿಸಿ ಹಿಂದಿರುಗುತ್ತಿದ್ದ ನವ ದಂಪತಿ ಕಾರು ಅಪಘಾತ, ನಾಲ್ವರು ಸಜೀವ ದಹನ!

ಕರ್ನಾಟಕ ಸೇರಿದಂತೆ ದೇಶದಲ್ಲಿ ಇತ್ತೀಚೆಗೆ ಭೀಕರ ಅಪಘಾತಗಳೇ ಸಂಭವಿಸಿದೆ. ಇದೀಗ ಮದುವೆ ಮುಗಿಸಿ ಹಿಂತಿರುಗುತ್ತಿದ್ದ ನವ ದಂಪತಿಗಳ ಕಾರು ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಜೀವ ದಹನವಾಗಿದ್ದಾರೆ.

Newly weds couple and two other killed burnt alive in road accident Madhya pradesh ckm
Author
First Published May 31, 2023, 3:35 PM IST

ಇಂದೋರ್(ಮೇ.31): ಮೇ ತಿಂಗಳ ಅಂತಿಮ ವಾರ ಕರಾಳವಾರವಾಗಿ ಮಾರ್ಪಟ್ಟಿದೆ. ಕರ್ನಾಟಕ ಸೇರಿದಂತೆ ದೇಶದ ಕೆಲ ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿ ಹಲವು ಜೀವಗಳು ಬಲಿಯಾಗಿವೆ.  ಈ ಭಯಾನಕ ಅಪಘಾತಗಳ ಬೆನ್ನಲ್ಲೇ ಮತ್ತೊಂದು ಮನಸ್ಸು ಕದಡುವ ಘಟನೆಯೊಂದು ನಡೆದಿದೆ. ಮದುವೆ ಮುಗಿಸಿ ಹಿಂತಿರುಗಿ ಬರುತ್ತಿದ್ದ ನವ ದಂಪತಿಗಳ ಕಾರು ಮರಕ್ಕೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಕಾರಿನಲ್ಲಿದ್ದ ನವ ದಂಪತಿಗಳು ಸೇರಿ ನಾಲ್ವರು ಸಜೀವ ದಹನವಾಗಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ನಡೆದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದಾರೆ. ಆದರೆ ಅಪಘಾತದ ತೀವ್ರತೆಯಿಂದ ಕಾರಿನಲ್ಲಿದ್ದ ನಾಲ್ವರು ತಕ್ಷಣ ಹೊರಬರಲು ಸಾಧ್ಯವಾಗಿಲ್ಲ. ಇತ್ತ ಬೆಂಕಿ ಜ್ವಾಲೆ ಇಡೀ ಕಾರನ್ನು ಆವರಿಸಿಕೊಂಡಿದೆ. ಇದರ ಪರಿಣಾಮ ನಾಲ್ವರು ಸಜೀವ ದಹನವಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೈಸೂರು ಬೆನ್ನಲ್ಲೇ ಮತ್ತೊಂದು ಭೀಕರ ಅಪಘಾತ, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು!

ನವದಂಪತಿಗಳು 6 ತಿಂಗಳ ಹಿಂದೆ ಮದುವೆಯಾಗಿದ್ದರು. ನವ ದಂಪತಿಗಳು ಹಾಗೂ ಕುಟುಂಬ ಸದಸ್ಯರು ತಮ್ಮ ಆಪ್ತರ ಮದುವೆಗೆ ತೆರಳಿದ್ದರು. ಮದುವೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದೆ. ರಸ್ತೆ ಬದಿಯಲ್ಲಿನ ಮರಕ್ಕೆ ಕಾರು ಡಿಕ್ಕಿಯಾಗಿದೆ. ಅಪಘಾತಕ್ಕೆ ಕಾರಣವೇನು? ಅನ್ನೋದು ಬಹಿರಂಗವಾಗಿಲ್ಲ. ಕಾರು ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿವೆ. ಗಾಯಗೊಂಡ ನಾಲ್ವರು ತಕ್ಷಣ ಕಾರಿನಿಂದ ಹೊರಬರಲು ಸಾಧ್ಯವಾಗಿಲ್ಲ. ಇತ್ತ ಬೆಂಕಿ ಜ್ವಾಲೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ಕಳೆದ ವಾರ ಮಧ್ಯಪ್ರದೇಶ ಶಾಜಾಪುರದಲ್ಲಿ ಸ್ಲೀಪರ್ ಬಸ್ ಹಾಗೂ ಸರಕು ಸಾಗಿಸುವ ಟ್ರೋಲಿ ವಾಹನ ಡಿಕ್ಕಿಯಾಗಿತ್ತು. ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದರು. 15 ಮಂದಿ ಗಾಯಗೊಂಡಿದ್ದರು. ಈ ಘಟನೆ ಬೆನ್ನಲ್ಲೇ ಇದೀಗ ನವ ದಂಪತಿಗಳ ಕಾರು ಅಪಘಾತವಾಗಿ ನಾಲ್ವರು ಮೃತಪಟ್ಟಿದ್ದಾರೆ. 

 

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ, ತಲೆಯ ಮೇಲೆ ಟಿಪ್ಪರ್ ಹರಿದು 15 ವರ್ಷದ ವಿದ್ಯಾರ್ಥಿನಿ ಸಾವು

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲೂ ಬಸ್ ಸೇತುವೆಗೆ ಡಿಕ್ಕಿ ಹೊಡೆದು ಪ್ರಪಾತಕ್ಕೆ ಉರುಳಿ ಬಿದ್ದಿತ್ತು.ಈ ಅಪಘಾತದಲ್ಲಿ ವೈಷ್ಣೋದೇವಿ ಯಾತ್ರೆಗೆ ತೆರಳುತ್ತಿದ್ದ 10 ಜನರು ಸಾವನ್ನಪ್ಪಿದ್ದು, 57 ಜನರು ಗಾಯಗೊಂಡಿದ್ದರು. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿತ್ತು. ಅಮೃತಸರ್‌ದಿಂದ ಕಟ್ರಾಕ್ಕೆ ತೆರಳುತ್ತಿದ್ದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಝಜ್ಜರ್‌ ಕೊಟ್ಲಿ ಪ್ರದೇಶದಲ್ಲಿ ಮುಂಜಾನೆ 6.30 ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ಮೃತರ ಪೈಕಿ ಬಹುತೇಕರು ಬಿಹಾರ ಮೂಲದವರಾಗಿದ್ದು, ಬಿಹಾರ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ರಾಜ್ಯದಲ್ಲಿ ಸತತ ಅಪಘಾತ ಸಂಭವಿಸಿತ್ತು. ಟಿನರಸೀಪುರದಲ್ಲಿ ಇನೋವಾ ಕಾರು ಡಿಕ್ಕಿಯಾಗಿ 10 ಮಂದಿ ಮೃತಪಟ್ಟಿದ್ದರು. ಟಿ. ನರಸೀಪುರ- ಕೊಳ್ಳೆಗಾಲ ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ತಾಲೂಕಿನ ಸಂಗನಕಲ್ಲು ಗ್ರಾಮದ ಒಂದೇ ಕುಟುಂಬದ ನಾಲ್ವರು, ಮತ್ತೊಂದು ಕುಟುಂಬದ ಮೂವರು, ಇನ್ನೊಂದು ಕುಟುಂಬದ ಇಬ್ಬರು ಸೇರಿದಂತೆ ಒಟ್ಟು 9 ಜನ ಮೃತಪಟ್ಟಿದ್ದರು. ಪ್ರವಾಸಕ್ಕೆ ಬಂದಿದ್ದ ಇವರು ಬಿಳಿಗಿರಿ ರಂಗನಾಥಸ್ವಾಮಿಯ ದರ್ಶನ ಮುಗಿಸಿ ಮೈಸೂರಿನ ಕಡೆ ಬರುತ್ತಿದ್ದರು.

ಬಾಡಿಗೆ ವಾಹನದ ಮೂಲಕ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟಕ್ಕೆ ತೆರಳಿ ಪೂಜಿ ಸಲ್ಲಿಸಿ, ಮೈಸೂರಿನ ಕಡೆ ಹಿಂತಿರುಗುವಾಗ ನರಸೀಪುರ ತಾಲೂಕಿನ ಕುರುಬೂರು ಸಮೀಪದಲ್ಲಿ ಈ ಘಟನೆ ನಡೆದಿದೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಕಾರು ಮತ್ತು ಬಸ್‌ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

Follow Us:
Download App:
  • android
  • ios