ಬೆಂಗಳೂರು, (ಡಿ.21): ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು 17 ಜನರನ್ನು ಬಂಧಿಸಿದ್ದಾರೆ.

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಹಾಗೂ ಗಲಭೆಗೆ ಪ್ರಚೋದನೆ ನೀಡಿದ SDI ಹಾಗೂ  PFIನ 17 ಆರೋಪಿಗಳನ್ನು ಇಂದು (ಸೋಮವಾರ) ಅರೆಸ್ಟ್ ಮಾಡಿದ್ದಾರೆ.

ಬೆಂಗ್ಳೂರಲ್ಲಿ ಎಸ್‌ಡಿಪಿಐ, ಪಿಎಫ್‌ಐ ಕಚೇರಿ ಸೇರಿ 43 ಕಡೆ ಎನ್‌ಐಎ ದಾಳಿ!

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣವನ್ನು ತನಿಖೆ ನಡೆಸಲು ಎನ್ ಐ ಎ ಕೈಗೆತ್ತಿಕೊಂಡಿತ್ತು. ಈ ಪ್ರಕರಣ ಕುರಿತಂತೆ ತನಿಖೆ ನಡೆಸುತ್ತಿರುವ ಎನ್‌ಐಎ ತಂಡದಿಂದ ಇದುವರೆಗೆ ಹಲವು ಕಡೆ ದಾಳಿನಡೆಸಿದೆ. ಈ ಮೂಲಕ ಪ್ರಕರಣ ಸಂಬಂಧ ಮಹತ್ವದ ದಾಖಲೆಗಳನ್ನು ಕಲೆಹಾಕಿದೆ.

ಇದೀಗ ಈ 17 ಜನರ ಬಂಧನದ ಮೂಲಕ ಒಟ್ಟು ಇದುವರೆಗೆ 189 ಮಂದಿಯನ್ನು ಬಂಧಿಸಿದಂತಾಗಿದೆ.