Bengaluru: ಯುಕೆನಲ್ಲಿ ಕೆಲಸ ಕೊಡಿಸೋದಾಗಿ ಮಹಿಳೆಯರಿಗೆ ವಂಚನೆ: ನೈಜೀರಿಯಾ ಪ್ರಜೆಯ ಬಂಧನ
ಯುಕೆ ದೇಶದಲ್ಲಿ ಕೆಲಸ ಕೊಡಿಸೋದಾಗಿ ಹಣ ಹಾಕಿಸಿಕೊಂಡು ವಂಚನೆ ಮಾಡುತ್ತಿದ್ದ ನೈಜೀರಿಯಾ ಪ್ರಜೆ ನೋಕೋಚಾ ಕಾಸ್ಮೀರ್ ಇಕೆಂಬಾನನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ನಗರದಲ್ಲಿ ಬಂಧಿಸಿದ್ದಾರೆ.
ಬೆಂಗಳೂರು (ಫೆ.27): ಯುಕೆ ದೇಶದಲ್ಲಿ ಕೆಲಸ ಕೊಡಿಸೋದಾಗಿ ಹಣ ಹಾಕಿಸಿಕೊಂಡು ವಂಚನೆ ಮಾಡುತ್ತಿದ್ದ ನೈಜೀರಿಯಾ ಪ್ರಜೆ ನೋಕೋಚಾ ಕಾಸ್ಮೀರ್ ಇಕೆಂಬಾನನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ನಗರದಲ್ಲಿ ಬಂಧಿಸಿದ್ದಾರೆ. ಈ ಮೇಲ್ ಮೂಲಕ ಕಾಂಟ್ಯಾಕ್ಟ್ ಮಾಡಿ ಮಹಿಳೆಯೊಬ್ಬರಿಗೆ ವಂಚಿಸಿದ್ದ ಆರೋಪಿಯು ಯುಕೆನಲ್ಲಿ ನರ್ಸ್ ಕೆಲಸ ಕೊಡಿಸೋದಾಗಿ 34 ಲಕ್ಷ 7 ಸಾವಿರದ 542 ರೂಪಾಯಿ ಹಣ ಹಾಕಿಸಿಕೊಂಡಿದ್ದ.
ನಂತರ ಕೆಲಸ ಕೊಡಿಸದೆ ವಂಚನೆ ಮಾಡಿದ್ದು, ಈ ಸಂಬಂಧ ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಪೊಲೀಸರಿಗೆ ಮಹಿಳೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಪೊಲೀಸರು ಆರೋಪಿಯ ಬಂಧಿಸಿ ಆರು ಮೊಬೈಲ್‌ಗಳು, ಲ್ಯಾಪ್ ಟಾಪ್, ಸಿಮ್ ಕಾರ್ಡ್‌ಗಳು, ಪಾಸ್‌ಪೋರ್ಟ್ ಜಪ್ತಿ ಮಾಡಿದ್ದಾರೆ. ಸದ್ಯ ತನಿಖೆ ವೇಳೆ ಆರೋಪಿ ಇದೇ ರೀತಿ ವಂಚಿಸಿರುವುದು ಬೆಳಕಿಗೆ ಬಂದಿದ್ದು, ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
10ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು: ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ?
ಗಾಂಜಾ ಪೆಡ್ಲರ್‌ಗಳ ಬಂಧನ: ಕೊಡಗು ಪೊಲೀಸರ ವಿಶೇಷ ತಂಡ ದಾಳಿ ನಡೆಸಿ 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8 ಮಂದಿ ಪ್ರಮುಖ ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿದ್ದು, ಆರೋಪಿಗಳಿಂದ 5 ಕೆ.ಜಿ. ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು ಕೊಡಗು ಸೇರಿದಂತೆ ನೆರೆಯ ಕೇರಳ ರಾಜ್ಯಕ್ಕೂ ಗಾಂಜಾ ಪೂರೈಕೆ ಮಾಡುತ್ತಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ವಿರಾಜಪೇಟೆ ನಗರ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಸಾದಿಕ್ (33), ಖಲೀಲ… (37), ದರ್ಶನ್ (27), ಇಲಿಯಾಸ್ (44) ಹಾಗೂ ಮಡಿಕೇರಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಕರಣ್ ಕುಮಾರ್ (27), ಗಗನ್ (26), ನಿರುಪ್ (27) ಹಾಗೂ ವಿನಯ್ ಎಂಬವರನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದರು. ಮಡಿಕೇರಿಯಲ್ಲಿ ಬಂಧಿತರಾದ ಆರೋಪಿಗಳು ಮೈಸೂರು ಮಂಡಿಮೊಹಲ್ಲಾದಿಂದ ಗಾಂಜಾ ಖರೀದಿ ಮಾಡಿದ್ದು, ಬೈಕ್‌ಗಳ ಮೂಲಕ ಮಾರಾಟ ಮಾಡುತ್ತಿದ್ದರು.
ಒಡಿಶಾದಿಂದ ತರಿಸುತ್ತಿದ್ದರು: ವಿರಾಜಪೇಟೆಯಲ್ಲಿ ಬಂಧಿತ ಆರೋಪಿಗಳು ವಿಚಾರಣೆ ವೇಳೆ ಮಾಹಿತಿ ನೀಡಿದಂತೆ ಒಡಿಶಾದಿಂದ ರೈಲಿನ ಮೂಲಕ ಗಾಂಜಾ ತರಿಸಿರುವುದು ಪತ್ತೆಯಾಗಿದೆ. ಒಡಿಶಾ ಮೂಲದ ವ್ಯಕ್ತಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡಿ ಬಳಿಕ ರೈಲುಗಳ ಮೂಲಕ ಗಾಂಜಾ ತರಿಸುತ್ತಿದ್ದರು. ಸ್ವಲ್ಪ ಪ್ರಮಾಣದ ಗಾಂಜಾವನ್ನು ಮಾರಾಟ ಮಾಡಿರುವುದು ಕಂಡು ಬಂದಿದೆ ಎಂದು ಮಾಹಿತಿ ನೀಡಿದರು. ಕಳೆದ 20 ದಿನಗಳ ಅವಧಿಯಲ್ಲಿ ಜಿಲ್ಲೆಯೆ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ 5 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.
ಮೋದಿ ರೋಡ್ ಶೋಗಾಗಿ ಪಿಯು ಪರೀಕ್ಷೆ ಮುಂದೂಡಿಕೆ: ಸಮಾವೇಶಕ್ಕೆ ವಿದ್ಯಾರ್ಥಿಗಳು
ಗಾಂಜಾ ಮಾರಾಟದ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಗೆ ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮನವಿ ಮಾಡಿದರು. ಕೊಡಗಿನಲ್ಲಿ ಗಾಂಜಾ ಮಾರಾಟ ಮಿತಿ ಮೀರುತ್ತಿರುವ ಮತ್ತು ಗಾಂಜಾ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿರುವ ಹಿನ್ನೆಲೆ ಪೆಡ್ಲರ್‌ಗಳನ್ನು ಗುರಿಯಾಗಿರಿಸಿ ಎಂದ ಅವರು, ಮುಂದಿನ ದಿನಗಳಲ್ಲಿ ಗಾಂಜಾ ವ್ಯಸನಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗುತ್ತದೆ. ಒಂದು ತಿಂಗಳ ಒಳಗೆ ಕೊಡಗನ್ನು ಗಾಂಜಾ ಮುಕ್ತ ಜಿಲ್ಲೆಯನ್ನಾಗಿ ಮಾಡಲಾಗುವುದು ಎಂದರು.