ಸರ್ಕಾರಕ್ಕೆ ವಂಚನೆ ಆರೋಪ: ನಿರಾಣಿ ಶುಗಸ್೯ ವ್ಯವಸ್ಥಾಪಕ ನಿರ್ದೇಶಕ ಸ್ಪಷ್ಟನೆ
* ಸರ್ಕಾರಕ್ಕೆ ವಂಚನೆ ಆರೋಪಕ್ಕೆ ನಿರಾಣಿ ಶುಗಸ್೯ನ ವ್ಯವಸ್ಥಾಪಕ ನಿದೇರ್ಶಕ ಸ್ಪಷ್ಟನೆ
*ಕ್ಷಮೆ ಕೇಳದಿದ್ದರೆ, ಕಾನೂನು ಹೋರಾಟದ ಎಚ್ಚರಿಕೆ
* ಸಾಮಾಜಿಕ ಕಾರ್ಯಕರ್ತ ಡಾ.ರವೀಂದ್ರ ಆರೋಪ ಸತ್ಯಕ್ಕೆ ದೂರ
*ಸಂಸ್ಥೆಯ ತೇಜೋವಧೆ ಹಾಗೂ ಪುಕ್ಕಟೆ ಪ್ರಚಾರದ ಗಿಮಿಕ್
ಬೆಂಗಳೂರು, (ಜುಲೈ.04): ನಿರಾಣಿ ಶುಗಸ್೯ ಸಂಸ್ಥೆ ಮೇಲೆ ಕೇಳಿ ಬಂದಿರುವ ಆರೋಪವನ್ನು ವ್ಯವಸ್ಥಾಪಕ ನಿದೇರ್ಶಕ ವಿಜಯ ನಿರಾಣಿ ಸರಾಸಾಗಾಟಾಗೆ ನಿರಾಕಾರಿಸಿದ್ದಾರೆ.
ಸರಕಾರಕ್ಕೆ ಯಾವುದೇ ರೀತಿಯಲ್ಲೂ ವಂಚನೆ ಮಾಡದೆ, ಕಾನೂನಿನ ಪ್ರಕಾರವೇ ಕಾರ್ಮಿಕರಿಗೆ ಸಕಾಲಕ್ಕೆ ಸರಿಯಾಗಿ ತಿಂಗಳ ವೇತನ, ರೈತರಿಗೆ ಹಣ ಪಾವತಿ ಹಾಗೂ ಶಾಸನ ಬದ್ಧವಾಗಿ ಶುಲ್ಕವನ್ನು ಭರಿಸಿದ್ದೇವೆ ಎಂದು ನಿರಾಣಿ ಶುಗಸ್೯ನ ವ್ಯವಸ್ಥಾಪಕ ನಿದೇರ್ಶಕ ವಿಜಯ ನಿರಾಣಿ ಸ್ಪಷ್ಟನೆ ಕೊಟ್ಟಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಡಾ.ಹೆಚ್.ಎನ್. ರವೀಂದ್ರ ಅವರು, ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ವಂಚನೆಯಾಗಿದ್ದು,ತನಿಖೆ ನಡೆಸುವಂತೆ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಕ್ಕೆ ದೂರು ನೀಡಿದ್ದರು. ಇದಕ್ಕೆ ಸೃಷ್ಟನೆ ನೀಡಿರುವ ವಿಜಯ ನಿರಾಣಿ , ಕಾನೂನು ಬದ್ಧವಾಗಿಯೇ ವ್ಯವಹಾರ ನಡೆಸುತ್ತಿದ್ದು ಎಲ್ಲಿಯೂ ಕಾನೂನು ಉಲ್ಲಂಘನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ನಾಯಕನ ಕಂಪನಿ ತೆಕ್ಕೆಗೆ ಮಂಡ್ಯ ಸಕ್ಕರೆ ಕಾರ್ಖಾನೆ
ನಷ್ಟಕ್ಕೆ ಸಿಲುಕಿದ್ದ ಕಾರ್ಖಾನೆಯನ್ನು ಕೊವಿಡ್ ಸಂಕಷ್ಟದ ನಡುವೆಯೂ ಅತಿ ಕಡಿಮೆ ಅವಧಿಯಲ್ಲಿ ಮರು ಪ್ರಾರಂಭಿಸಿದ್ದೇವೆ. ಸುಖಾಸುಮ್ಮನೆ ತಮ್ಮ ಹಾಗೂ ನಿರಾಣಿಶುಗಸ್೯ ಮೇಲೆ ಸುಳ್ಳು ಆರೋಪ ಮಾಡಿರುವ ಡಾ.ರವೀಂದ್ರಕೂಡಲೇ ಕ್ಷೆಮೆಯಾಚಿಸಬೇಕು ಇಲ್ಲದಿದ್ದರೆ, ಕಾನೂನು ಕ್ರಮಜ ರುಗುಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಸಂಸ್ಥೆ ಇಲ್ಲವೇ ವ್ಯಕ್ತಿಯೊಬ್ಬರಬಗ್ಗೆ ಸತ್ಯಾಸತ್ಯತೆಯನ್ನು ಅರಿತು ಡಾ.ರವೀಂದ್ರ ಅವರು ಮಾತನಾಡಬೇಕು. ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ ಎಂದುಆಧಾರರಹಿತವಾಗಿ ಆರೋಪ ಮಾಡುವುದು ತಪ್ಪು. ಈ ಕೂಡಲೇತಮ್ಮ ಸಂಸ್ಥೆ ವಿರುದ್ಧ ನೀಡಿರುವಹೇಳಿಕೆಯನ್ನುಸಾರ್ವಜನಿಕವಾಗಿ ಹಿಂಪಡೆದು ಕ್ಷಮಾಪಣೆಕೇಳಬೇಕು.ಇಲ್ಲವಾದಲ್ಲಿ ಅವರ ಮೇಲೆ ಮಾನನಷ್ಟ ಮೊಕದ್ದಮೆಹೂಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಸರ್ಕಾರಕ್ಕೆ ವಂಚನೆ ಮಾಡುವ ಪ್ರಮೇಯವೇ ಬರುವುದಿಲ್ಲ. ಏಕೆಂದರೆ ನಾವು ಕಾನೂನಿನ ಪ್ರಕಾರವೇ ಎಲ್ಲಾ ಪ್ರಕ್ರಿಯೆಗಳನ್ನುನಡೆಸುತ್ತಿದ್ದೇವೆ. ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಡಾ.ರವೀಂದ್ರಆರೋಪ ಮಾಡಿ ಎಸಿಬಿಗೆ ದೂರು ಸಲ್ಲಿಸಿದ್ದು, ಅವೆಲ್ಲವೂನಿರಾಧಾರವಾಗಿವೆ. ನಮ್ಮ ಏಳ್ಗೆಯನ್ನು ಸಹಿಸದೆ ನಿರಾಣಿ ಸಮೂಹದ ಮೇಲೆ ಕೇವಲ ಬಿಟ್ಟಿ ಪ್ರಚಾರ ಪಡೆಯುವದುರುದ್ದೇಶದಿಂದ ಅವರು ಆಧಾರರಹಿತ ಆರೋಪಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಗಿತಗೊಂಡಿದ್ದ ಕಾರ್ಖಾನೆಯನ್ನು ಗುತ್ತಿಗೆ ಪಡೆದು ಕೊವಿಡ್ಲೆಕ್ಕಿಸದೇ ಅತ್ಯಂತ ಕಡಿಮೆ ಅವಧಿಯಲ್ಲಿ ಪುನರುಜ್ಜೀವನಗೊಳಿಸಿಕಾರ್ಖಾನೆ ಪ್ರಾರಂಭಿಸಿ, ಸ್ಥಳೀಯರಿಗೆ ಹೆಚ್ಚಿನ ಪ್ರಮಾಣದಲ್ಲಿಉದ್ಯೋಗಗಳನ್ನು ನೀಡಲಾಗಿದೆ. ಕಾರ್ಮಿಕರ ವೇತನ, ರೈತರ ಬಿಲ್ ಪಾವತಿ, ಗುತ್ತಿಗೆದಾರರು, ಕಬ್ಬುಕಟಾವುದಾರರು, ವಾಹನ ಬಾಡಿಗೆದಾರರ ಹಣ ಎಲ್ಲವನ್ನುಸಕಾಲಕ್ಕೆ ನಿಯಮಿತವಾಗಿ ನೀಡುತ್ತಾ ಬಂದಿದ್ದೇವೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಟ್ರಯಲ್ ಅವಧಿಯಲ್ಲಿ 8 ಕೋಟಿ ನಷ್ಟಅನುಭವಿಸಿದರೂ ಸಕಾಲಕ್ಕೆ ರೈತರ ಬಿಲ್ ಪಾವತಿ ಮಾಡಲಾಗಿದೆ. ಎಲ್ಲಾ ಶಾಸನಬದ್ದ ಶುಲ್ಕಗಳನ್ನು ನಿಯಮಿತವಾಗಿಪಾವತಿಸಿದ್ದೇವೆ. ಕಾರ್ಖಾನೆ ವಿಸ್ತರಣೆಗೆ 5 ವರ್ಷಗಳ ಕಾಲಮಿತಿ ಇದ್ದರೂ, ಶಾಸನಬದ್ದವಾಗಿ ಹಸ್ತಾಂತರವಾಗದಿದ್ದರೂ ಕಾರ್ಖಾನೆ ಸುಸ್ಥಿರವಾಗಿನಡೆಯಬೇಕು ಎಂಬ ಸದುದ್ದೇಶದಿಂದ 50 ಕೋಟಿ ಹಣಹೂಡಿಕೆ ಮಾಡಿ ಕೇವಲ ಒಂದೇ ವರ್ಷದಲ್ಲಿ ಆಧುನಿಕತಂತ್ರಜ್ಞಾನದೊಂದಿಗೆ 3,500 ಟಿಸಿಡಿಯಿಂದ 5,000 ಟಿಸಿಡಿ ಮೇಲ್ದರ್ಜೆಗೆ ಏರಿಸಿದ್ದೇವೆ ವಿಜಯ ನಿರಾಣಿ ಅವರು ತಿಳಿಸಿದ್ದಾರೆ.
ಕಾರ್ಖಾನೆಯಲ್ಲಿದ್ದ ಎಲ್ಲ ನಿರಪಯುಕ್ತ (ಸ್ಕ್ರ್ಯಾಪ್) ವಸ್ತುಮಾರಿದ್ದಕ್ಕೂ ಪ್ರತ್ಯೇಕವಾಗಿ ಲೆಕ್ಕ ಇಡಲಾಗಿದೆ. ಡಿಸ್ಟಿಲರಿ ಘಟಕಸ್ಥಾಪನೆಗೆ ಎಲ್ಲ ಯೋಜನೆ ಹಾಕಿಕೊಂಡಿದ್ದೂ ಸರ್ಕಾರ ಸ್ಥಳಗುರ್ತಿಸಿಕೊಟ್ಟರೇ ಶೀಘ್ರವೇ ಕೆಲಸ ಪ್ರಾರಂಭವಾಗುತ್ತದೆ. ಕಾರ್ಮಿಕ ಹಾಗೂ ರೈತ ಸ್ನೇಹಿಯಾಗಿ ಕಾರ್ಖಾನೆಯನ್ನುನಡೆಸಬೇಕು ಎಂಬ ಒಂದೇ ಉದ್ದೇಶದಿಂದ ಇದನ್ನುಮಾಡಲಾಗಿದೆ. ರೈತರು ಹಾಗೂ ಕಾರ್ಮಿಕರ ಬಗ್ಗೆ ತಮಗಿರುವಬದ್ಧತೆಯನ್ನು ಇದು ತೋರಿಸುತ್ತದೆ ಎಂದಿದ್ದಾರೆ.
ದೀರ್ಘ ಕಾಲದ ಗುತ್ತಿಗೆಯ ಅವಧಿಯನ್ನು ಪ್ರಶ್ನೆ ಮಾಡುತ್ತಿರುವಅವರಿಗೆ ಅದೊಂದು ಸರ್ಕಾರದ ನಿರ್ಧಾರ ಎಂಬ ಕನಿಷ್ಠಜ್ಞಾನವೂ ರವೀಂದ್ರ ಅವರಿಗೆ ಇಲ್ಲ ತಿರುಗೇಟು ನೀಡಿದ್ದಾರೆ. ಗುತ್ತಿಗೆಯನ್ನು ಸಹಕಾರಿ ಸಕ್ಕರೆ ಕಾರ್ಖಾನೆಗಳ ಇತಿಹಾಸದಲ್ಲೆಅತಿಹೆಚ್ಚು ಬೆಲೆಗೆ ಬಿಡ್ ಮಾಡಿ ಸರ್ಕಾರದ ಕರಾರಿನಂತೆ ಲೀಜ್ಪಡೆಯಲಾಗಿದೆ. 1 ಕೋಟಿ ಇ.ಎಂ.ಡಿ ಹಾಗೂ ಭದ್ರತಾ ಠೇವಣಿ 5 ಕೋಟಿಯನ್ನು ಈಗಾಗಲೇ ಸಂದಾಯ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ