Asianet Suvarna News Asianet Suvarna News

Noida Accident: ಡಿಕ್ಕಿ ಹೊಡೆದು ಮಹಿಳೆಯನ್ನು ರಸ್ತೆ ಮೇಲೆ ಎಳೆದೊಯ್ದ ಐಷಾರಾಮಿ ಕಾರು: ಬಲಿಯಾದ ರಿಸೆಪ್ಷನಿಸ್ಟ್

ಬಹುರಾಷ್ಟ್ರೀಯ ಕಂಪನಿಯ ಬ್ಯಾಂಕ್ ಉದ್ಯೋಗಿಯೊಬ್ಬರು ಈ ಕಾರನ್ನು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಈ ಸಂಬಂಧ ಅವರನ್ನು ಬಂಧಿಸಿ ಕೊಲೆ ಆರೋಪ ಕೇಸ್‌ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

noida woman 24 killed after car rams her scooter bank employee arrested ash
Author
First Published Dec 6, 2022, 3:28 PM IST

ವೇಗವಾಗಿ ಚಲಿಸುತ್ತಿದ್ದ ಐಷಾರಾಮಿ ಕಾರು (Luxury Car) ಸ್ಕೂಟರ್‌ಗೆ (Scooter) ಡಿಕ್ಕಿ ಹೊಡೆದು 24 ವರ್ಷದ ಮಹಿಳೆಯೊಬ್ಬರು (Women) ಬಲಿಯಾಗಿರುವ ಘಟನೆ ಉತ್ತರ ಪ್ರದೇಶದ (Uttar Pradesh) ನೋಯ್ಡಾದಲ್ಲಿ (Noida) ನಡೆದಿದೆ. ಅತಿ ವೇಗದಲ್ಲಿದ್ದ (Over Speed) ಹಾಗೂ ವಿಐಪಿ ನಂಬರ್‌ ಹೊಂದಿದ್ದ ಕಾರು, ಮಹಿಳೆ ಸಮೇತ ಸ್ಕೂಟರನ್ನು ರಸ್ತೆಯಲ್ಲಿ ಕೆಲ ಮೀಟರ್‌ಗಳಷ್ಟು ದೂರ ಎಳೆದೊಯ್ದಿದೆ ಎಂದೂ ವರದಿಯಾಗಿದೆ. ಬಹುರಾಷ್ಟ್ರೀಯ ಕಂಪನಿಯ ಬ್ಯಾಂಕ್ ಉದ್ಯೋಗಿಯೊಬ್ಬರು (Bank Employee) ಈ ಕಾರನ್ನು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಈ ಸಂಬಂಧ ಅವರನ್ನು ಬಂಧಿಸಿ ಕೊಲೆ ಆರೋಪ (Murder Case) ಕೇಸ್‌ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ ನೋಯ್ಡಾದ ಸೆಕ್ಟರ್ 39 ಪೊಲೀಸ್ ಠಾಣೆ ವ್ಯಾಪ್ತಿಯ ಸೆಕ್ಟರ್ 96 ರಲ್ಲಿನ ಸೂಪರ್‌ಟೆಕ್ ಇ-ಸ್ಕ್ವೇರ್ ಕಟ್ಟಡದ ಹೊರಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಆರೋಪದ ಮೇಲೆ OR 04 Q 0001 ನಂಬರಿನ ಜಾಗ್ವಾರ್ ಕಾರು ಚಾಲಕನ ವಿರುದ್ಧ ಈ ಹಿಂದೆಯೇ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಪೊಲೀಸ್ ಕಮಿಷನರ್ ಲಕ್ಷ್ಮೀ ಸಿಂಗ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಂಗಳವಾರ ಆರೋಪಿ ವಿರುದ್ಧ ಕೊಲೆ ಕೇಸ್‌ ಅನ್ನಾಗಿ ಪರಿವರ್ತಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನೋಯ್ಡಾ ನಿವಾಸಿ ದೀಪಿಕಾ ತ್ರಿಪಾಠಿ ಅವರು ಕೆಲಸಕ್ಕೆ ಹೋಗುತ್ತಿದ್ದಾಗ ಸ್ಯಾಮ್ಯುಯೆಲ್ ಆಂಡ್ರ್ಯೂ ಪೈಸ್ಟರ್ (31) ಚಲಾಯಿಸುತ್ತಿದ್ದ ಕಾರು ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: Viral Video: ಪೊಲೀಸರು ಎಸೆದ ತರಕಾರಿ ಎತ್ತಿಕೊಳ್ಳಲು ಹೋಗಿ ರೈಲು ಅಪಘಾತದಲ್ಲಿ 2 ಕಾಲು ಕಳೆದುಕೊಂಡ ವ್ಯಾಪಾರಿ..!

ತ್ರಿಪಾಠಿ ಇ-ಸ್ಕ್ವೇರ್‌ನಲ್ಲಿ ರಿಸೆಪ್ಷನಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದರೆ, ಫರಿದಾಬಾದ್‌ನಲ್ಲಿ ವಾಸಿಸುವ ಪೈಸ್ಟರ್ ಅಮೆರಿಕನ್ ಎಕ್ಸ್‌ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಈ ಘಟನೆಯ ಬಗ್ಗೆ ಪೊಲೀಸರಿಗೆ ಎಚ್ಚರಿಕೆ ನೀಡಲಾಯಿತು, ನಂತರ ಸಂತ್ರಸ್ತೆಯನ್ನು ಸೆಕ್ಟರ್ 110 ರಲ್ಲಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ವೈದ್ಯರು ಆಕೆ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ನಂತರ, ಜಾಗ್ವಾರ್ ಕಾರು ಚಲಾಯಿಸುತ್ತಿದ್ದವರನ್ನು ಬಂಧಿಸಲಾಗಿದೆ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸುದ್ದಿಸಂಸ್ಥೆ ಪಿಟಿಐಗೆ ಹೇಳಿದ್ದಾರೆ.

ಪೊಲೀಸರು ದಾಖಲಿಸಿದ ದೂರಿನ ಪ್ರಕಾರ, ಒಡಿಶಾ-ನೋಂದಾಯಿತ ಕಾರು "ಅತಿ ವೇಗದಲ್ಲಿ" "ಅಜಾಗರೂಕತೆಯಿಂದ" ಚಾಲನೆ ಮಾಡುತ್ತಿತ್ತು ಸ್ಕೂಟರ್‌ಗೆ ತೀವ್ರ ಹಾನಿಯಾಗಿದ್ದು, ಈ ಹಿನ್ನೆಲೆ ಕಾರು ಅತಿ ವೇಗದಲ್ಲಿರುವುದನ್ನು ಸೂಚಿಸುತ್ತದೆ. ಮೃತರ ಸಹೋದರನ ದೂರಿನ ಆಧಾರದ ಮೇಲೆ, ಸೆಕ್ಟರ್ 39 ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 279 (ಅತಿಯಾದ ಚಾಲನೆ), 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಮತ್ತು 427 (ಕಿಡಿಗೇಡಿತನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ: ದಾವಣಗೆರೆ: ಕಾರು, ಮಿನಿ ಬಸ್, ಟಾಟಾ ಏಸ್ ಮಧ್ಯೆ ಸರಣಿ ಅಪಘಾತ, ಓರ್ವ ವ್ಯಕ್ತಿ ಸಾವು

ಹಾಗೆ, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸೋಮವಾರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ನಂತರ ಪೊಲೀಸ್‌ ಆಯುಕ್ತೆ ಲಕ್ಷ್ಮೀ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಜಂಟಿ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ರವಿಶಂಕರ್ ಛಬಿ ತಿಳಿಸಿದ್ದಾರೆ. ಸ್ಥಳೀಯ ಪರಿಶೀಲನೆ ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಆಧಾರದ ಮೇಲೆ, ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ದಾಖಲಿಸಲಾಗಿದೆ" ಎಂದೂ ಅವರು ಹೇಳಿದರು.

ಅತಿ ವೇಗದಲ್ಲಿ ವಾಹನಗಳನ್ನು ಓಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಇದೀಗ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದೂ ಅವರು ಹೇಳಿದರು. ಪೊಲೀಸ್ ಅಂಕಿಅಂಶಗಳ ಪ್ರಕಾರ ನೋಯ್ಡಾದಲ್ಲಿರುವ ಗೌತಮ್ ಬುದ್ಧ ನಗರ ಜಿಲ್ಲೆಯಾದ್ಯಂತ ಈ ವರ್ಷ 350 ಕ್ಕೂ ಹೆಚ್ಚು ಜನರು ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ದೆಹಲಿಗೆ ಹೊಂದಿಕೊಂಡಿರುವ ಜಿಲ್ಲೆಯಲ್ಲಿ ಈ ವರ್ಷ ಪ್ರತಿದಿನವೂ ಸುಮಾರು 3 ರಸ್ತೆ ಅಪಘಾತದ ಘಟನೆಗಳು ದಾಖಲಾಗಿದ್ದು, ಇದರಲ್ಲಿ 680 ಜನರು ಗಾಯಗೊಂಡಿದ್ದಾರೆ ಎಂದೂ ಡೇಟಾ ತೋರಿಸಿದೆ.

ಇದನ್ನೂ ಓದಿ: ದ್ವಿಚಕ್ರ ವಾಹನ‌ ಸವಾರರಿಗೆ ಯಮ ಸ್ವರೂಪಿಯಾದ ಫ್ಲೈಓವರ್ ಮೇಲೆ ಬೈಕ್ ಬ್ಯಾನ್ ಮಾಡಲು ಪೊಲೀಸರ ಮನವಿ

Follow Us:
Download App:
  • android
  • ios