Crime News: ಆಸ್ಪತ್ರೆಯಲ್ಲಿ ನರ್ಸ್ ಕಟ್ಟಿಹಾಕಿ ಗ್ಯಾಂಗ್ ರೇಪ್; ಅಪ್ರಾಪ್ತ ಸೇರಿ ಮೂವರ ಬಂಧನ
Crime News Today: ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ನರ್ಸ್ ಒಬ್ಬರನ್ನು ಕಟ್ಟಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಚತ್ತಿಸ್‌ಗಢದಲ್ಲಿ ನಡೆದಿದೆ. ಘಟನೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಭೋಪಾಲ್: ಚತ್ತಿಸ್‌ಗಢದ ಆರೋಗ್ಯ ತಪಾಸಣೆ ಕೇಂದ್ರವೊಂದರಲ್ಲಿ ನರ್ಸ್ ಒಬ್ಬರನ್ನು ಕಟ್ಟಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಪ್ರಕರಣದಲ್ಲಿ ಒಟ್ಟೂ ನಾಲ್ವರು ಆರೋಪಿಗಳಿದ್ದು ಅದರಲ್ಲಿ ಒಬ್ಬ ಅಪ್ರಾಪ್ತ ಎನ್ನಲಾಗಿದೆ. ಅಪ್ರಾಪ್ತ ಸೇರಿದಂತೆ ಮೂವರನ್ನು ಈಗಾಗಲೇ ಬಂಧಿಸಲಾಗಿದ್ದು ಒಬ್ಬ ಪರಾರಿಯಾಗಿದ್ದಾನೆ. ನಾಲ್ವರು ತಮ್ಮನ್ನು ಕಟ್ಟಿಹಾಕಿ ಅತ್ಯಾಚಾರ ಮಾಡಿದ್ದಾರೆ. ಕೃತ್ಯವನ್ನು ವಿಡಿಯೋ ರೆಕಾರ್ಡ್ ಮಾಡಿ ಪೊಲೀಸರಿಗೆ ವಿಚಾರ ತಿಳಿಸಿದರೆ ವಿಡಿಯೋ ಬಹಿರಂಗ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ಥೆ ತಿಳಿಸಿದ್ದಾರೆ. ಸಂತ್ರಸ್ಥೆ ನಂತರ ತನ್ನ ಪೋಷಕರಿಗೆ ಆದ ವಿಚಾರವನ್ನು ತಿಳಿಸಿದ ನಂತರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅದರಲ್ಲಿ ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಆತನ ಹುಡುಕಾಟಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ.
ಇದನ್ನೂ ಓದಿ: ಮಹಿಳೆ ಅಪಹರಿಸಿ ಸಾಮೂಹಿಕ ಅತ್ಯಾಚಾರ, ಖಾಸಗಿ ಅಂಗದೊಳಗೆ ಕಬ್ಬಿಣದ ಸಲಾಕೆ ಹಾಕಿ ಕ್ರೌರ್ಯ
ಮಹೇಂದ್ರಗಢ ಜಿಲ್ಲೆಯ ಚಿಪ್ಚಿಪ್ಪಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಸತ್ಯ ಬಾಯ್ಬಿಟ್ಟಿದ್ದು ಆರೋಗ್ಯ ಕೇಂದ್ರದಲ್ಲಿ ನರ್ಸ್ ಒಬ್ಬರೇ ಕೆಲಸ ಮಾಡುತ್ತಿರುವುದನ್ನು ಅರಿತ ನಂತರ ಅತ್ಯಾಚಾರಕ್ಕೆ ನಾಲ್ವರು ಯೋಜನೆ ರೂಪಿಸಿದ್ದರು ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ನಡಿದಿದೆ. ಆರೋಗ್ಯ ಕೇಂದ್ರ ಒಳಗೆ ಬಂದ ಆರೋಪಿಗಳು ಸಂತ್ರಸ್ಥೆಯ ಕೈಗಳನ್ನು ಕಟ್ಟಿ ಹಾಕಿದ್ದಾರೆ. ನಂತರ ಒಬ್ಬರಾದ ನಂತರ ಒಬ್ಬರು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ.
ಇದನ್ನೂ ಓದಿ: Crime News: ಸಾಮೂಹಿಕ ಅತ್ಯಾಚಾರ, ವಿಡಿಯೋ ಮಾಡಿ ಬ್ಲಾಕ್‌ಮೇಲ್: ಅಪ್ರಾಪ್ತೆ ಆತ್ಮಹತ್ಯೆಗೆ ಯತ್ನ
"ಮಹಿಳೆ ನಮ್ಮ ಬಳಿ ದೂರು ದಾಖಲಿಸಿದರು. ತಕ್ಷಣ ಮೂವರು ಆರೋಪಿಗಳನ್ನು ಬಂಧಿಸಿದ್ದೇವೆ. ಇನ್ನೊಬ್ಬನಿಗಾಗಿ ಹುಡುಕಾಡುತ್ತಿದ್ದೇವೆ," ಎಂದು ಹಿರಿಯ ಪೊಲೀಸ್ ಅಧಿಕಾರಿ ನಿಮೇಶ್ ಬರೈಯಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆಯ ಬೆನ್ನಲ್ಲೇ ಕೃತ್ಯವನ್ನು ಖಂಡಿಸಿ ಚತ್ತಿಸ್‌ಗಢ ಬಿಜೆಪಿ ಸದಸ್ಯರು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಭೂಪೇಶ್ ಭಗೇಲ್ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.
ಇದನ್ನೂ ಓದಿ: Crime News: ಮದ್ಯದಲ್ಲಿ ಮತ್ತು ಬರುವ ಔಷಧಿ ಹಾಕಿ ಮಹಿಳೆಯ ಅತ್ಯಾಚಾರ: ಮೂವರ ಬಂಧನ
ಆರೋಗ್ಯ ಇಲಾಖೆ ಕೆಲಸಗಾರರೂ ಸಹ ಘಟನೆಯನ್ನು ಖಂಡಿಸಿದ್ದು, ಸುರಕ್ಷತೆಯ ಬಗ್ಗೆ ಪ್ರಶ್ನಿಸಿದ್ದಾರೆ. ಗ್ರಾಮ ಪ್ರದೇಶಗಳಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗಳಿಗೆ ಸುರಕ್ಷತೆ ನೀಡಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಸರ್ಕಾರ ರಕ್ಷಣೆ ಒದಗಿಸಿದರೆ ಮಾತ್ರ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. "ನಮಗೆ ರಕ್ಷಣೆ ಬೇಕಿದೆ. ಆರೋಫಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾವು ಕೆಲಸಕ್ಕೆ ಹೋಗುವುದಿಲ್ಲ," ಎಂದು ಸರ್ಕಾರಿ ಆರೋಗ್ಯ ಕೇಂದ್ರವೊಂದರ ಮುಖ್ಯ ಆರೋಗ್ಯಾಧಿಕಾರಿ ಪ್ರತಿಮಾ ಸಿಂಗ್ ತಿಳಿಸಿದ್ದಾರೆ.