Asianet Suvarna News Asianet Suvarna News

ಪಾಪ ಪ್ರಜ್ವಲ್, ಎಲ್ರೂ ನೋಡ್ಲಿ ಅಂತ ಅಶ್ಲೀಲ ವಿಡಿಯೋ ಹಂಚಿಕೊಂಡ; ಪೊಲೀಸರು ಬಂದ್ರು, ಎತ್ತಾಕೊಂಡ್ ಹೋದ್ರು!

ತನ್ನ ಮೊಬೈಲ್‌ನಲ್ಲಿರುವ ಅಶ್ಲೀಲ ವಿಡಿಯೋಗಳನ್ನು ತಾನೊಬ್ಬನೇ ನೋಡುವುದೇಕೆ, ಎಲ್ಲರೂ ನೊಡಲೆಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಮಹಿಳೆಯರ ಮಾನಹಾನಿ ಮಾಡುತ್ತಿದ್ದ ಪ್ರಜ್ವಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Obscene video shared Prajwal was arrested by mudigere Police in Chikkamagaluru sat
Author
First Published May 10, 2024, 5:26 PM IST

ಚಿಕ್ಕಮಗಳೂರು (ಮೇ 10): ರಾಜ್ಯದಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವುದರ ಮೇಲೆಯೂ ಹದ್ದಿನ ಕಣ್ಣಿಡಲಾಗಿದೆ. ಈಗ ಚಿಕ್ಕಮಗಳೂರಿನಲ್ಲಿ ಯುವ ಪ್ರಜ್ವಲ್ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬೆನ್ನಲ್ಲಿಯೇ ಆತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಹೌದು, ಈ ಹಿಂದೆ ಅಶ್ಲೀಲ ವಿಡಿಯೋ ನೋಡುವುದಕ್ಕೆ ಹಂಚಿಕೆ ಮಾಡುವುದಕ್ಕೆ ಕಾನೂನಿನಲ್ಲಿ ಹೆಚ್ಚಿನ ನಿರ್ಬಂಧ ಇರಲಿಲ್ಲ. ಆದರೆ, ಬೇರೊಬ್ಬರ ಮಾನಹಾನಿ ಮಾಡುವುದಕ್ಕೆ ಯಾವುದೇ ಅವಕಾಶವಿಲ್ಲ. ಇತ್ತೀಚೆಗೆ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಆಗುತ್ತಿರುವ ಬೆನ್ನಲ್ಲಿಯೇ ಸಾಮಾಜಿಕ ಜಾಲತಾಣದ ಮೇಲೆ ಸೈಬರ್ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಜೊತೆಗೆ, ರಾಜ್ಯದಲ್ಲಿ ಅಶ್ಲೀಲ ವಿಡಿಯೋ ಹಂಚಿಕೆ ಮಾಡುವುದು, ಅದನ್ನು ಪ್ರದರ್ಶನ ಮಾಡುವುದನ್ನು ನಿರ್ಬಂಧಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಆದರೂ, ಇಲ್ಲೊಬ್ಬ ಯುವ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಜೈಲು ಪಾಲಾಗಿದ್ದಾನೆ.

ಕೊಡಗು ವಿದ್ಯಾರ್ಥಿನಿಯ ತಲೆ ಕಡಿದಾತ ಆತ್ಮಹತ್ಯೆ, ಅಪ್ರಾಪ್ತೆಯ ರುಂಡಕ್ಕಾಗಿ ಪೊಲೀಸರ ಶೋಧ!

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ಹಂಚಿಕೊಂಡ ಯುವಕನ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಕಳಸ ತಾಲೂಕಿನ ಸಂಸೆ ಗ್ರಾಮದ ಯುವಕ ಪ್ರಜ್ವಲ್ ಎಂಬ ಯುವಕನ ವಿರುದ್ಧ ಎಫ್‌ಐರ್ ದಾಖಲಾಗಿದೆ. ಈ ಯುವಕ ತನ್ನ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಖಾತೆಯಲ್ಲಿ ಅಶ್ಲೀಲ ವಿಡಿಯೋ ಹಾಗೂ ಫೋಟೋ ಹಂಚಿಕೊಂಡಿದ್ದನು. ಇದರ ಜೊತೆಗೆ, ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುವಂತಹ ಪದಬಳಕೆ ಮಾಡಿದ್ದನು. ಇದರಿಂದ ಸಾಮಾಜಿಕ ಜಾಲತಾಣದಲ್ಲಿ ಆತನ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದವು.

ಬೆಂಗಳೂರಲ್ಲಿ ಕಳೆದ 20 ವರ್ಷದಿಂದ ಜೊತೆಗಿದ್ದ ತೃತೀಯ ಲಿಂಗಿಯನ್ನು ಕೊಲೆಗೈದ ಮಹಿಳೆ!

ಇನ್ನು ಕುದುರೆಮುಖ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಯುವಕ ಇಂತಹ ಕೃತ್ಯ ಎಸಗಿದ್ದಾನೆ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ನಂತರ, ಆರೋಪಿಯನ್ನು ಬಂಧಿಸಿ ವಶಕ್ಕೆ ಪಡೆದ ಪೊಲೀಸರು ಯುವಕ ಪ್ರಜ್ವಲ್‌ನನ್ನು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ ಹಾಗೂ ಮಹಿಳೆಯರ ಖಾಸಗಿತನಕ್ಕೆ ಧಕ್ಕೆ ತಂದ ಪ್ರಕರಣದಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸುವ ಸಾಧ್ಯತೆಯಿದೆ.

Follow Us:
Download App:
  • android
  • ios