Asianet Suvarna News Asianet Suvarna News

ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ದೂರು ನೀಡಿದ Muruga Matha ವಾರ್ಡನ್‌

Muruga Mutt sexual harassment case: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾದ ಬೆನ್ನಲ್ಲೇ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜ್‌ ವಿರುದ್ಧ ಮಠದ ವಾರ್ಡನ್‌ ಅತ್ಯಾಚಾರ ಯತ್ನ ಪ್ರಕರಣ ದಾಖಲಿಸಿದ್ದಾರೆ.

Odanadi executive says victims of sexual harassment visited them with fear
Author
First Published Aug 27, 2022, 12:48 PM IST

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಾದ ಬೆನ್ನಲ್ಲೇ ಮಠದ ಮಾಜಿ ಆಡಳಿತಾಧಿಕಾರಿ ಮತ್ತು ಮಾಜಿ ಸಚಿವ ಎಸ್‌ಕೆ ಬಸವರಾಜನ್‌ ಮತ್ತು ಪತ್ನಿ ಸೌಭಾಗ್ಯ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲಾಗಿದೆ. ಮೂಲಗಳ ಪ್ರಕಾರ ಬೃಹನ್ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್‌ ಅವರ ಬಳಿ ಶರಣರು ಲೈಂಗಿಕ ದೌರ್ಜನ್ಯ ಮಾಡಿರುವ ವಿಡಿಯೋ ಸಾಕ್ಷಿಯಿದೆ ಎನ್ನಲಾಗಿದೆ. ಆಶ್ರಮದ ಮಹಿಳಾ ವಾರ್ಡನ್‌ ಬಸವರಾಜನ್ ಮತ್ತು ಪತ್ನಿ ಸೌಭಾಗ್ಯ ಅವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶರಣರು ಮತ್ತು ಬಸವರಾಜನ್‌ ನಡುವಿನ ಗಲಾಟೆ ಮುನ್ನೆಲೆಗೆ ಬಂದು ಬಹಳ ಕಾಲವಾಗಿದೆ. ಆದರೆ ಮಠದ ಪ್ರಕಾರ ವೈಷಮ್ಯದಿಂದ ಮಠದ ವಿರೋಧಿಗಳು ಶ್ರೀಗಳ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. 

ಪ್ರಕರಣವನ್ನು ದಾಖಲಿಸಿದ ಒಡನಾಡಿ ಸಂಸ್ಥೆಯ ಕೌನ್ಸಿಲರ್‌ ಸರಸ್ವತಿ ಸುವರ್ಣ ನ್ಯೂಸ್‌ ಜೊತೆಗೆ ಮಾತನಾಡಿ "ಜುಲೈ 24ರಂದು ಮಕ್ಕಳು ದೌರ್ಜನ್ಯದಿಂದ ಬೇಸತ್ತು ಬೆಂಗಳೂರಿಗೆ ಬಂದಿದ್ದಾರೆ. ಹಾಸ್ಟೆಲ್ ನಿಂದ ಅವರನ್ನು ಹೊರ ಹಾಕಲಾಗಿತ್ತಂತೆ. ಅಲ್ಲಿ‌ ಬಹಳಷ್ಟು ಸಮಯ ಒಂದೇ ಕಡೆ ನಿಂತಿದ್ದರಿಂದ ಆಟೋ ಚಾಲಕರೊಬ್ಬರು ಅವರನ್ನು ವಿಚಾರಿಸಿ, ಸಮೀಪದ ಕಾಟನ್ ಪೇಟೆ ಪೊಲೀಸ್ ಸ್ಟೇಷನ್ ಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ‌ ಮಕ್ಕಳು ಯಾರನ್ನು ಭೇಟಿ ಮಾಡಿದ್ರು ಅನ್ನೋ ಮಾಹಿತಿ ನಮಗಿಲ್ಲ. ಮಕ್ಕಳು ಭಯದ ಕಾರಣಕ್ಲೆ ತಮ್ಮ ಮೇಲೆ ಆಗಿರೋ‌ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಲ್ಲ. ಸ್ವಾಮೀಜಿಯವರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ಮಾಡುತ್ತಾರೆ. ಕೆಟ್ಟದಾಗಿ ನಿಂದಿಸುತ್ತಾರೆ ಎಂದಷ್ಟೇ ಹೇಳಿದ್ದಾರೆ. ಪೊಲೀಸರಿಂದ ನ್ಯಾಯ ಸಿಗುತ್ತೆ ಎಂಬ ಖಾತ್ರಿ ಇದ್ದಿದ್ದರೆ ಆ ಮಕ್ಕಳು ನಮ್ಮ ತನಕ ಬರುತ್ತಿರಲಿಲ್ಲ.ಹೀಗಾಗಿ ಆ ಮಕ್ಕಳು ಬೇರೊಬ್ಬರ ಸಹಾಯ ಪಡೆದು ನಮ್ಮ ಬಳಿ ಬಂದಿದ್ದಾರೆ. ಮಕ್ಕಳು ಮಾನಸಿಕ ಸ್ಥಿತಿ ಧೃಡವಾಗಿಯೇನೂ ಇಲ್ಲ.ತುಂಬಾ ಹೆದರಿಕೆಯಿಂದಲೇ ನಮ್ಮ ಬಳಿ ಆಗಿರೋ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದಾರೆ. ಮಕ್ಕಳ ಹೇಳಿಕೆಯಲ್ಲಿ ಸತ್ಯ ಇರಬಹುದು, ಇಲ್ಲದೆಯೂ ಇರಬಹುದು. ಪ್ರಕರಣದ ಸೂಕ್ತ ತನಿಖೆ ಆಗಲಿ," ಎಂದು ಹೇಳಿದ್ದಾರೆ. 

ಇದನ್ನೂ ಓದಿ: Karnataka News Live Updates: ಹಣ್ಣು ನೀಡಲು ಹೋದ ಅಪ್ರಾಪ್ತೆಯರಿಗೆ ಶ್ರೀಗಳಿಂದ ಲೈಂಗಿಕ ಕಿರುಕುಳ

ಮಠದ ಪ್ರತಿಕ್ರಿಯೆ ಏನು?:

ಚಿತ್ರದುರ್ಗ ಮುರುಘಾಮಠ ಪರ ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ ನೀಡಿದ್ದು, ಮಠದ ವಿರೋಧಿ ಶಕ್ತಿಗಳಿಂದ ಮುರುಘಾಶ್ರೀ ವಿರುದ್ಧ ದೂರು ನೀಡಿದ್ದಾರೆ ಎಂದಿದ್ದಾರೆ. "ಮಾಧ್ಯಮದ ಮೂಲಕ ದೂರು ದಾಖಲಾಗಿದ್ದು ತಿಳಿದಿದೆ. ಸದ್ಯ ಮುರುಘಾಶ್ರೀಗಳು ಮಾಧ್ಯಮಕ್ಕೆ ಪ್ರತಿಕ್ರಿಯಿಸುವ ಸ್ಥಿತಿಯಲ್ಲಿ ಇಲ್ಲ. ಮುರುಘಾ ಶ್ರೀ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ. ಬಾಲಕಿಯರ ತಲೆಕೆಡಿಸಿ ಮುರುಘಾಶ್ರೀ ವಿರುದ್ಧ ದೂರು. ಬಾಲಕಿಯರ ದುರುಪಯೋಗ ಪಡಿಸಿಕೊಂಡು ದೂರು ನೀಡಲಾಗಿದೆ. ಈ ಬಗ್ಗೆ ಮುರುಘಾಶ್ರೀಗಳು ನಮ್ಮ ಬಳಿ ಹೇಳಿದ್ದಾರೆ. ಪ್ರಕರಣದ ಬಗ್ಗೆ ಕಾನೂನು ಹೋರಾಟ ಮಾಡಲಾಗುವುದು. ಸುಳ್ಳು ದೂರು ನೀಡಿದವರು ಕೇಸ್ ವಾಪಸ್ ಪಡೆಯಲಿ. ಮಠದ ಹಾಸ್ಟೆಲ್ ವಾರ್ಡನ್ ರಿಂದ ಮಾಜಿ ಶಾಸಕ ಎಸ್ ಕೆ ಬಸವರಾಜನ್ ವಿರುದ್ಧ ಕೇಸ್ ವಿಚಾರ ತಿಳಿದಿದೆ. ಈ ಬಗ್ಗೆ ಮಹಾತಿ ಇದೆ, ಪೂರ್ಣ ವಿವರ ತಿಳಿದಿಲ್ಲ," ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠ ಶ್ರೀಗಳಿಂದ ಲೈಂಗಿಕ ದೌರ್ಜನ್ಯ; ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ಶರಣರ ಮೇಲಿನ ಆರೋಪವೇನು?:
ಮುರುಗಾ ಶರಣರಿಗೆ ಪ್ರತಿ ವಾರ ಒಂದು ಹೆಣ್ಣು ಮಗು ಹಣ್ಣು ಹಂಪಲು ನೀಡಲು ಅವರ ಕೋಣೆಗೆ ಕಳಿಸಲಾಗುತ್ತಿತ್ತು. ಅಲ್ಲಿ ಶರಣರು ಇಷ್ಟವಿಲ್ಲ ಎಂದು ಹೇಳಿದರೂ ಹುಡುಗಿಯರ ಖಾಸಗಿ ಭಾಗಗಳನ್ನು ಮುಟ್ಟುತ್ತಿದ್ದರು. ಅದಾದ ನಂತರ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದರು. ಅದಾದ ನಂತರ ಸ್ವಚ್ಚಗೊಳಿಸಲು ಟಿಶ್ಯೂ ಬಳಸುತ್ತಿದ್ದರು. ವಿದ್ಯಾರ್ಥಿನಿಯರಿಗೆ ಸ್ನಾನದ ಕೋಣೆಗೆ ಹೋಗಿ ಸ್ನಾನ ಮಾಡಿ ಹೋಗುವಂತೆ ಹೇಳುತ್ತಿದ್ದರು ಎಂದು ಆರೋಪಿಸಲಾಗಿದೆ. ಪ್ರತಿನಿತ್ಯ ಒಂದು ಹುಡುಗಿಯನ್ನು ಆಪ್ತ ಸಹಾಯಕರು ಕರೆದುಕೊಂಡು ಹೋಗಿ ಶರಣರ ಜೊತೆ ಕೋಣೆಯಲ್ಲಿ ಕೂಡಿಹಾಕುತ್ತಿದ್ದರು. ಹಲವಾರು ಬಾರಿ ಈ ರೀತಿ ನಡೆದ ನಂತರ ಅದರ ವಿಡಿಯೋಗಳನ್ನು ಕೂಡ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ಶರಣರು ಅವರ ವಿರುದ್ಧದ ಯಾವುದೇ ವರದಿಯನ್ನು ಬಿತ್ತರಿಸದಂತೆ ಕೋರ್ಟ್‌ನಿಂದ ಆದೇಶ ಪಡೆದಿದ್ದಾರೆ. 

Follow Us:
Download App:
  • android
  • ios