ವಿಜಯಪುರ(ಜು.17):  ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಭಯಗೊಂಡ ನಗರದ ಜೋರಾಪೇಟ ಬಡಾವಣೆಯ ನಿವಾಸಿ 57 ವರ್ಷದ ವೃದ್ಧರೊಬ್ಬರು ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 

ಅನಾರೋಗ್ಯದ ಕಾರಣದಿಂದಾಗಿ 3 ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯರು ಕೋವಿಡ್‌ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆ.

ಪಿಯುಸಿಯಲ್ಲಿ ಫೇಲ್: ಮನನೊಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನ

ಆದರೆ ವೃದ್ಧ ಕೋವಿಡ್‌ ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಭಯದಿಂದಾಗಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.