* ಹಾವೇರಿ ತಾಲೂಕಿನ ದೇವಿಹೊಸೂರು ಗ್ರಾಮದಲ್ಲಿ ನಡೆದ ಘಟನೆ* ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ* ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು 

ಹಾವೇರಿ(ಮೇ.14): ಕೊರೋನಾ ಸೋಂಕಿನಿಂದ ಗುಣವಾಗಿ ಬಂದರೂ ಸೋಂಕಿತೆ ಎಂದು ಮನೆಗೆ ಸೇರಿಸಿಕೊಳ್ಳದ ಮಗ, ಸೊಸೆಯ ನಡೆಯಿಂದ ಬೇಸತ್ತು ತಾಯಿ ಇಲ್ಲಿನ ಹೆಗ್ಗೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Add Asianetnews Kannada as a Preferred SourcegooglePreferred

ತಾಲೂಕಿನ ದೇವಿಹೊಸೂರು ಗ್ರಾಮದ ಅಡಿವೆಕ್ಕ ಚನ್ನಪ್ಪ ಕಬ್ಬೂರ (80) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮೇ 8ರಂದು ಮಧ್ಯಾಹ್ನ 3ಕ್ಕೆ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡು ದೇವಿಹೊಸೂರು ಗ್ರಾಮದ ತಮ್ಮ ಮನೆಗೆ ಮರಳಿದ್ದರು. ಆದರೆ, ತಾಯಿಯನ್ನು ಕೊರೋನಾ ಸೋಂಕಿತೆ ಎಂದು ಮಗ ಹಾಗೂ ಸೊಸೆ ಮನೆಯೊಳಗೆ ಸೇರಿಸಿಕೊಳ್ಳದೆ ಹೊರ ಹಾಕಿದ್ದರು. ಇದರಿಂದ ಮನನೊಂದು ಅಡಿವೆಕ್ಕ ಮನೆಯಿಂದ ಹೊರ ಹೋಗಿ ನಾಪತ್ತೆಯಾಗಿದ್ದರು ಎಂದು ಆರೋಪಿಸಿ ಅವರ ಪುತ್ರಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. 

"

ನೂರಾರು ಕೊರೋನಾ ಸೋಂಕಿತರ ಪ್ರಾಣ ಉಳಿಸಿದ ಸಚಿವ ಬೊಮ್ಮಾಯಿ

ಘಟನೆ ನಡೆದು ನಾಲ್ಕು ದಿನದ ಬಳಿಕ ವೃದ್ಧೆ ಅಡಿವೆಕ್ಕ ಅವರ ಶವ ಹೆಗ್ಗೇರಿ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona